Homeಕರ್ನಾಟಕಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟು ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದು, ಪ್ರತಿರೋಧವಾಗಿ ‘ಜನಸಾಹಿತ್ಯ ಸಮ್ಮೇಳನ’ದ ತಯಾರಿ ನಡೆಯುತ್ತಿದೆ.

ರಾಜ್ಯದ ಪ್ರಗತಿಪರ, ಜನಪರ, ನಾಡಿನ ಸೌಹಾರ್ದ ಪರಂಪರೆಯ ಬಗ್ಗೆ ನಂಬಿಕೆ ಇಟ್ಟುವ ಸಾವಿರಾರು ಮನಸ್ಸುಗಳು ಜ.8ರಂದು ಬೆಂಗಳೂರಿನ ಕೆ.ಆರ್‌.ಸರ್ಕಲ್ ಅಲುಮ್ನಿ ಹಾಲ್‌ನಲ್ಲಿ ‘ಜನಸಮ್ಮೇಳನ’ವನ್ನು ಆಯೋಜಿಸಿವೆ.

“ಇದೊಂದು ಕನ್ನಡದ ಮನಸ್ಸುಗಳ ತಕ್ಷಣದ ಪ್ರತಿಕ್ರಿಯೆ. ಇದು ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವೂ ಅಲ್ಲ, ಬಂಡಾಯವೂ ಅಲ್ಲ. ಇದೊಂದು ಪ್ರತಿರೋಧ ಸಮಾವೇಶ” ಎಂದು ಆಯೋಜಕರು ಹೇಳಿದ್ದಾರೆ.

“86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲೀಮರನ್ನು ಹೊರಗಿಡಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಸಾಪ ನಡೆಸಿರುವ ಕೃತ್ಯ. ಸರ್ಕಾರದ ಬಾಹ್ಯ ಶಕ್ತಿಗಳಾದ ಹಿಂದುತ್ವವಾದಿ ಸಂಘಟನೆಗಳು ಮುಸ್ಲಿಮರ ಮೇಲೆ ನೇರ ದಾಳಿ ನಡೆಸುತ್ತಿದ್ದರೆ ಕಸಾಪ ಈ ರೀತಿ ಅದೇ ಅದೇ ಅಜೆಂಡಾಗಳನ್ನು ಸಾಹಿತ್ಯ ಸಮ್ಮೇಳನದ ಮೂಲಕ ಜಾರಿ ಮಾಡಿದೆ. ಹಾಗಾಗಿ ನಾವು ತಕ್ಷಣದ ಪ್ರತಿರೋಧವನ್ನು ಅದೇ ದಿನ ಕೊಡುವುದು ಅಗತ್ಯವಾಗಿದೆ. ಇದು ಕನ್ನಡದ ಸಾಹಿತಿಗಳು, ಕವಿಗಳು, ಹೋರಾಟಗಾರರು ವ್ಯಕ್ತಪಡಿಸುವ ಪ್ರತಿಭಟನೆಯಾಗಿದೆ” ಎಂದು ಹೇಳಿದ್ದಾರೆ.

“ಜನಸಾಹಿತ್ಯ ಸಮ್ಮೇಳನ ಎಂಬ ಪ್ರತಿರೋಧ ಸಮಾವೇಶಕ್ಕೆ ಈಗಾಗಲೇ ನಾಡಿನ ಹಿರಿ-ಕಿರಿಯ ಸಾಹಿತಿ, ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವು ಹಿರಿಯರು ನಿರಂತರ ಮಾರ್ಗದರ್ಶನ ಮಾಡುತ್ತಿದ್ದಾರೆ. ಹಿರಿಯರ ಸೂಚನೆಯಂತೆ ಜನವರಿ 08 ಭಾನುವಾರ 2023 ರಂದು ನಡೆಯುವ ಜನಸಾಹಿತ್ಯ ಸಮ್ಮೇಳನದ ಸಿದ್ದತೆ ನಡೆಯುತ್ತಿದೆ” ಎಂದಿದ್ದಾರೆ.

ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ಒಂದು ಕಾಲಕ್ಕೆ ಕನ್ನಡಿಗರ ಅಗತ್ಯಗಳನ್ನು ಈಡೇರಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡಿತ್ತು. ಕನ್ನಡದ ಧೀಮಂತ ಲೇಖಕರು ಅದರ ಅಧ್ಯಕ್ಷರೂ ಆಗಿದ್ದರು. ಆದರೆ ಈಗ ಪರಿಷತ್ತು ತನ್ನ ಸಾಧ್ಯತೆಗಳನ್ನು ತೀರಿಸಿಕೊಂಡು ಜಡವಾಗಿದೆ. 1992ರ ಆನಂತರ ಬೆಳೆದು ಬಂದ ಜಾಗತೀಕರಣ ಮತ್ತು ಕೋಮುವಾದವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಮೇಲೆ ಬೀರುತ್ತಿರುವ ಪರಿಣಾಮಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಅದಕ್ಕೆ ಗೊತ್ತಿಲ್ಲ. ಅದೀಗ ಸರಕಾರದ ಅನುದಾನ ಪಡೆದು ವರ್ಷಕ್ಕೊಂದು ಸಮ್ಮೇಳನ ನಡೆಸುವ ʼಈವೆಂಟ್ ಮೆನೇಜ್ಮೆಂಟ್ ಸಂಸ್ಥೆʼಯಾಗಿಯಷ್ಟೇ ಉಳಿದಿದೆ. ಸಾಂಸ್ಥೀಕರಣಗೊಂಡ ಯಾವುದೇ ಸಂಸ್ಥೆಯ ಗತಿಯಾದರೂ ಇಷ್ಟೇ. ಅದಕ್ಕೆ ಬಸವಣ್ಣ ʼಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲʼ ಎಂಬ ಮಾತನ್ನು ಹೇಳಿದ್ದ. ಸಾಹಿತ್ಯಿಕ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆದಾಗ ಅವು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತವೆ. ಚಂದ್ರಶೇಖರ ಪಾಟೀಲರಂಥ ಕೆಲವರು ಮಾತ್ರ ಅನುದಾನ ಪಡೆದೂ ಸೆಟೆದು ನಿಲ್ಲುವ ಧೈರ್ಯ ತೋರಿಸುತ್ತಾರೆ. ನಿರುಪಯುಕ್ತ ಸಂಸ್ಥೆಗಳ ಮೇಲೆ ಕಣ್ಣಿಟ್ಟ ಲೇಖಕರು ತಮ್ಮ ಅವಕಾಶಕ್ಕಾಗಿ ಕಾಯುತ್ತಾ ಜೀವನವನ್ನೇ ನಿರುಪಯುಕ್ತಗೊಳಿಸಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇವತ್ತಿನ ಲೇಖಕರು ನಿಜಕ್ಕೂ ಗಂಭೀರವಾದ ಸಮಸ್ಯೆಗಳನ್ನು ಇದಿರಿಸುತ್ತಿದ್ದಾರೆ. ಅದರಲ್ಲಿಯೂ ದಲಿತರು, ಅಲ್ಪ ಸಂಖ್ಯಾಕರು ಮತ್ತು ಮಹಿಳೆಯವರು ಅಮಾನುಷ ಕ್ರೌ ರ್ಯಗಳಿಗೆ ಬಲಿಯಾಗುತ್ತಿದ್ದಾರೆ. ಮೀಸಲಾತಿಯನ್ನು ಯಾರ್ಯಾರೋ ಅಪಹರಿಸುತ್ತಿದ್ದಾರೆ. ಕನ್ನಡದ ಮಾಹಿತಿಗಳ ಮೂಲಕವೇ ಕನ್ನಡವನ್ನು ಕಟ್ಟಿದ ಅಪ್ರತಿಮ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ತಮ್ಮ ಸಂಶೋಧನೆಯ ಸತ್ಯಗಳಿಂದಾಗಿಯೇ ಕೊಲೆಯಾದರು. ಗೌರಿಯ ಹತ್ಯೆಯಾಯಿತು. ಗಂಭೀರ ಲೇಖಕರು ಸಮಕಾಲೀನ ಸಮಾಜ ಏನನ್ನು ನಿರೀಕ್ಷಿಸುತ್ತದೆಯೋ ಅದನ್ನೇ ಹೇಳಬೇಕಾಗಿರುವ ಒತ್ತಡದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಚರಿತ್ರೆ ನಮಗೆ ಸಹನೆಯನ್ನು ಹೇಳಿಕೊಟ್ಟಿದೆ. ಈ ನೆಲದಲ್ಲಿ ನಡೆದ ಬಹುದೊಡ್ಡ ವಾಗ್ವಾದಗಳು ಇಂದು ನಮ್ಮ ಪ್ರಜಾಪ್ರಭುತ್ವದ ತಳಹದಿಯಾಗಿ ಕೆಲಸ ನಿರ್ವಹಿಸುತ್ತಿವೆ. ಆದರೆ ಈಗ ಏನನ್ನು ಹೇಳಿದರೆ ನಾನು ಅಪಾಯದಿಂದ ಪಾರಾಗಬಹುದು ಎಂದು ಯೋಚಿಸಿ ಬರೆಯಬೇಕಾದ ವಾತಾವರಣ ನಿರ್ಮಾಣವಾಗುತ್ತಿರುವಾಗ ನಮ್ಮ ಬರೆಹಗಳು ಪೇಲವವಾಗುವುದರಲ್ಲಿ ಅನುಮಾನವಿಲ್ಲ” ಎಂದು ತಿಳಿಸಿದ್ದಾರೆ.

“ಬಹುಶಃ ಕನ್ನಡ ಎಂದೂ ಇಂಥ ಪರಿಸ್ಥಿತಿಯನ್ನು ಇದಿರಿಸಿಲ್ಲ. ಅರಿಕೇಸರಿಯ ಆಸ್ಥಾನ ಕವಿಯಾಗಿದ್ದ ಪಂಪನಿಗೆ ‘ಓಲಗಿಸಿ ಬಾಳ್ವುದು ಕಷ್ಟಂ ಇಳಾಧಿನಾಥರಾ’ ಎಂದು ಹೇಳುವ ಧೈರ್ಯವಿತ್ತು. ವಿಜಯನಗರದ ಅರಸೊತ್ತಿಗೆಯನ್ನು ಕಣ್ಣಾರೆ ಕಂಡ ಕುಮಾರವ್ಯಾಸನು ‘ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ, ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು, ಉರಿವುರಿವುತಿದೆ ದೇಶ, ನಾವಿನ್ನಿರಲು ಬಾರದು’ ಎಂದು ಗುಡುಗಿದ್ದ. ಹಂಪಿಯ ಅಪಾರ ಸಂಪತ್ತನ್ನು ತಾತ್ವಿಕವಾಗಿ ನಿರಾಕರಿಸುವ ಪುರಂದರದಾಸರು – ʼಲೊಳಲೊಟ್ಟೆ, ಎಲ್ಲಾ ಲೊಳಲೊಟ್ಟೆ, ಆನೆಕುದುರೆ ಎಲ್ಲ ಲೊಳಲೊಟ್ಟೆ, ಸೇನೆ ಭಂಡಾರವು ಲೊಳಲೊಟ್ಟೆ, ಮುತ್ತು ಮಾಣಿಕ್ಯ ಲೊಳಲೊಟ್ಟೆ, ಛತ್ರಚಾಮರ ಧ್ವಜ ಲೊಳಲೊಟ್ಟೆ’ ಎಂದು ಹಾಡಿಕೊಂಡು ಬರಿ ಲಂಗೋಟಿಯಲ್ಲಿಯೇ ಮುತ್ತು ರತ್ನ ಮಾರುವ ವಿಜಯನಗರದ ಬೀದಿಗಳಲ್ಲಿ ಓಡಾಡಿದರು. ಸಾಲಗುಂದ ಗುರು ಖಾದರಿ ಪೀರನು ‘ಮಸೀದಿ ಎಂಬುದು ಹಾಳಾದ ಜಾಗ, ಅದರ ಗೊಡವಿ ನಿನಗ್ಯಾಕಂತೆ ? ಎಂದು ಸಡ್ಡು ಹೊಡೆಯುತ್ತಾನೆ. ಆದರೆ ಈಗ ಕನ್ನಡದ ಹಾದಿ ಬದಲಿದಂತಿದೆ. ಈ ಕುರಿತು ನಾವೆಲ್ಲ ಅರೆಕ್ಷಣ ನಿಂತು, ಯೋಚಿಸಿ, ಮುಂದುವರೆಯಬೇಕಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೀಸಲಾತಿ ಯಾರೊಬ್ಬರ ಮೂಲಭೂತ ಹಕ್ಕು ಅಲ್ಲ.. ಮಹನೀಯರೆ, ಕೆನೆಪದರ ತೆಗೆಯುವ ಬಗ್ಗೆ ಏನಕ್ಕೆ ಮಾತಾಡುವುದಿಲ್ಲ ನೀವು?

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...