HomeಅಂಕಣಗಳುKarnataka against SIRSIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆಡಳಿತಾತ್ಮಕ ಮತ್ತು ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಕೋರಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ಆಯೋಗವು, ಹೊಸ ವೇಳಾಪಟ್ಟಿಯೊಂದಿಗೆ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಕೋರಿಕೆಯ ಮೇರೆಗೆ ಆಯೋಗವು ಇಂದು (ಆಗಸ್ಟ್ 7, 2026) ಈ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪರಿಷ್ಕೃತ SIR ವೇಳಾಪಟ್ಟಿ ಹೀಗಿದೆ:
  • ಬಿಎಲ್‌ಒಗಳ (BLO) ಮನೆ-ಮನೆ ಭೇಟಿ ಗಡುವು: ಜೂನ್ 30, 2026 ರಿಂದ ಆಗಸ್ಟ್ 17, 2026ರವರೆಗೆ ವಿಸ್ತರಣೆ.
  • ಮತಗಟ್ಟೆಗಳ ಪುನರ್‌ರಚನೆ/ಮರುಸಂಯೋಜನೆ: ಆಗಸ್ಟ್ 17, 2026.
  • ಕರಡು ಮತದಾರರ ಪಟ್ಟಿ ಪ್ರಕಟಣೆ: ಆಗಸ್ಟ್ 24, 2026.
  • ಆಕ್ಷೇಪಣೆ ಹಾಗೂ ಹಕ್ಕುಗಳ ಸಲ್ಲಿಕೆ ಅವಧಿ: ಆಗಸ್ಟ್ 24 ರಿಂದ ಸೆಪ್ಟೆಂಬರ್ 23, 2026.
  • ನೋಟಿಸ್ ಜಾರಿ ಹಾಗೂ ಆಕ್ಷೇಪಣೆಗಳ ಇತ್ಯರ್ಥ: ಆಗಸ್ಟ್ 24 ರಿಂದ ಅಕ್ಟೋಬರ್ 22, 2026.
  • ಅಂತಿಮ ಮತದಾರರ ಪಟ್ಟಿ ಪ್ರಕಟಣೆ: ಅಕ್ಟೋಬರ್ 27, 2026.

ನಾಗರಿಕ ಸಮಿತಿಗಳ ಒತ್ತಡ:

ಹಿಂದಿನ ವೇಳಾಪಟ್ಟಿಯ ಪ್ರಕಾರ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನ ಎಂದು ಹೇಳಲಾಗಿತ್ತು.

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ವಿವಿಧ ನಾಗರಿಕ ವೇದಿಕೆಗಳು (Citizen Forums) ಹಾಗೂ ಮತ ಕಾವಲು ಸಮಿತಿಗಳಿಂದ ವ್ಯಕ್ತವಾಗಿದ್ದ ತೀವ್ರ ಆಕ್ಷೇಪಣೆ ಹಾಗೂ ಒತ್ತಡಕ್ಕೆ ಕೊನೆಗೂ ಭಾರತೀಯ ಚುನಾವಣಾ ಆಯೋಗ (ECI) ಮಣಿದಿದೆ. ಬಿಎಲ್‌ಒ (BLO) ಮನೆ-ಮನೆ ಗಣತಿ ಹಾಗೂ ನಮೂನೆ ಸಲ್ಲಿಕೆಯ ಗಡುವನ್ನು ಆಗಸ್ಟ್ 17, 2026 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಲಕ್ಷಾಂತರ ಮತದಾರರಿಗೆ ಇನ್ನೂ ಗಣತಿ ನಮೂನೆಗಳು ತಲುಪದಿರುವುದು, ನಗರ ಪ್ರದೇಶಗಳಲ್ಲಿ ಮನೆ-ಮನೆ ಭೇಟಿಗೆ ಕಾಲಾವಕಾಶ ಸಾಲದಿರುವುದು ಮತ್ತು ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಗಡುವು ವಿಸ್ತರಿಸುವಂತೆ ವಿವಿಧ ಸಾಮಾಜಿಕ ಸಂಘಟನೆಗಳು ಹಾಗೂ ನಾಗರಿಕ ಜಾಗೃತಿ ವೇದಿಕೆಗಳು ಸರ್ಕಾರ ಮತ್ತು ಆಯೋಗದ ಮೇಲೆ ತೀವ್ರ ಒತ್ತಡ ಹೇರಿದ್ದವು.

ಈ ಹೊಸ ವೇಳಾಪಟ್ಟಿಯ ಕುರಿತು ರಾಜ್ಯದ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಲಿಖಿತ ರೂಪದಲ್ಲಿ ಅಧಿಕೃತ ಮಾಹಿತಿ ತಲುಪಿಸಬೇಕು ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಜೊತೆಗೆ, ಸಾರ್ವಜನಿಕರಿಗೆ ಯಾವುದೇ ರೀತಿಯ ಗೊಂದಲವಾಗದಂತೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...