Homeಕರ್ನಾಟಕವಿಧಾನಸಭೆ ಅಧಿವೇಶನ: 'ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ' ಸೇರಿ 2 ವಿಧೇಯಕ ಅಂಗೀಕಾರ

ವಿಧಾನಸಭೆ ಅಧಿವೇಶನ: ‘ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ’ ಸೇರಿ 2 ವಿಧೇಯಕ ಅಂಗೀಕಾರ

- Advertisement -
- Advertisement -

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2024 ಮತ್ತು ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024ನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ವಿಧಾನಸಭೆ ಅಧಿವೇಶನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ 2024ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಭೌಗೋಳಿಕ ವಿಸ್ತೀರ್ಣ ಸಂಬಂಧ ಅನುಕೂಲವಾಗುವ ತಿದ್ದುಪಡಿ ಇದಾಗಿದೆ. ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ.

ಸಹಕಾರ ಸಂಘಗಳ ಮಸೂದೆಗೆ ಒಪ್ಪಿಗೆ

ಪ್ರತಿಪಕ್ಷಗಳ ವಿರೋಧದ ಮಧ್ಯೆ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಸಂಸ್ಥೆಗಳಲ್ಲಿ ಮೀಸಲಾತಿ ಆಧಾರದಲ್ಲಿ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸುವ ಈ ಮಸೂದೆಗೆ ಮೂರು ಪಕ್ಷಗಳ ಕೆಲ ಶಾಸಕರು ಕೂಡ ವಿರೋಧವನ್ನು ವ್ಯಕ್ತಪಡಿಸಿದ್ದರು.

ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂರು ಮಂದಿ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಲು ಹಾಗೂ ನಾಮ ನಿರ್ದೇಶನದಲ್ಲೂ ಮೀಸಲಾತಿ ಕಲ್ಪಿಸುವ ವಿಧೇಯಕ ಇದಾಗಿದೆ. ಈ ತಿದ್ದುಪಡಿ ಬಿಲ್‌ನಿಂದಾಗಿ ಇನ್ನು ಮುಂದೆ ಸಹಕಾರ ಸಂಘಗಳ ಸಾಮಾನ್ಯ ಸಭೆಯಲ್ಲಿ ಭಾಗವಹಿಸದವರು ಯಾವುದೇ ವಹಿವಾಟು ನಡೆಸದವರೂ ಸೇರಿದಂತೆ ಎಲ್ಲಾ ಸದಸ್ಯರಿಗೂ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಮಸೂದೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಮಂಡಿಸಿದ್ದು, ಸಹಕಾರ ಆಂದೋಲನ ಜನರ ಆಂದೋಲನ ಆಗಬೇಕು ಎಂಬುದು ತಿದ್ದುಪಡಿಯ ಹಿಂದಿನ ಉದ್ದೇಶ ಎಂದು ಹೇಳಿದ್ದಾರೆ. ಎಲ್ಲಾ ಸಹಕಾರ ಸಂಸ್ಥೆಗಳಲ್ಲೂ ಮೀಸಲಾತಿ ಕಲ್ಪಿಸುವುದಿಲ್ಲ. ಸರ್ಕಾರದ ನೆರವು ಪಡೆದ ಸಂಸ್ಥೆಗಳಿಗೆ ಸೀಮಿತ. ಮೀಸಲಾತಿ ನೀಡುವಾಗ ಯಾವ ಸಮಾಜಕ್ಕೆ ಇಲ್ಲಿಯವರೆಗೆ ಪ್ರಾತಿನಿಧ್ಯ ಸಿಕ್ಕಿಲ್ಲವೋ ಅವರಿಗೆ ಆದ್ಯತೆ ನೀಡಲಾಗುವುದು. ಕೆಲವು ಸಹಕಾರ ಸಂಸ್ಥೆಗಳ ಸ್ಥಿತಿ  ತೀರಾ ಹದಗೆಟ್ಟಿವೆ ಎಂದು ಹೇಳಿದ್ದಾರೆ.

ಎಸ್‌.ಟಿ. ಸೋಮಶೇಖರ್‌, ಆರಗ ಜ್ಞಾನೇಂದ್ರ, ಬಸನಗೌಡ ಪಾಟೀಲ ಯತ್ನಾಳ, ಜೆಡಿಎಸ್‌ನ ಜಿ.ಟಿ. ದೇವೇಗೌಡ ಮತ್ತು ಜಿ.ಡಿ. ಹರೀಶ್‌ ಗೌಡ ಮೀಸಲಾತಿ ಪ್ರಸ್ತಾವವನ್ನು ಕೈಬಿಡುವಂತೆಯೂ ಆಗ್ರಹಿಸಿದ್ದರು. ಈ ಬಿಲ್ ನಿಂದ ಸಹಕಾರ ಸಂಘಗಳ ಮೇಲೆ ಸರ್ಕಾರ ಹಸ್ತಕ್ಷೇಪ ಹೆಚ್ಚಾಗಲಿದೆ. ನಾಮನಿರ್ದೇಶಿತರು ಪದಾಧಿಕಾರಿಗಳ ಆಯ್ಕೆಯನ್ನು ನಿರ್ಧರಿಸುವಂತಾಗಲಿದೆ. ಇದು ಸಹಕಾರ ಸಂಘಗಳ ವ್ಯವಸ್ಥೆಯನ್ನೇ ಸರ್ವ ನಾಶ ಮಾಡುತ್ತದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದವು. ಕೊನೆಗೆ ಸುದೀರ್ಘ ಚರ್ಚೆಯ ಬಳಿಕ ಮಸೂದೆಯನ್ನು ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳು

-ಬಿಬಿಎಂಪಿ (ತಿದ್ದುಪಡಿ) ವಿಧೇಯಕ ಮಂಡನೆ

-ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ ಮಂಡನೆ

-ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಮಂಡನೆ

-ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡನೆ

-ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್ ಗಳ ವಿಧೇಯಕ ಮಂಡನೆ

-ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಮಂಡನೆ

ಇದನ್ನು ಓದಿ: ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...