Homeಕರ್ನಾಟಕರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

- Advertisement -
- Advertisement -

ಭಾರಿ ಕುತೂಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮತ ಎಣಿಕೆ ಆರಂಭವಾದಾಗಿನಿಂದ ಮುನ್ನಡೆ ಸಾಧಿಸಿದ್ದ ಬಿಜೆಪಿ 22ನೇ ಸುತ್ತಿನಲ್ಲಿ 31,088 ಮತಗಳ ಅಂತರ ಕಾಯ್ದುಕೊಂಡಿತ್ತು.

ವಿಜಯಪುರದ ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 93,380 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,292 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕೇವಲ 4,321 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 20ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರಿಂದ 28,462 ಮತಗಳ ಅಂತರ ಕಾಯ್ದುಕೊಂಡಿದ್ದರು.

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ನಾಯಕರು ಮತ್ತು ಕಾರ್ಯರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಚುನಾವಣೆಯ ಉಸ್ತುವಾರಿ ವಹಿಸಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಿಂದಗಿಗೆ ಬಂದಿದ್ದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

’ಸಿಂದಗಿಯಲ್ಲಿ ಜನ ಅಭಿವೃದ್ಧಿ ಬಯಸಿದ್ದಾರೆ. ಹಾಗಾಗಿ ಜನ ಮತ ಹಾಕಿದ್ದಾರೆ. ನಾವು ಕೂಡ ಭರವಸೆಯನ್ನು ನೀಡಿದ್ದೇವು. ಇದನ್ನು ಜನ ನಂಬಿಕೆ ಇಟ್ಟು ಆಡಳಿತ ಪಕ್ಷಕ್ಕೆ ಮತ ಹಾಕಿದ್ದಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

“ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿಂದಗಿ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌,  “ಸಿಂದಗಿಯಲ್ಲಿ ನಾವು 3ನೇ ಸ್ಥಾನದಲ್ಲಿದ್ದೇವು. ಕಾಂಗ್ರೆಸ್‌ಗೆ ಬರಬೇಕು ಅಂತ ಮನಗೊಳಿ ಅವರು ಆಸೆ ಪಟ್ಟು ಬಂದರು. ಹಾಗಾಗಿ ಅವರಿಗೆ ಟಿಕೆಟ್ ನೀಡಿದ್ದೇವು. ಅಲ್ಲಿ ಗೆಲುವು ದಾಖಲಿಸುವ ವಿಶ್ವಾಸವಿತ್ತು. ಜನ ಕಾಂಗ್ರೆಸ್‌ಗೆ ನೀಡಿರುವ ಮತ ನನಗೆ ಸಮಾಧಾನ ತಂದಿದೆ. ಸಿಂದಗಿಯಲ್ಲಿ ಸೋತಿದ್ದರು ಸಮಾಧಾನ ತಂದಿದೆ” ಎಂದಿದ್ದಾರೆ.

“ಒಳ್ಳೆ ಬೆಳವಣಿಗೆ ಆಗ್ತಿದೆ. 2 ಕ್ಷೇತ್ರದ ಚುನಾವಣೆ ಫಲಿತಾಂಶ ನೋಡಿದರೆ, ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಎರಡು ಕ್ಷೇತ್ರದಲ್ಲಿ ಒಂದು ದಳ ಮತ್ತು ಒಂದು ಬಿಜೆಪಿ ಸೀಟ್ ಇದ್ದವು . ದಳದ ಸೀಟ್ ಬಿಜೆಪಿ ಕಿತ್ತುಕೊಂಡಿದೆ. ಬಿಜೆಪಿ ಸೀಟ್ ಕಾಂಗ್ರೆಸ್ ಕಿತ್ತುಕಂಡಿದೆ. ಇದು ದೇಶಕ್ಕೆ ದೊಡ್ಡ ಸಂದೇಶ. ಮತದಾರ ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಅವರ ನಂಬಿಕೆ, ವಿಶ್ವಾಸ, ಪ್ರೀತಿ ಇಟ್ಟುಕೊಂಡು ಮುಂದೆ ಮತ್ತಷ್ಟು ಉತ್ತಮ ಕೆಲಸ ಮಾಡುತ್ತೇವೆ” ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಸಿಂದಗಿ ಉಪಚುನಾವಣಾ ಕಣದಲ್ಲಿದ್ದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ “ಚುನಾವಣೆ ಫಲಿತಾಂಶ ನಿರಾಸೆ ತಂದಿದೆ. ಎಂ. ಸಿ.ಮನಗೊಳಿ ಅವರ ಮಗನನ್ನು ಹೈಜಾಕ್ ಮಾಡಲಾಯಿತು. ನಮ್ಮ ಸಂಘಟನೆಯ ಕೊರತೆಯಿಂದ ಹಿನ್ನೆಡೆ ಆಯಿತು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಗುರುತಿಸುವದು ಕಷ್ಟ ಆಗಿದೆ. ಚುನಾವಣಾ ಫಲಿತಾಂಶ ಆಘಾತ ತಂದಿಲ್ಲ. ನಾನು ಉಪ ಚುನಾವಣೆಗೆ ಒತ್ತು ಕೊಡುವುದಿಲ್ಲ. ನನ್ನ ಗಮನ ಇರುವದು 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಆಡಳಿತಕ್ಕೆ ತರುವುದು ನಮ್ಮ ಗುರಿ. ನಮ್ಮ ಗಮನ ಇರುವುದು ಆ ಕಡೆಗೆ” ಎಂದು ಹೇಳಿದ್ದಾರೆ.

ಸಿಂದಗಿ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಎಂಬ ಧ್ಯೇಯ ಇಟ್ಟುಕೊಂಡು ಮತಯಾಚಿಸಿತ್ತು. ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಬೇಕು ಎಂದು ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ವಸತಿ ಸಚಿವ ವಿ.ಸೋಮಣ್ಣ, ಸಚಿವ ಲಕ್ಷ್ಮಣ್ ಸವದಿ ಆದಿಯಾಗಿ ಬಿಜೆಪಿ ನಾಯಕರು ಕಣದಲ್ಲಿ ತೊಡಗಿಸಿಕೊಂಡಿದ್ದರು.

ದಿವಂಗತ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮಲ್ಲಪ್ಪ ಮನಗೊಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ, ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿತ್ತು. ಬಿಜೆಪಿಯು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದ, ಕಳೆದ ಚುನಾವಣೆಯಲ್ಲಿ ಎಂ.ಸಿ.ಮನಗೊಳಿ ಎದುರು 9 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ರಮೇಶ್ ಭೂಸನೂರ್ ಅವರನ್ನು ಕಣಕ್ಕಿಳಿಸಿತ್ತು. ಈಗ ಭರ್ಜರಿ 31,088 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಜೆಡಿಎಸ್ ನಾಜಿಯಾ ಅಂಗಡಿಯವರನ್ನು ಕಣಕ್ಕಿಳಿಸಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್, ಮತ ವಿಭಜನೆಗೆ ಮುನ್ನುಡಿ ಹಾಡಲು ಯತ್ನಿಸಿದೆ ಎಂಬ ಆರೋಪವನ್ನು ಎದುರಿಸಿತ್ತು.


ಇದನ್ನೂ ಓದಿ: 29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...