Homeಮುಖಪುಟಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನಕ್ಕೆ ರಾಜ್ಯ ಕಾಂಗ್ರೆಸ್‌ ಒತ್ತಾಯ

ಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನಕ್ಕೆ ರಾಜ್ಯ ಕಾಂಗ್ರೆಸ್‌ ಒತ್ತಾಯ

ಕೊರೋನಾ ರೋಗ ಹರಡುವಿಕೆಯಲ್ಲಿ ಧರ್ಮವನ್ನು ಎಳೆದುಕೊಂಡು, ಒಂದು ಕೋಮಿನ ಜನರನ್ನು ಗುರಿಯಾಗಿಸಿ ಅವರ ವಿರುದ್ಧ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಿದ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಖಂಡನೀಯ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನ ಸೇರಿದಂತೆ ಸರ್ಕಾರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಕೆಪಿಸಿಸಿ ವತಿಯಿಂದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

WHO ಮಾರ್ಗಸೂಚಿಯ ಪ್ರಕಾರ ಕೊರೋನಾ ರೋಗ ನಿಯಂತ್ರಣಕ್ಕೆ ಪ್ರಾಥಮಿಕವಾಗಿ 10 ಲಕ್ಷ ಜನಸಂಖ್ಯೆಗೆ 10 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಬೇಕಾಗಿರುತ್ತದೆ. ಆದರೆ ಇಲ್ಲಿಯವರೆಗೂ ನಮ್ಮ ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಪ್ರತಿ 10 ಲಕ್ಷಕ್ಕೆ ಕೇವಲ 152 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದರೂ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಒಟ್ಟು 12 ಲಕ್ಷ ಕಿಟ್‌ಗಳ ಅಗತ್ಯವಿದ್ದು, ಈಗ ಕೇವಲ 2,27,000 ಕಿಟ್‍ಗಳಿವೆ, 5,46,721 ಎನ್-95 ಮಾಸ್ಕ್‌ಗಳು ಮತ್ತು 2,79,999 ಹೈಡ್ರಾಕ್ಸಿಕ್ಲೋರಾಕ್ಸಿನ್ ಮಾತ್ರೆಗಳಿವೆ. ಇವು ಯಾವುದಕ್ಕೂ ಸಾಲುವುದಿಲ್ಲ ಎಂಬಂತಾಗಿದೆ. ರಾಜ್ಯದಲ್ಲಿರುವ 18 ಕೊರೊನಾ ಪರೀಕ್ಷೆ ಲ್ಯಾಬ್‍ಗಳಲ್ಲಿ 9 ಲ್ಯಾಬ್‍ಗಳು ಬೆಂಗಳೂರಿನಲ್ಲಿಯೇ ಇವೆ ಎಂದು ಮನವಿ ಪತ್ರದಲ್ಲಿ ದೂರಲಾಗಿದೆ.

ವಿಶ್ವವ್ಯಾಪಿಯಾಗಿ ಹರಡಿರುವ ಕೊರೊನಾ ರೋಗವನ್ನು “ರಾಷ್ಟ್ರೀಯ ವಿಪತ್ತು” ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲು ಮತ್ತು ಕೊರೋನಾ ರೋಗ ನಿವಾರಣೆ ಹಾಗೂ ಲಾಕ್‍ಡೌನ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಎಲ್ಲಾ ರೀತಿಯ ಆರ್ಥಿಕ ಹಾಗೂ ಇನ್ನಿತರ ಸಹಾಯ ನೀಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರು, ಕೂಲಿಕೆಲಸಗಾರರು ಹಾಗೂ ಬಡವರಿಗೆ ತಲಾ ಪ್ರತಿ ತಿಂಗಳು ಕನಿಷ್ಠ 10 ಕೆ.ಜಿ. ಅಕ್ಕಿ, ಹಾಲು, 2 ಲೀಟರ್ ಅಡುಗೆ ಎಣ್ಣೆ, ತರಕಾರಿ ಮುಂತಾದ ಅಗತ್ಯ ಪದಾರ್ಥಗಳನ್ನು ಪ್ರತಿ ತಿಂಗಳ ಮೊದಲ ವಾರ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕೊರೋನಾ ರೋಗ ಹರಡುವಿಕೆಯಲ್ಲಿ ಧರ್ಮವನ್ನು ಎಳೆದುಕೊಂಡು, ಒಂದು ಕೋಮಿನ ಜನರನ್ನು ಗುರಿಯಾಗಿಸಿ ಅವರ ವಿರುದ್ಧ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಿದ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಖಂಡನೀಯ. ತಕ್ಷಣ ಸರ್ಕಾರ ತನ್ನ ನಿರ್ಧಾರ ಬದಲಿಸಿ, ಕೋಮುಪ್ರಚೋದನೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಸರ್ಕಾರದಿಂದ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್ ಮೇಲೆ ಆಡಳಿತ ಪಕ್ಷದ ನಾಯಕರುಗಳು ತಮ್ಮ ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‍ಗಳನ್ನು ಅಂಟಿಸಿ ಮತದಾರರನ್ನು ಓಲೈಸಿಕೊಳ್ಳುವ ಹೀನ ರಾಜಕೀಯ ಪ್ರವೃತ್ತಿಯನ್ನು ತೋರುತ್ತಿದ್ದಾರೆ. ಇಂತಹ ಸರ್ಕಾರಿ ಸೌಲಭ್ಯಗಳ ದುರುಪಯೋಗವನ್ನು ತಡೆಯಬೇಕು ಎಂದು ಆಗ್ರಹಿಸಲಾಗಿದೆ.

ಲಾಕ್‍ಡೌನ್ ಅವಧಿಯಲ್ಲಿ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಿದ ಕಾರಣ ನೋಂದಾಯಿತ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ, ಹಾಗಾಗಿ ಇವರಿಗೆ ಲಾಕ್‍ಡೌನ್ ಅವಧಿಯ ದಿನಗೂಲಿಯನ್ನು ಬ್ಯಾಂಕ್ ಖಾತೆಗಳಿಗೆ ಸರ್ಕಾರ ಜಮಾ ಮಾಡಬೇಕು ಮತ್ತು ಕೂಡಲೇ ನರೇಗಾ ಯೋಜನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸಕ್ಕೆ ಅವಕಾಶ ಮಾಡಿಕೊಡಬೇಕು. ಜೀವ ಮತ್ತು ಜೀವನವನ್ನು ಉಳಿಸಿ, ಬೆಳೆಸಲು, ಹದಗೆಟ್ಟಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೂಡಲೇ ರಾಜಕೀಯ ತಜ್ಞರು, ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳ ನಾಯಕರಗಳನ್ನು ಒಳಗೊಂಡಿರುವ ಕಾರ್ಯಪಡೆಯನ್ನು ರಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕೊರೊನಾ ರೋಗದ ಕಾರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಈ ಆತಂಕವನ್ನು ದೂರ ಮಾಡಲು ಸರ್ಕಾರ ಕೂಡಲೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳ ಹಾಗೂ ಪರೀಕ್ಷೆ ದಿನಾಂಕಕ್ಕೆ ಸಂಬಂಧಪಟ್ಟ ಸೂಕ್ತ ಮಾಹಿತಿ ನೀಡಬೇಕು ಎಂದು ಸಹ ತಿಳಿಸಲಾಗಿದೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...