Homeಕರೋನಾ ತಲ್ಲಣಶಿಕ್ಷಕರಿಗೆ ಮೂರು ವಾರಗಳ ರಜೆ ನೀಡಿದ ರಾಜ್ಯ ಸರ್ಕಾರ

ಶಿಕ್ಷಕರಿಗೆ ಮೂರು ವಾರಗಳ ರಜೆ ನೀಡಿದ ರಾಜ್ಯ ಸರ್ಕಾರ

ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ

- Advertisement -
- Advertisement -

ಕೋವಿಡ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ತೆರೆಯದಿರಲು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಶಿಕ್ಷಕರಿಗೆ ದಸರಾ ರಜೆ ನೀಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಶಿಕ್ಷಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಅ.30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿದೆ.

ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಗಳು ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಖಾತೆ CM of Karnataka ದಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಶಿಕ್ಷಕರಿಗೆ ರಜೆ ನೀಡಿರುವ ರಾಜ್ಯ ಸರ್ಕಾರದ ಆದೇಶವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

’ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ’ ಎಂದಿದ್ದಾರೆ. ಜೊತೆಗೆ ಸರ್ಕರದ ಆದೇಶದ ಪ್ರತಿಯನ್ನು ಶೇರ್‌ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಶಿವಶರಣೆ ಅಕ್ಕಮಹಾದೇವಿಯವರ ವಚನವನ್ನು ಟ್ವೀಟ್ ಮಾಡಿ ಗುರುಗಳಿಗೆ ನಮಿಸಿದ್ದಾರೆ.

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರವನ್ನು ಟೀಕಿಸಿದ್ದರು.


ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...