Homeಕರ್ನಾಟಕಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ, ಸಿಪಿಐ(ಎಂ) ನಾಯಕ ಜಿ.ಸಿ ಬಯ್ಯಾರೆಡ್ಡಿ ನಿಧನ

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ, ಸಿಪಿಐ(ಎಂ) ನಾಯಕ ಜಿ.ಸಿ ಬಯ್ಯಾರೆಡ್ಡಿ ನಿಧನ

- Advertisement -
- Advertisement -

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ. ಬಯ್ಯಾರೆಡ್ಡಿ ಇಂದು (ಜ.4) ಮುಂಜಾನೆ 3ಗಂಟೆಗೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ದೀರ್ಘಕಾಲ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದ ಬಯ್ಯಾರೆಡ್ಡಿ ಕಳೆದೊಂದು ವಾರದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಬಯ್ಯಾರೆಡ್ಡಿ ಅವರ ಮೃತದೇಹವನ್ನು ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಸಿಪಿಐ(ಎಂ) ಪಕ್ಷದ ರಾಜ್ಯ ಕಚೇರಿ ಇಎಂಎಸ್ ಭವನದಲ್ಲಿ ಅಂತಿಮ‌ ದರ್ಶನಕ್ಕೆ ಇಡಲಾಗುವುದು ಎಂದು ಸಿಪಿಐ(ಎಂ) ರಾಜ್ಯ ಸಮಿತಿ ತಿಳಿಸಿದೆ.

ನಾಳೆ (ಜ.5) ಬೆಳಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಯ್ಯಾರೆಡ್ಡಿಯವರ ಸ್ವಗ್ರಾಮ ಗಡಿಗವಾರಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.

ಜನಚಳುವಳಿಯಲ್ಲಿ 5 ದಶಕ ಸೇವೆ: ಜಿ.ಸಿ.ಬಯ್ಯಾರೆಡ್ಡಿಯವರು ಜನಪರ ಚಳವಳಿಯಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. 1981ರಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮೂಲಕ ಸಾರ್ವಜನಿಕ ರಂಗ ಪ್ರವೇಶಿಸಿದ ಅವರು ಅವಿಭಜಿತ ಕೋಲಾರ ಜಿಲ್ಲೆಯ SFI ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿ ಕೋಲಾರದಲ್ಲಿ ವಿದ್ಯಾರ್ಥಿ ಚಳವಳಿ ಬಲಗೊಳಿಸಿದ್ದರು. 1987ರಲ್ಲಿ ಕಲಬುರ್ಗಿಯಲ್ಲಿ ನಡೆದ SFI ರಾಜ್ಯ ಸಮ್ಮೇಳನದಲ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. 1994ರ ವರೆಗೆ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಬಸ್ ಪಾಸ್ ರದ್ದತಿ ವಿರುದ್ದ, ಐಟಿಐ ವಿದ್ಯಾರ್ಥಿಗಳ ಸಮಸ್ಯೆಗಳ ವಿರುದ್ದ ಸಾವಿರಾರು ವಿದ್ಯಾರ್ಥಿಗಳನ್ನು ಬೀದಿಗಿಳಿಸಿದ್ದರು.

1993 ರಿಂದ ಚಿಂತಾಮಣಿಯಲ್ಲಿ ಪ್ರಾಂತರೈತ ಸಂಘದ ಕಾರ್ಯಚಟುವಟಿಕೆಗಳನ್ನು ಕ್ರಿಯಾಶೀಲಗೊಳಿಸಿದರು. 2000 ರಿಂದ 2013 ರ ವರೆಗೆ ಕರ್ನಾಟಕ ಪ್ರಾಂತರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, 2017ರಿಂದ ಇಲ್ಲಿಯವರೆಗೆ ರಾಜ್ಯಾಧ್ಯಕ್ಷರಾಗಿ ಅನೇಕ ರೈತ ಹೋರಾಟಗಳನ್ನು ಸಂಘಟಿಸಿದ್ದರು.

ಅವಿಭಜಿತ ಕೋಲಾರ ಜಿಲ್ಲೆಯ ರೈತರಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಪಾದಯಾತ್ರೆ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಚನ್ನರಾಯಪಟ್ಟಣದ ರೈತರ ಭೂ ಸ್ವಾಧೀನದ ವಿರುದ್ಧ ಪ್ರಭಲ ಹೋರಾಟವನ್ನು ಬಯ್ಯಾರೆಡ್ಡಿಯವರು ಸಂಘಟಿಸಿದ್ದರು. ಈ ಹೋರಾಟವು ಈಗ 1000 ದಿನಗಳನ್ನು ಪೊರೈಸಿದೆ. ಕರ್ನಾಟಕದ ರೈತ, ಕಾರ್ಮಿಕ ಚಳುವಳಿಯ ಐಕ್ಯತೆಗಾಗಿ ಶ್ರಮ ಹಾಕಿದ್ದರು. ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು. ಹೈನುಗಾರಿ, ಕುಕ್ಕುಟೋಧ್ಯಮ, ರೇಶ್ಮೆ ಬೆಳೆಗಾರರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1983 ರಲ್ಲಿ ಸಿಪಿಐ(ಎಂ)ಪಕ್ಷದ ಸದಸ್ಯತ್ವ ಪಡೆದ ಅವರು, 1991ರಿಂದ ಇಲ್ಲಿವರೆಗೆ ರಾಜ್ಯ ಸಮಿತಿ ಸದಸ್ಯರಾಗಿ , ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಅವರು ಸಿಪಿಐ(ಎಂ) ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ : ಹಿರಿಯ ಚಿಂತಕ, ಲೇಖಕ ಪ್ರೊ.ಮುಝಫ್ಫರ್ ಅಸ್ಸಾದಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...