Homeಮುಖಪುಟಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; ತನಿಖೆಗೆ ಆಯೋಗ ರಚಿಸಿದ ಸಿಎಂ ಸ್ಟಾಲಿನ್

ಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; ತನಿಖೆಗೆ ಆಯೋಗ ರಚಿಸಿದ ಸಿಎಂ ಸ್ಟಾಲಿನ್

- Advertisement -
- Advertisement -

ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಈ ಪೈಕಿ 35 ಮೃತದೇಹಗಳ ಗುರುತು ಪತ್ತೆಯಾಗಿದೆ ಎಂದು ವರದಿಗಳು ಹೇಳಿವೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್‌ ಕರೂರಿನಲ್ಲಿ ಶನಿವಾರ (ಸೆ.27) ಬೃಹತ್‌ ‌ರ್‍ಯಾಲಿ ಆಯೋಜಿಸಿದ್ದರು. ಅಪಾರ ಸಂಖ್ಯೆಯಲ್ಲಿ ಜನ ಈ ರ್‍ಯಾಲಿಯಲ್ಲಿ ಸೇರಿದ್ದರು. ಈ ವೇಳೆ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.

ಶನಿವಾರ ರಾತ್ರಿಯೇ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಮೃತರ ಕುಟುಂಬಸ್ಥರಿಗೂ ಸಾಂತ್ವನ ಹೇಳಿದ್ದಾರೆ.

ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ.

ದುರಂತದ ಬಗ್ಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚಿಸುವುದಾಗಿಯೂ ಸ್ಟಾಲಿನ್ ಘೋಷಿಸಿದ್ದಾರೆ.

ದುರಂತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, “ಇದು ಅತ್ಯಂತ ದುಖಃದ ವಿಷಯ. ಭರಿಸಲಾಗದ ನಷ್ಟ” ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ತಮಿಳುನಾಡಿನ ಡಿಜಿಪಿ (ಪ್ರಭಾರ) ಆರ್ ವೆಂಕಟರಾಮನ್, “ಘಟನೆಯಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 35 ಮೃತದೇಹಗಳನ್ನು ಗುರುತಿಸಲಾಗಿದ್ದು, ನಾಲ್ಕು ಮೃತದೇಹಗಳ ಗುರುತು ಪತ್ತೆಯಾಗಿಲ್ಲ” ಎಂದು ಹೇಳಿದ್ದಾರೆ.

ಸುಮಾರು 111 ಮಂದಿ ಗಾಯಗೊಂಡಿದ್ದು, ಕರೂರು ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...