Homeಕರ್ನಾಟಕನಾಗಪುರ ಶಿಕ್ಷಣ ನೀತಿ NEPಯನ್ನು ಕರ್ನಾಟಕ ಸರ್ಕಾರ ಅನುಷ್ಠಾನ ಮಾಡುವುದಿಲ್ಲ: ಡಿ.ಕೆ.ಶಿವಕುಮಾರ್

ನಾಗಪುರ ಶಿಕ್ಷಣ ನೀತಿ NEPಯನ್ನು ಕರ್ನಾಟಕ ಸರ್ಕಾರ ಅನುಷ್ಠಾನ ಮಾಡುವುದಿಲ್ಲ: ಡಿ.ಕೆ.ಶಿವಕುಮಾರ್

- Advertisement -
- Advertisement -

ನಾಗಪುರ ಶಿಕ್ಷಣ ನೀತಿ  NEPಯನ್ನು ಕರ್ನಾಟಕ ಸರ್ಕಾರ ಅನುಷ್ಠಾನ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ವಿಧಾನಸೌಧ ಬಳಿ ಮಾದ್ಯಮದ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಎನ್ ಇಪಿಯನ್ನು ರಾಜ್ಯದಲ್ಲಿ ಅಳವಡಿಕೆ ಮಾಡುವುದಿಲ್ಲ. ನಾವು ಅದಕ್ಕೆ ಒಂದು ಪ್ರತ್ಯೇಕ ಸಮಿತಿಯನ್ನು ರಚನೆ ಮಾಡುತ್ತೇವೆ. ಕರ್ನಾಟಕ ಸರಕಾರ ಹೊಸ ಶಿಕ್ಷಣ ನೀತಿಯನ್ನು ಈ ಪೀಳಿಗೆಗೆ ಅನುಗುಣವಾಗಿ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ.

ನಮ್ಮ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಎನ್‌ಇಪಿಯನ್ನು ತರಾತುರಿಯಲ್ಲಿ ಕರ್ನಾಟಕದಲ್ಲಿ ಜಾರಿ ಮಾಡಲಾಗಿದೆ. ಯುಪಿ, ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಎನ್‌ಇಪಿ ಇಲ್ಲ. ಪ್ರಾಥಮಿಕ ಶಿಕ್ಷಣದಿಂದ ಇದನ್ನು ಪ್ರಾರಂಭ ಮಾಡಬೇಕಿತ್ತು. ಆದರೆ ಆತುರವಾಗಿ ಜಾರಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಹಿಂದೆ ಸಿದ್ದರಾಮಯ್ಯ ಅವರ ಕಾಲದಲ್ಲಿನ ಶಿಕ್ಷಣ ನೀತಿ ಇದೆ. ತಜ್ಞರು ನೀಡಿದ  ರಿಪೋರ್ಟ್ ಇದೆ. ಎನ್‌ಇಪಿಯಲ್ಲಿ ನಮಗೆ ಅನೇಕ ವಿಚಾರದಲ್ಲಿ ಒಪ್ಪಿಗೆ ಇಲ್ಲ. ತಂತ್ರಜ್ಞಾನಕ್ಕೆ ತಕ್ಕಂತೆ ಶಿಕ್ಷಣ ಇರಬೇಕು. ಇದಕ್ಕೆ ತಕ್ಕಂತೆ ಪಾಲಿಸಿ ರೂಪಿಸುತ್ತೇವೆ. ಆದಷ್ಟು ಬೇಗ ಸಮಿತಿಯ ವರದಿ ತೆಗೆದುಕೊಂಡು ಹೊಸ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಎಸ್‌ಇಪಿ ಜಾರಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇದನ್ನು ಓದಿ: ಅಂಬೇಡ್ಕರ್‌ವಾದಿ, ಹೋರಾಟಗಾರ ಮಂಟೇಲಿಂಗಯ್ಯ ನಿಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...