Homeಕರ್ನಾಟಕಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ (ಸಿ-ಸೆಕ್ಷನ್) ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುಲು ವಿಶೇಷ ಕಾರ್ಯಕ್ರಮ ಅಥವಾ ಯೋಜನೆ ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ (ಡಿ.17) ಹೇಳಿದ್ದಾರೆ.

ವಿಧಾನಪರಿಷತ್‌ನ ಚಳಿಗಾಲದ ಅಧಿವೇಶನದಲ್ಲಿ ಎಂಎಲ್‌ಸಿ ಜಗದೇವ್ ಗುತ್ತೇದಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಸಿಸೇರಿಯ್ ಹೆರಿಗೆ ಅಥವಾ ಸಿ-ಸೆಕ್ಷನ್ ಪ್ರಮಾಣ 2021-2022 ರಲ್ಲಿ ಶೇಖಡ 35 ಇತ್ತು. ಇದು 2022-2023 ರಲ್ಲಿ ಶೇ. 38ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಈ ಪ್ರಮಾಣ ಶೇ.46ರಷ್ಟಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್ ಪ್ರಮಾಣ ಶೇ.61ರಷ್ಟು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಆದಾಯ ಪಡೆಯಲು ಮತ್ತು ಸುಲಭವಾಗಿ ನಿರ್ವಹಿಸುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಹೆಚ್ಚು ಸಿಸೇರಿಯನ್ ಹೆರಿಗೆಗಳನ್ನು ಮಾಡುತ್ತಿವೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯ ಎಂದು ಸಚಿವರು ಹೇಳಿದ್ದಾರೆ.

ಸಿಸೇರಿಯನ್ ಹೆರಿಗೆ ತಡೆಯಲು ಜಾರಿಗೊಳಿಸುವ ಕಾರ್ಯಕ್ರಮದ ಸ್ವರೂಪ ಬಹುತೇಕ ಅಂತಿಮಗೊಂಡಿದೆ. ಮುಂದಿನ ತಿಂಗಳು ಅದನ್ನು ಪ್ರಕಟಿಸಲಾಗುವುದು. ಸಾಮಾನ್ಯ ಹೆರಿಗೆಗೆ ಹೆಚ್ಚಿನ ಆದ್ಯತೆ ಕೊಟ್ಟು, ಅತಿ ಅಗತ್ಯ ಸಂದರ್ಭಗಳಲ್ಲಿ ಮಾತ್ರ ಸಿಸೇರಿಯನ್ ಮಾಡಲು ಆಸ್ಪತ್ರೆಗಳ ಸಿಬ್ಬಂದಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಹಲವಾರು ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯುವ ಮೂಲಕ ಬಾಣಂತಿಯರ ಆರೈಕೆಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸರ್ಕಾರದ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಚಿವರು ತನ್ನ ಭಾಷಣದಲ್ಲಿ ಒತ್ತಿ ಹೇಳಿದ್ದಾರೆ.

ಪ್ರಸ್ತುತ, ಯೋಜಿತ 88 ಆಸ್ಪತ್ರೆಗಳಲ್ಲಿ 60 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ 24/7 ಸಮಗ್ರ ಪ್ರಸೂತಿ ಸೇವೆಗಳನ್ನು ನೀಡಲಾಗುತ್ತಿದೆ. ಸಿಸೇರಿಯನ್‌ಗಿಂತ ಸಾಮಾನ್ಯ ಹೆರಿಗೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ 46 ವ್ಯಕ್ತಿಗಳನ್ನು ಬಂಧಿಸಲಾಗಿದೆ. 2023-24 ರಲ್ಲಿ ರಾಜ್ಯದಲ್ಲಿ ಎಂಟು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ವರದಿಯಾಗಿದ್ದು, ಸ್ಕ್ಯಾನಿಂಗ್ ಸೆಂಟರ್‌ಗಳು ಮತ್ತು ಆಸ್ಪತ್ರೆಗಳ ಮೇಲೆ ಹೆಚ್ಚಿನ ಕಣ್ಗಾವಲು ಇಟ್ಟಿರುವುದು ಈ ಅಪರಾಧಗಳ ಪತ್ತೆಗೆ ಕಾರಣವಾಯಿತು ಎಂದು ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದ್ದಾರೆ.

2018 ರಿಂದ ‘ಬಾಲಿಕಾ’ ಆನ್‌ಲೈನ್ ಸಾಫ್ಟ್‌ವೇರ್ ಮೂಲಕ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ನೋಂದಣಿಯನ್ನು ಕಡ್ಡಾಯಗೊಳಿಸಿದ್ದು, ಸರ್ಕಾರವು ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ (ಪಿಸಿಪಿಎನ್‌ಡಿಟಿ) ಕಾಯ್ದೆಯಡಿಯಲ್ಲಿ ಶಾಸನಬದ್ಧ ಸಮಿತಿಗಳನ್ನು ಜಿಲ್ಲೆಗಳಾದ್ಯಂತ ರಚಿಸಿದೆ. ಭ್ರೂಣಹತ್ಯೆ ತಡೆಗಟ್ಟಲು ಗ್ರಾಮ ಮಟ್ಟದಲ್ಲಿ ಲಿಂಗ ಅನುಪಾತದ ಡೇಟಾವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ನಕಲಿ ವೈದ್ಯರ ಸಮಸ್ಯೆಗೆ ಸಂಬಂಧಿಸಿದಂತೆ ಮಾತನಾಡಿದ ದಿನೇಶ್ ಗುಂಡೂರಾವ್, ಕಳೆದ ಮೂರು ವರ್ಷಗಳಲ್ಲಿ ಕೋಲಾರ ಜಿಲ್ಲೆಯೊಂದರಲ್ಲೇ 134 ನಕಲಿ ಕ್ಲಿನಿಕ್‌ಗಳು ಪತ್ತೆಯಾಗಿವೆ ಎಂದು ತಿಳಿಸಿದರು. ಸ್ಥಳೀಯ ಸಮುದಾಯದ ಮುಖಂಡರು, ಧಾರ್ಮಿಕ ವ್ಯಕ್ತಿಗಳು ಮತ್ತು ಕೆಲವು ಶಾಸಕರ ವಿರೋಧವನ್ನು ಉಲ್ಲೇಖಿಸಿದ ಅವರು, ಆಪಾದಿತ ನಕಲಿ ವೈದ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಎದುರಿಸುತ್ತಿರುವ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...