Homeಕರ್ನಾಟಕಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

ಇಂದೇ ಸರ್ಕಾರ ಪತನ, ಶಾಸಕರ ಅನರ್ಹತೆ? ಗುರುವಾರದವರೆಗೆ ಜಗ್ಗಲು ಸ್ಪೀಕರ್‍ಗೆ ದೇವೇಗೌಡ ಮನವಿ!

- Advertisement -
- Advertisement -

ಇಂದು ವಿಶ್ವಾಸಮತದ ಪ್ರಕ್ರಿಯೆ ಪೂರ್ಣಗೊಳ್ಳುವ ಎಲ್ಲ ಸಾಧ್ಯತೆಗಳಿದ್ದು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಶುಕ್ರವಾರ ಸ್ಪೀಕರ್ ರಮೇಶಕುಮಾರ್ ಸೇರಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಸೋಮವಾರ ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ಮುಗಿಯಲಿದೆ ಎಂದಿರುವುದನ್ನು ಗಮನಿಸಬೇಕು.

ಕಾಂಗ್ರೆಸ್ ಪಕ್ಷಕ್ಕೆ ಈಗ ಸದನವನ್ನು ಉನ್ನಷ್ಟು ಮುಂದಕ್ಕೆ ಜಗ್ಗುವ ಯಾವ ಇರಾದೆಯೂ ಉಳಿದುಕೊಂಡಿಲ್ಲ. ಆದರೆ ಜೆಡಿಎಸ್ ಪಾಳೆಯಕ್ಕೆ ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠರು ಹೇಗಾದರೂ ಸದನವನ್ನು ಗುರುವಾರದವರೆಗೆ ನಡೆಯುವ ಹಾಗೆ ಮಾಡಿ, ಅಷ್ಟರಲ್ಲಿ ಹಲವು ಅತೃಪ್ತರ ವಿಶ್ವಾಸವನ್ನು ಗಳಿಸಿ ಸರ್ಕಾರ ಉಳಿಸಿಕೊಳ್ಳುವ ಬಯಕೆ ಇದೆ. ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಾದರೂ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕು ಎಂಬ ನಿರ್ಧಾರಕ್ಕೆ ಅವರಿಬ್ಬರು ಬಂದಂತಿದೆ.

ಇಂದು ಬರಬಹುದಾದ ಸುಪ್ರಿಂಕೋರ್ಟ್ ತೀರ್ಪು ಅಥವಾ ಸೂಚನೆಯೂ ವಿಶ್ವಾಸಮತ ಇಂದೇ ಆಗಬೇಕೋ ಅಥವಾ ಚರ್ಚೆಗೆ ಅವಕಾಶ ಇನ್ನಷ್ಟು ಸಿಗಬೇಕೋ ಎಂಬುದನ್ನು ನಿರ್ಧರಿಸಲಿದೆ. ಸಿದ್ದರಾಮಯ್ಯ ಎತ್ತಿರುವ ಕ್ರಿಯಾಲೋಪದ ಕುರಿತು ಇಂದು ಸ್ಪೀಕರ್ ಪಾಯಿಂಟ್ ಆಫ್ ಆರ್ಡರ್ ನೀಡಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ತಮ್ಮ ಪಕ್ಷದ ಶಾಸಕರಿಗೆ ವಿಪ್ ನೀಡುವ ತಮ್ಮ ಹಕ್ಕಿಗೆ ಕಳೆದ ವಾರದ ಸುಪ್ರಿಂಕೋರ್ಟ್ ಆದೇಶ ಧಕ್ಕೆ ತಂದಿದೆ ಎಂದು ಗುರುವಾರವೇ ಸಿದ್ದರಾಮಯ್ಯ ಕ್ರಿಯಾಲೋಪ ಎತ್ತಿದ್ದರು.

ಇನ್ನೊಂದು ಬೆಳವಣಿಗೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸ್ಪೀಕರ್ ರಮೇಶಕುಮಾರ್ ಅವರಿಗೆ ಗುರುವಾರದವರೆಗೆ ಗ್ರಹಗತಿ ಸರಿಯಿಲ್ಲ, ಅಲ್ಲಿವರೆಗೆ ವಿಶ್ವಾಸಮತ ಮುಂದಕ್ಕೆ ಹೋಗುವಂತೆ ಮಾಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸ್ಪೀಕರ್ ಒಪ್ಪಿಲ್ಲವೆಂಬ ಮಾತೂ ಕೇಳಿ ಬರುತ್ತಿದೆ. ಇಂದೇ ವಿಶ್ವಾಸ ಮತಯಾಚನೆ ಪ್ರಕ್ರಿಯೆ ನಡೆಯಬೇಕು ಎಂದು ಇಬ್ಬರು ಪಕ್ಷೇತರ ಶಾಸಕರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದೇ ನಡೆದು ಸುಪ್ರೀಂ ಕೋರ್ಟ್ ಕೂಡ ಇಂದೇ ವಿಶ್ವಾಸಮತ ಮುಗಿಯಲಿ ಎಂದು ಸೂಚಿಸಲೂಬಹುದು.

ಈ ಎಲ್ಲ ಕಾರಣಗಳಿಂದಾಗಿ ಇಂದು ವಿಶ್ವಾಸಮತವನ್ನು ಮತಕ್ಕೆ ಹಾಕುವ ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಬಹುಮತ ಇಲ್ಲದ ಕುಮಾರಸ್ವಾಮಿ ನೇತೃತ್ವದ 14 ತಿಂಗಳ ಸರ್ಕಾರ ಪತನವಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಗೆಯೇ ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಶಾಸಕತ್ವದಿಂದ ಅನರ್ಹಗೊಳಿಸುವ ಪ್ರಕ್ರಿಯೆಯೂ ಇಂದು ಅಥವಾ ನಾಳೆ ಜರುಗುವುದು ಪಕ್ಕಾ ಆಗಿದೆ. ವಿಪ್ ಮಾರ್ಗದ ಮೂಲಕ, ಅದಾಗದಿದ್ದರೆ ಏನೆಲ್ಲ ಸಾಧ್ಯವೋ ಆ ಮಾರ್ಗ ಬಳಸಿ ಅವರನ್ನೆಲ್ಲ ಅನರ್ಹಗೊಳಿಸಲು ಕಾಯಲಾಗುತ್ತಿದೆ.

ಸದ್ಯ 14 ತಿಂಗಳಿಂದ ಪ್ರತಿಕ್ಷಣವೂ ಮುಖ್ಯಮಂತ್ರಿ ಆಗುವ ಕನಸಿನಲ್ಲೇ ಬಾಳುತ್ತಿರುವ ಯಡಿಯೂರಪ್ಪನವರ ಇಷ್ಟಾರ್ಥ ಕೂಡಿಬರುವ ದಿನ ಹತ್ತಿರದಲ್ಲಿದೆ ಇದ್ದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...