Homeಕರ್ನಾಟಕಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 75 ವರ್ಷಗಳಲ್ಲಿ ಕೇಳಿರದ ಪ್ರಕರಣ ಇದಾಗಿದ್ದು, ನೂರಾರು ಸಂಖ್ಯೆಯಲ್ಲಿರುವ ಅತ್ಯಾಚಾರ ಸಂತ್ರಸ್ತೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ ಎಂದರು.

“ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರು ತಮಗಾದ ಅನ್ಯಾಯದ ಬಗ್ಗೆ ಸರ್ಕಾರಕ್ಕೆ ತಿಳಿಸಬೇಕು. ಜೆಡಿಎಸ್‌ ಜೊತೆಗೆ ಮೈತ್ರಿ ಹೊಂದಿರುವ ಬಿಜೆಪಿ ಪ್ರಜ್ವಲ್‌ ಬಗ್ಗೆ ಮಾಹಿತಿಯಿದ್ದರೂ ಏಕೆ ತಿಳಿಸಲಿಲ್ಲ? ಪ್ರಧಾನಿ ನರೇಂದ್ರ ಮೋದಿ ಏಕೆ ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸಲಿಲ್ಲ? ಅವರೇಕೆ ಬ್ಲೂ ಕಾರ್ನರ್‌ ನೋಟಿಸ್‌ ಮೂಲಕ ಆರೋಪಿಯನ್ನು ಕರೆತರಲಿಲ್ಲ?” ಎಂದು ಸುರ್ಜೇವಾಲ ಪ್ರಶ್ನಿಸಿದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ಪತ್ತೆಗೆ ಸಿಬಿಐ ಮೂಲಕ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವುದಾಗಿ ತಿಳಿಸಿದರು.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read