Homeಕರ್ನಾಟಕರೈತಪರ ಹೋರಾಟದಲ್ಲಿ ನಾವು ಹಿಂದುಳಿದಿಲ್ಲ - ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

ರೈತಪರ ಹೋರಾಟದಲ್ಲಿ ನಾವು ಹಿಂದುಳಿದಿಲ್ಲ – ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

80 ರ ದಶಕದಲ್ಲಿ ಇಡೀ ದೇಶದ ರೈತರ ಆಂದೋಲನವನ್ನು ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ದೇಶದ ನಾನಾ ರೈತ ಸಂಘಟನೆಗಳ ಐಕ್ಯ ಸಮಿತಿಯನ್ನು ರಚಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು- ಟಿ.ಎ ನಾರಾಯಣ ಗೌಡ

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಫೆಬ್ರವರಿ 6 ರಂದು #KarnatakaWithFarmersProtest  ಎಂಬ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಕುರಿತು ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, “ರೈತಪರ ಹೋರಾಟದಲ್ಲಿ ಕರ್ನಾಟಕ ಹಿಂದುಳಿದಿಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಾರಾಯಣ ಗೌಡ, “ನಾಳೆ ಶನಿವಾರ (6-2-2021)ರಂದು ಸಂಜೆ ಐದು ಗಂಟೆಯಿಂದ ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆ ಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸುತ್ತೇನೆ.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

“ಇದು ಐತಿಹಾಸಿಕ ಸಂದರ್ಭ, ನಮ್ಮ ನಾಡು ರೈತರ ಜತೆ ಇದೆ ಎಂಬುದನ್ನು ಸಾರಿಸಾರಿ ಹೇಳೋಣ. ಒಕ್ಕೂಟ ಸರ್ಕಾರ ರೈತರ ಹೋರಾಟವನ್ನು ದಮನ ಮಾಡಲು ಪ್ರತಿಭಟನಾ ಸ್ಥಳಕ್ಕೆ ವಿದ್ಯುತ್, ನೀರು ಸರಬರಾಜು ನಿಲ್ಲಿಸಿದೆ. ಹಲವು ಹಂತಗಳ ಬ್ಯಾರಿಕೇಡು, ಮುಳ್ಳುಬೇಲಿಗಳ ಕೋಟೆಯನ್ನೇ ಕಟ್ಟಿ ರೈತರನ್ನು ಉಸಿರುಗಟ್ಟಿಸುವ ಕಾರ್ಯ ಮಾಡುತ್ತಿದೆ. ರೈತ ಮುಖಂಡರ ಮೇಲೆ ಸುಳ್ಳು ಕೇಸುಗಳನ್ನು ಹೂಡಿ ಬಂಧಿಸಲಾಗುತ್ತಿದೆ. ಹಲವು ರಾಜ್ಯಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಿ, ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಇದನ್ನು ನಾವು ಪ್ರತಿಭಟಿಸಬೇಕಿದೆ. ದೆಹಲಿಯಲ್ಲಿ ನಡೆಯುತ್ತಿರುವ ದೇಶದ ರೈತರ ಐತಿಹಾಸಿಕ ಹೋರಾಟಕ್ಕೆ ಈಗ ಜಗತ್ತಿನಾದ್ಯಂತ ಬೆಂಬಲ ಲಭ್ಯವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ನಾವೆಲ್ಲರೂ ಒಂದೇ ಧ್ವನಿಯಲ್ಲಿ ರೈತರ ಹೋರಾಟವನ್ನು ಬೆಂಬಲಿಸಬೇಕಿದೆ. ಕರ್ನಾಟಕ ರಾಜ್ಯವು ಈ ದೊಡ್ಡ ಆಂದೋಲನದ ಜತೆ ಇದೆ ಎಂಬುದನ್ನು ಮತ್ತೆ ಮತ್ತೆ ಹೇಳಬೇಕಿದೆ. ದೆಹಲಿಯಲ್ಲಿ ಕೊರೆಯುವ ಚಳಿಯಲ್ಲಿ ತಿಂಗಳುಗಳಿಂದ ಪ್ರತಿಭಟನೆಯಲ್ಲಿ ತೊಡಗಿರುವ ಅನ್ನದಾತರಿಗೆ ನೈತಿಕ ಬೆಂಬಲ ವ್ಯಕ್ತಪಡಿಬೇಕಿದೆ. ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿಕೊಂಡು ಬಂದಿದೆ. ಬೆಂಗಳೂರೂ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಾವು ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದ್ದೆವು. ಮುಂದೆಯೂ ಸಹ ಹಲವಾರು ಹೋರಾಟಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಒಕ್ಕೂಟ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಪ್ರಮಾಣಪತ್ರದಲ್ಲಿ ದಕ್ಷಿಣ ಭಾರತದ ರಾಜ್ಯಗಳು ಕೃಷಿ ಕಾಯ್ದೆಗಳ ಪರವಾಗಿ ಇವೆಯೆಂದೂ, ಈ ರಾಜ್ಯಗಳಲ್ಲಿ ಕೃಷಿ ಮಸೂದೆಗಳ ವಿರುದ್ಧ ಚಳವಳಿಯೇ ನಡೆದಿಲ್ಲವೆಂದು ಸುಳ್ಳು ಹೇಳಿದ್ದರು. ದಕ್ಷಿಣದ ರಾಜ್ಯಗಳೂ ಸಹ ಪ್ರತಿಭಟನೆ ನಡೆಸುತ್ತಿವೆ. ಇದನ್ನು ಗಟ್ಟಿಯಾಗಿ ಹೇಳೋಣ. ಜಾರಿಗೆ ತರಲಾಗಿರುವ ಕೃಷಿ ಕಾಯ್ದೆಗಳು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿವೆ. ಸಂವಿಧಾನದ ಪ್ರಕಾರ ಕೃಷಿ ವಿಷಯ ರಾಜ್ಯಪಟ್ಟಿಯಲ್ಲಿರುವ ವಿಷಯ. ಈ ಕುರಿತು ಕಾಯ್ದೆ ರೂಪಿಸುವ ಹಕ್ಕು ಒಕ್ಕೂಟ ಸರ್ಕಾರಕ್ಕೆ ಇಲ್ಲ. ಅದರ ಜತೆಗೆ ಜಾರಿಗೆ ತಂದಿರುವ ಕಾಯ್ದೆಗಳು ಕರಾಳವಾಗಿದ್ದು, ರೈತಸಂಕುಲವನ್ನು ಕಾರ್ಪೊರೇಟ್ ಶಕ್ತಿಗಳ ಗುಲಾಮರನ್ನಾಗಿಸುತ್ತವೆ ಎಂದು ಆರೋಪಿಸಿದ್ದಾರೆ.

“ಅನ್ನದಾತ ರೈತನ ಪರವಾದ ಹೋರಾಟದಲ್ಲಿ ಕರ್ನಾಟಕ ಎಂದೂ ಹಿಂದೆ ಬಿದ್ದಿಲ್ಲ. ಇಡೀ ದೇಶದ ರೈತರ ಆಂದೋಲನವನ್ನು ಎಂಭತ್ತರ ದಶಕದಲ್ಲಿ ಕರ್ನಾಟಕವೇ ಮುನ್ನಡೆಸಿತ್ತು ಎಂಬುದನ್ನು ಮರೆಯದಿರೋಣ. ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ದೇಶದ ನಾನಾ ರೈತ ಸಂಘಟನೆಗಳ ಐಕ್ಯ ಸಮಿತಿಯನ್ನು ರಚಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ರೈತವಿರೋಧಿಯೂ ಜನವಿರೋಧಿಯೂ ಆಗಿರುವ ಮೂರು ಕೃಷಿ ಮಸೂದೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡಬೇಕು ಎಂಬ ಬೇಡಿಕೆಗಳು ನ್ಯಾಯಪರವಾಗಿವೆ. ಒಕ್ಕೂಟ ಸರ್ಕಾರ ಹಠಮಾರಿತನ ಮುಂದುವರೆಸದೆ ಕೂಡಲೇ ಎರಡೂ ಬೇಡಿಕೆಗಳನ್ನು ಈಡೇರಿಸಬೇಕು. ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿ ಶಮನವಾಗಲು ಇದೊಂದೇ ದಾರಿ. ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು, ಕನ್ನಡ, ಮಹಿಳಾ, ಪ್ರಗತಿಪರ, ರೈತ, ದಲಿತ, ಕಾರ್ಮಿಕ ಸಂಘಟನೆಗಳು, ಜನಪರ ಹೋರಾಟಗಾರರು ನಾಳಿನ ಟ್ವಿಟರ್ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಕೋರುತ್ತೇನೆ. ಇಡೀ ಕರ್ನಾಟಕವೇ ರೈತ ಹೋರಾಟವನ್ನು ಪೂರ್ಣ ಮನಸಿನಿಂದ ಬೆಂಬಲಿಸುತ್ತಿದೆ ಎಂಬ ಸ್ಪಷ್ಟ ಸಂದೇಶ ನೀಡುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.


ಇದನ್ನೂ ಓದಿ: ಪ್ರತ್ಯಕ್ಷದರ್ಶಿಯ ರೈತ ಪ್ರತಿಭಟನೆ ವರದಿ, ವಿಶ್ಲೇಷಣೆ; ಒಂದು ಹೆಜ್ಜೆ ಹಿಂದಕ್ಕೆ, ಎರಡು ಹೆಜ್ಜೆ ಮುಂದಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...