Homeಕರ್ನಾಟಕಕನ್ನಡ ರಾಜ್ಯೋತ್ಸವ: ಒಂದು ವಾರ ’ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ

ಕನ್ನಡ ರಾಜ್ಯೋತ್ಸವ: ಒಂದು ವಾರ ’ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸೃತಿ ಇಲಾಖೆಯು ಕನ್ನಡಕ್ಕಾಗಿ ನಾವು ಅಭಿಯಾನ ಆರಂಭಿಸಿದೆ. ಇದರ ಅಡಿಯಲ್ಲಿ ಒಂದು ವಾರ ‘ಮಾತಾಡ್ ಮಾತಾಡ್ ಕನ್ನಡ’ ಎಂಬ ಅಭಿಯಾನ ನಡೆಯಲಿದೆ ಎಂದು ಸಚಿವ ಸುನೀಲ್ ಕುಮಾರ್‌ ತಿಳಿಸಿದ್ದಾರೆ.

‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ ಅಕ್ಟೋಬರ್‌ 24 ರಿಂದ 30ರ ವರೆಗೆ ನಡೆಯಲಿದೆ. ಈ ವೇಳೆ ರಾಜ್ಯದಲ್ಲಿ ಇರುವ ಕನ್ನಡಿಗರು, ಕನ್ನಡೇತರ ಭಾಷಿಕರು ಪ್ರೀತಿ ಮತ್ತು ಅಭಿಮಾನದಿಂದ ಕನ್ನಡದಲ್ಲಿ ಮಾತನಾಡಬೇಕು. ಆದರೆ, ಇದು ಕಡ್ಡಾಯವಲ್ಲ ಎಂದು ಮಾಹಿತಿ ನೀಡಿದ್ದಾರೆ.

ಒಂದು ವಾರಗಳ ಕಾಲ ಕನ್ನಡಮಯ ವಾತಾವರಣ ಸೃಷ್ಟಿಸಲು ಹಲವು ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಕನ್ನಡದಲ್ಲೇ ಮಾತನಾಡುವುದು, ಕನ್ನಡದಲ್ಲೇ ವ್ಯವಹರಿಸುವುದು,  ಕನ್ನಡೇತರರಿಗೆ ಕನ್ನಡ ಕಲಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

 ಇದನ್ನೂ ಓದಿ: ʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಳಸಲು ಕರೆ ನೀಡಿದ್ದಾರೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬಂದಿರುವ ಜನರು ಕನಿಷ್ಠ 100 ಪದಗಳನ್ನು ಕಲಿತು ಬಳಸುವಂತೆ ಸಚಿವರು ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಅ. 28 ರಂದು ಒಂದು ಲಕ್ಷ ಕಂಠಗಳಲ್ಲಿ ಒಂದು ಸಾವಿರ ಕಡೆಗಳಲ್ಲಿ ಕನ್ನಡದ ಮೂರು ಹಾಡುಗಳ ಸಾಮೂಹಿಕ ಗಾಯ ನಡೆಸಲಾಗುತ್ತದೆ. ಅನ್ಯಭಾಷೆಯ ಪದಗಳನ್ನು ಒಂದೂ ಬಳಸದೇ ಕನ್ನಡದಲ್ಲಿ ನಿರರ್ಗಳವಾಗಿ ನಾಲ್ಕು ನಿಮಿಷ ಕಾಲ‌ ನಾಡು-ನುಡಿಯ ಪರಂಪರೆ ಸಂಬಂಧಿಸಿದ ವಿಷಯಗಳ ಕುರಿತು ವಿಡಿಯೋ ಕಳುಹಿಸುವ ಸ್ಫರ್ಧೆ ನಡೆಸಲಾಗುತ್ತದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಅಭಿಯಾನದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಕರ್ನಾಟಕದ ಹಿರಿಮೆ ಬಿಂಬಿಸುವ ನಾಟಕಗಳು, ನೃತ್ಯ, ಸಂಗೀತ ಕಾರ್ಯಕ್ರಮಗಳನ್ನು ಒಳಗೊಂಡ ಕನ್ನಡ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ.


ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...