Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...