Homeಕರ್ನಾಟಕಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು

ಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು

- Advertisement -
- Advertisement -

ಕರ್ನಾಟಕದ ಹಾನಗಲ್ ಮತ್ತು ಸಿಂದಗಿ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ದಿನಾಂಕ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 02ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ಅವರ ನಿಧನರಾಗಿದ್ದರು. ಅವರ ನಿಧನದಿಂದ ವಿಧಾನಸಭೆಯಲ್ಲಿ ಹಾನಗಲ್‌ ಪ್ರತಿನಿಧಿಸುವ ಸ್ಥಾನ ತೆರವಾಗಿತ್ತು.

ಇತ್ತ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ಸಿಂದಗಿ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ. ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ: ತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಸುರೇಶ್‌ಗೌಡ ರಾಜೀನಾಮೆ

ಉಪ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಮೂರು ಪಕ್ಷಗಳು ಉಪಚುನಾವಣೆಯನ್ನು ಪ್ರತಿಷ್ಟೆಯಾಗಿ ಪರಿಗಣಿಸಿದ್ದು, ಭಾರೀ ಕಸರತ್ತು ಆರಂಭಿಸಿದ್ದವು. ಇದೀಗ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳ ಚಟುವಟಿಕೆ ಮತ್ತಷ್ಟು ಬಿರುಸುಗೊಂಡಿದೆ.

ಅ.30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ರಾಜ್ಯದ ಎರಡು ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆದೆ. ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇವೆ. ಎರಡೂ ಕಡೆ ನಮ್ಮ ಪಕ್ಷಕ್ಕೆ ಉತ್ತಮ ನೆಲೆ ಇದೆ. ಗೆಲುವಿಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ

“ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...