Homeಮುಖಪುಟಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ - ಬಿಜೆಪಿಗೆ ಮುಖಭಂಗ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ - ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ - ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ಏಪ್ರಿಲ್ 27 ರಂದು 8 ಜಿಲ್ಲೆಗಳಲ್ಲಿ ನಡೆದಿದ್ದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿಗಳ ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಜೆಡಿಎಸ್ ಎರಡನೇ ಸ್ಥಾನ ಪಡೆದಿದ್ದು ಬಿಜೆಪಿಗೆ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ – ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ – ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಉಳಿದಂತೆ ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರ ಪಡೆದರೆ ಬಿಜೆಪಿ ಕೇವಲ ಮಡಿಕೇರಿ ನಗರಸಭೆಗೆ ಮಾತ್ರ ಸೀಮಿತವಾಗಿದೆ.

ಫಲಿತಾಂಶದ ಪೂರ್ಣ ವಿವರ ಹೀಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 39: ಕಾಂಗ್ರೆಸ್-21, ಬಿಜೆಪಿ-13, ಜೆಡಿಎಸ್-00, ಪಕ್ಷೇತರ-05

ಬೀದರ್ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-15, ಬಿಜೆಪಿ-08, ಜೆಡಿಎಸ್-07 ಪಕ್ಷೇತರ-05

ರಾಮನಗರ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-19, ಬಿಜೆಪಿ-00, ಜೆಡಿಎಸ್-11, ಪಕ್ಷೇತರ-01

ಭದ್ರಾವತಿ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-18, ಬಿಜೆಪಿ-04, ಜೆಡಿಎಸ್-11, ಪಕ್ಷೇತರ-01

ಚನ್ನಪಟ್ಟಣ ನಗರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-07, ಬಿಜೆಪಿ-07, ಜೆಡಿಎಸ್-16, ಪಕ್ಷೇತರ-01

ಮಡಿಕೇರಿ ನಗರಸಭೆ – ಬಿಜೆಪಿ

ಒಟ್ಟು ಸ್ಥಾನಗಳು 23: ಕಾಂಗ್ರೆಸ್-01, ಬಿಜೆಪಿ-16, ಜೆಡಿಎಸ್-01, ಎಸ್‌ಡಿಪಿಐ-05 ಪಕ್ಷೇತರ-00

ಬೇಲೂರು ಪುರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-17, ಬಿಜೆಪಿ-01, ಜೆಡಿಎಸ್-05, ಪಕ್ಷೇತರ-00

ವಿಜಯಪುರ ಪುರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-06, ಬಿಜೆಪಿ-01, ಜೆಡಿಎಸ್-14, ಪಕ್ಷೇತರ-02

ಗುಡಿಬಂಡೆ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 11: ಕಾಂಗ್ರೆಸ್-06, ಬಿಜೆಪಿ-00, ಜೆಡಿಎಸ್-02, ಪಕ್ಷೇತರ-03

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 15: ಕಾಂಗ್ರೆಸ್-09, ಬಿಜೆಪಿ-06, ಜೆಡಿಎಸ್-00, ಪಕ್ಷೇತರ-00

ಒಟ್ಟು 266 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 119 ಸ್ಥಾನಗಳಲ್ಲಿ ಜಯಗಳಿಸಿದ್ದು ಒಟ್ಟು 44.73% ಮತಗಳನ್ನು ಪಡೆದಿದೆ. ಜೆಡಿಎಸ್ 67 ಸ್ಥಾನಗಳಲ್ಲಿ ಜಯಿಸಿದ್ದು, 25.18% ಮತಗಳನ್ನು ಪಡೆದಿದೆ. ಹಾಗೆಯೇ ಬಿಜೆಪಿ 56 ಸ್ಥಾನಗಳಲ್ಲಿ ಜಯಗಳಿಸಿದ್ದು, 21.05% ರಷ್ಟು ಮತಗಳನ್ನು ಪಡೆದಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶುಬ ಸೂಚನೆ, ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ವರ್ತಿಸಿದರೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

  2. ವಿರೋದ ಪಕ್ಷಗಳು ಅವರ ಜವಬ್ದಾರಿಯನ್ನು ಅರಿತು ಒಗ್ಗಟ್ಡಿನಿಂದ ಜನಪರವಾಗಿ ಜನರಿಗೋಸ್ಕರ ಕೆಲಸ ಮಾಡಬೇಕು ಹಾಗ ಮಾತ್ರ ಈ ಮನುವಾದಿಗಳನ್ನು ೦ ಲೆವೆಲ್ಗೆ ತಂದು ಕೂರಿಸಬಹುದು ಜನರ ನಡುವೆ ಹೆಚ್ಚು ಹೆಚ್ಚು ಕೆಲಸ ಮಾಡಬೇಕು.

    ಧನರಾಜು ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...