Homeಕರ್ನಾಟಕರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಎಚ್‌ಡಿಕೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, “ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ” ಎಂದು ಟೀಕಿಸಿದ್ದಾರೆ.

ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ, ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮಿಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ” ಎಂದಿದ್ದಾರೆ.

“ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ! ವಾರೆವ್ಹಾ” ಎಂದು ವ್ಯಂಗ್ಯವಾಡಿದ್ದಾರೆ.

“ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?” ಎಂದು ಪ್ರಶ್ನಿಸಿದ್ದಾರೆ.

“ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?” ಎಂದು ಅಮಿತ್ ಶಾ ಅವರನ್ನು ಕೇಳಿದ್ದಾರೆ.

“ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮಿಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?” ಎಂದು ಕುಟುಕಿದ್ದಾರೆ.

“ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕರ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ಪತ್ತೆ

“ಕಾಂಗ್ರೆಸ್‌ 20%, ಬಿಜೆಪಿ 40%. ಕರ್ನಾಟಕವನ್ನು ‘ಕಮಿಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮಿಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...