Homeಕರ್ನಾಟಕಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಸ್ಕೃತ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈಗಾಗಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿ ಜೊತೆಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಈ ಮಾರ್ಗಸೂಚಿ ಪ್ರಕಾರ ಅಗತ್ಯ ಸೇವೆ ಬಿಟ್ಟು ಉಳಿದೆಲ್ಲ ಅಂಗಡಿ ಮಳಿಗೆಗಳನ್ನು ಬಂದ್ ಮಾಡಲು ಆದೇಶಿಸಿಸಲಾಗಿದೆ.

ಶಾಲಾ- ಕಾಲೇಜುಗಳು, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್‌ಗಳು, ಜಿಮ್​ಗಳು, ಯೋಗ ಕೇಂದ್ರಗಳು, ಸ್ಪಾಗಳು, ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂ, ಈಜುಕೊಳಗಳು, ಉದ್ಯಾನಗಳು, ಕ್ಲಬ್‌ಗಳು, ಬಾರ್‌ಗಳಿಗೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ರೆಸ್ಟೋರೆಂಟ್ ಮತ್ತು ಹೋಟೆಲ್​ಗಳಲ್ಲಿ ಪಾರ್ಸೆಲ್‌ಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ 50 ಮಂದಿ, ಅಂತ್ಯ ಸಂಸ್ಕಾರದಲ್ಲಿ 20 ಜನರಿಗಷ್ಟೇ ಭಾಗವಹಿಸಲು ಅವಕಾಶ. ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಪಡಿತರ ಅಂಗಡಿಗಳು (ಪಿಡಿಎಸ್) ಸೇರಿದಂತೆ, ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್‌ಗಳು, ಮಾಂಸ ಮತ್ತು ಮೀನಿನ ಅಂಗಡಿ ತೆರೆಯಲು ಅನುಮತಿಸಲಾಗಿದೆ.  ಮದ್ಯದಂಗಡಿಗಳು ಮತ್ತು ಬಾರ್‌ಗಳಲ್ಲಿ ಪಾರ್ಸೆಲ್​ಗೆ ಅನುಮತಿ. ಬ್ಯಾಂಕುಗಳು, ವಿಮಾ ಕಚೇರಿಗಳು ಮತ್ತು ಎಟಿಎಂ, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರಿಗೆ ಅನುಮತಿ ನೀಡಲಾಗಿದೆ.

ಐಟಿ-ಬಿಟಿ ವಲಯದ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂಗೆ ಅವಕಾಶ, ಪೆಟ್ರೋಲ್, ಡೀಸೆಲ್ ಬಂಕ್‌ಗಳು, ಅನಿಲ ಕೇಂದ್ರಗಳು ಸಂಪೂರ್ಣವಾಗಿ ಕಾರ್ಯಾಚರಣೆಯಲ್ಲಿ ಇರಲಿವೆ. ಇ-ಕಾಮರ್ಸ್ ಮೂಲಕ ಎಲ್ಲ ವಸ್ತುಗಳ ಡೆಲಿವರಿಗೆ ಅವಕಾಶ ನೀಡಲಾಗಿದೆ. ಕಟಿಂಗ್ ಶಾಪ್, ಸಲೂನ್, ಬ್ಯೂಟಿ ಪಾರ್ಲರ್‌ಗಳಿಗೆ ಅನುಮತಿ ನೀಡಲಾಗಿದೆ.

ಭಾರತ ಸರ್ಕಾರದ ಎಲ್ಲಾ ಕಚೇರಿಗಳು, ಅದರ ಸ್ವಾಯತ್ತ, ಅಧೀನ ಕಚೇರಿಗಳು, ರಕ್ಷಣಾ, ತುರ್ತು ಮತ್ತು ಅಗತ್ಯ ಸೇವೆಗಳು ಮತ್ತು ಸಾರ್ವಜನಿಕ ನಿಗಮಗಳು ಕೊರೊನಾ ಮಾರ್ಗಸೂಚಿಗಳ ಪ್ರಕಾರ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...