ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸೇರಿದಂತೆ 7 ಜನ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಬುಧವಾರ (ಇಂದು) ಆದೇಶ ಹೊರಡಿಸಿದೆ. ಶಿಖಾ ಅವರನ್ನು ಬಿಎಂಟಿಸಿಯಿಂದ ವಾಣಿಜ್ಯ ತೆರಿಗೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಮತ್ತೊಬ್ಬ ಹಿರಿಯ ಐಎಎಸ್ ಅಧಿಕಾರಿ ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಸಲ್ಮಾ ಫಾಹಿಮಾ ಅವರನ್ನು ಮೂಲ ಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ, ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಷನ್(KSIC) ನ ಮ್ಯಾನೆಜಿಂಗ್ ಡೈರೆಕ್ಟರ್ ಕನಗವಲ್ಲಿ ಎಂ ಅವರನ್ನು ಕರ್ನಾಟಕ ಲೋಕಸೋವಾ ಆಯೋಗ (KPSC) ದ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾಯಿಸಲಾಗಿದೆ.
ಇದನ್ನೂ ಓದಿ: ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!
ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿಯಾಗಿದ್ದ ರಘುನಂದನ್ ಮೂರ್ತಿ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ, ಅರ್ಚನಾ ಎಂ.ಎಸ್. ಅವರನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿಯ(KET) ಸದಸ್ಯರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಈ ಮೊದಲು ಕೆಇಟಿ ಸದಸ್ಯರಾಗಿದ್ದ ವೆಂಕಟೇಶ್ ಟಿ ಅವರನ್ನು ಹುದ್ದೆಯಿಂದ ತೆರವುಗೊಳಿಸಿದ್ದು ಸ್ಥಳ ನಿಯೋಜನೆಯನ್ನು ಇದುವರೆಗೆ ಮಾಡಲಾಗಿಲ್ಲ. ರಮ್ಯಾ ಎಸ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನದಲ್ಲಿದ್ದ ವೆಂಕಟ ರಾಜಾ ಅವರನ್ನು ಹುದ್ದೆಯಿಂದ ತೆರವುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್ ತಡೆ


