HomeಅಂಕಣಗಳುKarnataka against SIRSIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08 ಕೋಟಿಗೂ ಹೆಚ್ಚು ಜನರನ್ನು ‘ಎಎಸ್‌ಡಿಡಿಒ’ (ಗೈರುಹಾಜರಿ, ಸ್ಥಳಾಂತರ, ಮರಣ, ನಕಲಿ ಮತ್ತು ಇತರೆ) ವರ್ಗಕ್ಕೆ ಸೇರಿಸಿ ಕಡು ಆತಂಕ ಸೃಷ್ಟಿಸಿದೆ.ಇದರ ಪರಿಣಾಮವಾಗಿ ಕರಡು ಮತದಾರರ ಪಟ್ಟಿಯಲ್ಲಿ ಸಂಖ್ಯೆ 4.46 ಕೋಟಿಗೆ ಇಳಿಕೆಯಾಗಿದ್ದು, ಈ ಪೈಕಿ ಬರೋಬ್ಬರಿ 43.81 ಲಕ್ಷ ಮತದಾರರನ್ನು ಆಯೋಗವು ಅನುಮಾನದ ಕಣ್ಣಿನಿಂದ ನೋಡುತ್ತಿದೆ.

ಶುಕ್ರವಾರದಿಂದಲೇ ಈ 43.81 ಲಕ್ಷ ಮತದಾರರಿಗೆ ನೋಟಿಸ್‌ ಕಳುಹಿಸುವ ಪ್ರಕ್ರಿಯೆ ಆರಂಭವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಟ್ಟು ಕರಡು ಮತದಾರರಲ್ಲಿ ಶೇ. 9.8ರಷ್ಟು ಅಂದರೆ 43.81 ಲಕ್ಷ ಮಂದಿ ನೋಟಿಸ್‌ ಪಡೆಯಲಿದ್ದಾರೆ.ನೋಟಿಸ್ ಪಡೆಯುವ ಪ್ರತಿಯೊಬ್ಬ ಮತದಾರನೂ ತಾನು ಈ ದೇಶದ ಸಿಂಧುವಾದ ನಾಗರಿಕ ಎಂಬುದನ್ನು ಸಾಬೀತುಪಡಿಸಲು ಸೂಕ್ತ ದಾಖಲೆಗಳ ಸಮೇತ ಚುನಾವಣಾಧಿಕಾರಿಗಳ ಕಚೇರಿ ಅಥವಾ ಅಧಿಕಾರಿಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾದ ದುಸ್ಥಿತಿ ಎದುರಾಗಿದೆ.

ರಾಜಧಾನಿ ಬೆಂಗಳೂರೇ ಇಲಾಖೆಯ ಮುಖ್ಯ ಟಾರ್ಗೆಟ್!

ನೋಟಿಸ್‌ ಪಡೆಯಲಿರುವ ಒಟ್ಟು ಮತದಾರರಲ್ಲಿ ಅರ್ಧಕ್ಕಿಂತ ಹೆಚ್ಚು, ಅಂದರೆ ಶೇಕಡಾ 55ರಷ್ಟು (24,05,717) ಮತದಾರರು ರಾಜಧಾನಿ ಬೆಂಗಳೂರಿನವರೇ ಆಗಿದ್ದಾರೆ.

  • ಬೆಂಗಳೂರು ನಗರ:9,45,798 ಮತದಾರರಿಗೆ ನೋಟಿಸ್
  • ಬಿಬಿಎಂಪಿ ಉತ್ತರ: 6,12,963 ಮತದಾರರು
  • ಬಿಬಿಎಂಪಿ ಕೇಂದ್ರ: 4,29,345 ಮತದಾರರು
  • ಬಿಬಿಎಂಪಿ ದಕ್ಷಿಣ: 4,17,611 ಮತದಾರರು

ಇತರ ಜಿಲ್ಲೆಗಳ ಅಂಕಿ-ಅಂಶಗಳ ಚಿತ್ರಣ:

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆ ಪ್ರಮುಖ ಜಿಲ್ಲೆಗಳಲ್ಲೂ ಸಾವಿರಾರು ಮತದಾರರಿಗೆ ನೋಟಿಸ್‌ ತಲುಪಲಿದೆ:

  • ಮಂಡ್ಯ: 1,50,269
  • ದಕ್ಷಿಣ ಕನ್ನಡ: 1,50,144
  • ಕೋಲಾರ: 1,42,184
  • ಮೈಸೂರು: 1,28,132
  • ತುಮಕೂರು: 1,11,874
  • ಕಲಬುರಗಿ: 1,05,486
  • ಉಡುಪಿ: 97,702
  • ಚಿಕ್ಕಮಗಳೂರು: 91,612
  • ಬೆಳಗಾವಿ: 84,415
  • ಹಾಸನ: 79,772

ಈ ಬೃಹತ್ ನೋಟಿಸ್ ನೀಡಿಕೆ ಮತ್ತು ಪರಿಶೀಲನಾ ಪ್ರಕ್ರಿಯೆಯನ್ನು ನಿರ್ವಹಿಸಲು ರಾಜ್ಯಾದ್ಯಂತ ಒಟ್ಟು 4,262 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳನ್ನು (AERO) ನಿಯೋಜಿಸಲಾಗಿದೆ. ಇದರಲ್ಲಿ 336 ನಿಯಮಿತ AEROಗಳು ಹಾಗೂ 3,926 ಹೆಚ್ಚುವರಿ AEROಗಳು ಕಾರ್ಯನಿರ್ವಹಿಸಲಿದ್ದಾರೆ. ಮತದಾರರು ಸಲ್ಲಿಸುವ ಆಕ್ಷೇಪಣಾ ಅರ್ಜಿ ಪರಿಶೀಲನೆ, ಹೆಸರು ಸೇರ್ಪಡೆ ಅಥವಾ ಪಟ್ಟಿಯಿಂದ ಅಳಿಸಿಹಾಕುವ ಅಂತಿಮ ಅಧಿಕಾರ ಈ ಅಧಿಕಾರಿಗಳ ಕೈಯಲ್ಲಿದೆ.

ವಿಶೇಷ ಮತದಾರರ ನೋಂದಣಿ ಅಭಿಯಾನ

SIR ಪ್ರಕ್ರಿಯೆಯಲ್ಲಿ ಹೆಸರು ಬಿಟ್ಟುಹೋದವರು, ತಿದ್ದುಪಡಿ ಬಯಸುವವರು ಹಾಗೂ ಹೊಸದಾಗಿ ಹೆಸರು ಸೇರಿಸಬೇಕಾದವರಿಗಾಗಿ ಆಯೋಗವು ವಿಶೇಷ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಂಡಿದೆ. ಆಗಸ್ಟ್ 29 ಮತ್ತು 30 ಹಾಗೂ ಸೆಪ್ಟೆಂಬರ್ 19 ಮತ್ತು 20ಸಾರ್ವಜನಿಕರು ಈ ದಿನಗಳಲ್ಲಿ ತಮ್ಮ ವ್ಯಾಪ್ತಿಯ ಬೂತ್‌ ಮಟ್ಟದ ಅಧಿಕಾರಿಗಳನ್ನು (BLO) ಸಂಪರ್ಕಿಸಿ ಅರ್ಜಿ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಪ್ರಜಾಪ್ರಭುತ್ವದ ಅತಿ ದೊಡ್ಡ ಹಕ್ಕಾದ ‘ಮತದಾನದ ಹಕ್ಕು’ ಪಡೆಯಲು ಸಾಮಾನ್ಯ ನಾಗರಿಕರು ಅಧಿಕಾರಿಗಳ ಬಾಗಿಲಿಗೆ ಅಲೆಯುವಂತೆ ಮಾಡುತ್ತಿರುವ ಆಯೋಗದ ಈ ಧೋರಣೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...