HomeಅಂಕಣಗಳುKarnataka against SIRSIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

- Advertisement -
- Advertisement -

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ ರಾಜ್ಯದಲ್ಲಿ ಈಗಾಗಲೇ ಶೇ. 99.99 ರಷ್ಟು ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ಆಯಾಗಳಿಂದ ಹೊಸ ಮತದಾರರ ಪಟ್ಟಿಯ ಚಿತ್ರಣ ಸಿದ್ಧವಾಗುತ್ತಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯದಲ್ಲಿರುವ ಒಟ್ಟು 5,54,32,314 ಗಣತಿ ನಮೂನೆಗಳ ಪೈಕಿ ಆಗಸ್ಟ್ 6ರ ಸಂಜೆ 4 ಗಂಟೆಯ ವೇಳೆಗೆ ಬರೋಬ್ಬರಿ 5,54,29,076 ನಮೂನೆಗಳ ಡಿಜಿಟಲೀಕರಣ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರಸ್ತುತ ಕೇವಲ 3,238 ನಮೂನೆಗಳ ಡಿಜಿಟಲೀಕರಣ ಮಾತ್ರ ಬಾಕಿ ಉಳಿದಿದೆ.

1.10 ಕೋಟಿ ‘ಎಎಸ್‌ಡಿಡಿಒ’ ಮತದಾರರ ಪತ್ತೆ!

ಈ ಬಾರಿಯ ಸಮಗ್ರ ಪರಿಷ್ಕರಣೆಯಲ್ಲಿ (SIR) ಅತ್ಯಂತ ಮಹತ್ವದ ಅಂಶವೆಂದರೆ, ಈವರೆಗೆ ಡಿಜಿಟಲೀಕರಣಗೊಂಡ 5.54 ಕೋಟಿ ನಮೂನೆಗಳ ಪೈಕಿ ಬರೋಬ್ಬರಿ 1.10 ಕೋಟಿ ಮತದಾರರನ್ನು ‘ಎಎಸ್‌ಡಿಡಿಒ’ (ASDDO – ಗೈರು, ನಿಧನ, ಶಾಶ್ವತ ಸ್ಥಳಾಂತರ, ನಕಲಿ ಹಾಗೂ ಇತರೆ) ವರ್ಗಕ್ಕೆ ಸೇರಿಸಲಾಗಿದೆ.

ಈ ಪೈಕಿ ವರ್ಗೀಕರಣ ವಿವರ ಹೀಗಿದೆ:

  • ಶಾಶ್ವತ ಸ್ಥಳಾಂತರಗೊಂಡವರು: 66.43 ಲಕ್ಷ
  • ಮೃತಪಟ್ಟ ಮತದಾರರು: 16.32 ಲಕ್ಷ
  • ಗೈರುಹಾಜರಾದವರು: 16.12 ಲಕ್ಷ
  • ಈಗಾಗಲೇ ನೋಂದಾಯಿತರಾದವರು (ನಕಲಿ): 6.93 ಲಕ್ಷ
  • ಇತರರು: 4.67 ಲಕ್ಷ
ಮುಂದಿನ ಪ್ರಕ್ರಿಯೆ

ಆಗಸ್ಟ್ 8ರ ಗಡುವು ಮುಗಿದ ನಂತರ ಡಿಜಿಟಲೀಕರಣದ ಗುಣಮಟ್ಟ ಪರಿಶೀಲನೆ, ತಾಂತ್ರಿಕ ವಿವರಗಳ ಮೌಲ್ಯಮಾಪನ, ಮತಗಟ್ಟೆಗಳ ಮರು ಹೊಂದಾಣಿಕೆ ಹಾಗೂ ರ್ಯಾಂಡಮೈಸೇಷನ್ ಪ್ರಕ್ರಿಯೆಗಳು ನಡೆಯಲಿವೆ.

ಮತದಾರರ ಪಟ್ಟಿ ಪರಿಷ್ಕರಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:

  • ಆಗಸ್ಟ್ 17: ಕರಡು ಮತದಾರರ ಪಟ್ಟಿ ಪ್ರಕಟಣೆ.
  • ಆಗಸ್ಟ್ 17 ರಿಂದ ಸೆಪ್ಟೆಂಬರ್ 16: ಸಾರ್ವಜನಿಕರು ಆಕ್ಷೇಪಣೆ ಹಾಗೂ ಹಕ್ಕುಗಳ ಅರ್ಜಿ ಸಲ್ಲಿಕೆಗೆ ಅವಕಾಶ.
  • ಆಗಸ್ಟ್ 18 ರಿಂದ ಅಕ್ಟೋಬರ್ 15: ನೋಟಿಸ್ ಜಾರಿ, ಪರಿಶೀಲನೆ, ವಿಚಾರಣೆ ಹಾಗೂ ಆಕ್ಷೇಪಣೆಗಳ ಇತ್ಯರ್ಥ.
  • ಅಕ್ಟೋಬರ್ 19: ಅಂತಿಮ ಮತದಾರರ ಪಟ್ಟಿ ಪ್ರಕಟಣೆ.

ಈ ಹಿಂದೆ ಜೂನ್ 30 ರಿಂದ ಜುಲೈ 29 ರವರೆಗೆ ನೀಡಲಾಗಿದ್ದ ಗಣತಿ ನಮೂನೆ ಸಲ್ಲಿಕೆಯ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿತ್ತು. ಸಾರ್ವಜನಿಕರು ತಮ್ಮ ಹಕ್ಕುಗಳನ್ನು ಕಾಯ್ದುಕೊಳ್ಳಲು ನಾಳೆಯೊಳಗಾಗಿ ನಮೂನೆಗಳನ್ನು ಸಲ್ಲಿಸಲು ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...