Homeಕರ್ನಾಟಕಮುಂದಿನ ತಿಂಗಳು ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ- ಸುರೇಶ್ ಕುಮಾರ್‌

ಮುಂದಿನ ತಿಂಗಳು ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ- ಸುರೇಶ್ ಕುಮಾರ್‌

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಮತ್ತು ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಕೊರೊನಾ ಎರಡನೇ‌ ಅಲೆಯ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಂತರ, ಕೆಲ ದಿನಗಳು ಮೊದಲೇ ತಿಳಿಸಿ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಪರೀಕ್ಷೆಗಳನ್ನು ಮುಂದೂಡಿರುವುದರಿಂದ ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಜೂನ್ 21 ರಿಂದ ಜುಲೈ 5ರವರೆಗೂ ಹತ್ತನೇ ತರಗತಿ ಪರೀಕ್ಷೆಗಳನ್ನು ನಿಗದಿ ಪಡಿಸಿ, ದಿನಾಂಕವನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಆದರೆ, ಪರೀಕ್ಷೆ ಮುಂದೂಡಬೇಕು ಎಂದು ಹಲವು ಮಂದಿ ಸರ್ಕಾರವನ್ನು ಕೇಳಿಕೊಂಡಿದ್ದರು.


ಇದನ್ನೂ ಓದಿ: ಕೊರೊನಾ ಆತಂಕ: ಯುಪಿಎಸ್‌ಸಿ ಪರೀಕ್ಷೆ ಅಕ್ಟೋಬರ್‌ 10ಕ್ಕೆ ಮುಂದೂಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...