Homeಮುಖಪುಟಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

‘ವಂದೇ ಮಾತರಂ’ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್ ನಂಟಿನ ಸಂಘಟನೆಯೊಂದರ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸಿ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಅ.6) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಾರ್ಯಕ್ರಮದಲ್ಲಿ ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸುವುದರ ಜೊತೆಗೆ, ಕೇರಳ ವಿದ್ಯಾರ್ಥಿ ಒಕ್ಕೂಟ (ಕೆಎಸ್‌ಯು) ಮತ್ತು ಮುಸ್ಲಿಂ ವಿದ್ಯಾರ್ಥಿ ಒಕ್ಕೂಟ (ಎಂಎಸ್‌ಎಫ್) ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು, ನೋಂದಣಿ ಮಾಡಿಕೊಂಡಿದ್ದರೂ ತಮ್ಮಲ್ಲಿ ಅನೇಕರಿಗೆ ಕಾರ್ಯಕ್ರಮಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿದರು.

ಎಡಪಂಥೀಯ ಒಲವುಳ್ಳ ವಿದ್ಯಾರ್ಥಿ ಸಂಘಟನೆಗಳಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಶನ್ (ಎಐಎಸ್‌ಎಫ್) ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾದವು.

ಕಾರ್ಯಕ್ರಮದ ಸ್ಥಳದಲ್ಲಿ ಭಾರಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಭೆ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗದಂತೆ ತಡೆಯಲಾಯಿತು.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತಮ್ಮ ಆಯಾ ವಿದ್ಯಾರ್ಥಿ ಸಂಘಟನೆಗಳ ಧ್ವಜಗಳನ್ನು ಹಿಡಿದು, ಸ್ಥಳದ ಹೊರಗೆ ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾರ್ಯಕ್ರಮದೊಳಗೆ ಪ್ರವೇಶ ಪಡೆಯಲು ಪೊಲೀಸರೊಂದಿಗೆ ತಳ್ಳಾಟ-ನುಗ್ಗಾಟ ನಡೆಸಿದರು.

ನಂತರ, ವಿದ್ಯಾರ್ಥಿ ಕಲ್ಯಾಣ ಡೀನ್ ಎಂದು ಹೇಳಿಕೊಂಡ ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನೋಂದಾಯಿತ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಏಕೆ ನಿರಾಕರಿಸಲಾಗುತ್ತಿದೆ ಎಂಬುದು ನನಗೆ ತಿಳಿದಿಲ್ಲ, ಈ ಬಗ್ಗೆ ಕಾರ್ಯಕ್ರಮದ ಸಂಘಟಕರನ್ನು ಕೇಳಬೇಕಾಗುತ್ತದೆ ಎಂದು ಹೇಳಿದರು.

ಸಾಹಿತ್ಯ ಅಕಾಡೆಮಿಯು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮತ್ತು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಕ್ಟೋಬರ್ 6 ಮತ್ತು 7 ರಂದು ‘ವಂದೇ ಮಾತರಂ ನ 150 ನೇ ವಾರ್ಷಿಕೋತ್ಸವ’ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರಗೋಷ್ಠಿಯನ್ನು ಆಯೋಜಿಸುತ್ತಿದೆ.

ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ನಂದಕುಮಾರ್ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಲು ನಿಗದಿಯಾಗಿದ್ದು, ಅವರ ಉಪಸ್ಥಿತಿಯನ್ನು ವಿರೋಧಿಸುವುದಾಗಿ ವಿದ್ಯಾರ್ಥಿಗಳು ಸುದ್ದಿಗಾರರಿಗೆ ತಿಳಿಸಿದರು.

ಅಕ್ಟೋಬರ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಕೇರಳ ಮತ್ತು ತಮಿಳುನಾಡು ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಫೇಸ್‌ಬುಕ್ ಪುಟದಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಮ್ಮ ದೇಶಕ್ಕೆ ಮಾಡಿರುವುದು ದೇಶದ್ರೋಹ, ಯಾರನ್ನೂ ಬಿಡುವುದಿಲ್ಲ”: ಮೋದಿ, ಶಾ, ಮೋಹನ್‌ ಭಾಗವತ್ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ಗುಡುಗು!

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವೋಟ್ ಚೋರಿ' ವಿವಾದದ ವಿರುದ್ಧ ಇಂಡಿಯಾ ಒಕ್ಕೂಟ ನಡೆಸಿದ ಐತಿಹಾಸಿಕ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯತ್ತ...

ಚುನಾವಣಾ ಆಯೋಗಕ್ಕೆ ‘ಇಂಡಿಯಾ’ ಮೈತ್ರಿಕೂಟ ಮೆರವಣಿಗೆ; ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ

ಸಂಸತ್ ಭವನದಿಂದ ಚುನಾವಣಾ ಆಯೋಗದ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ 'ಇಂಡಿಯಾ' ಮೈತ್ರಿಕೂಟದ ಸಂಸತ್ತಿನ ಸದಸ್ಯರನ್ನು ಮಾರ್ಗ ಮಧ್ಯದಲ್ಲೇ ತಡೆಯಲಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್...

ಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ ಎರಡು ಬಾರಿ ಬಂದಿಸಿದ್ದ ಪೊಲೀಸರು

ನವದೆಹಲಿ: ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿ ವಿವೇಕ್ ಭಗತ್ ಅವರನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಅಡಿಷನಲ್ ಡಿಸಿಪಿ) ಹುದ್ದೆಗೆ ಬಡ್ತಿ ನೀಡಿರುವುದು ತೀವ್ರ...

ಪತ್ರಕರ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಸಿಪಿಗೆ ಹೆಚ್ಚುವರಿ ಡಿಸಿಪಿ ಹುದ್ದೆ; ವಿರೋಧದ ಬಳಿಕ ಆದೇಶಕ್ಕೆ ತಡೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯ ವೇಳೆ ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರಿಗೆ ನೀಡಲಾಗಿದ್ದ...

ಬಿಜೆಪಿ ಸದಸ್ಯರಾಗಿರುವವರು ಮಾತ್ರ ಮತ ಚಲಾಯಿಸಬಹುದು ಎಂದು ಚುನಾವಣಾ ಆಯೋಗ ನಂಬಿದೆ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀವ್ರ ವಾಗ್ದಾಳಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗದ ವಿವಾದಾತ್ಮಕ ಕಾರ್ಯವೈಖರಿಯನ್ನು ಖಂಡಿಸಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ವೇಳೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್...

ದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ ‘ಇಂಡಿಯಾ’ ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಪ್ರಮುಖ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮಗಳು ನಡೆಯುತ್ತಿದ್ದು, ಅರ್ಹ ಮತದಾರರ...

SIR ಅಕ್ರಮಗಳ ವಿರುದ್ಧ ಅಕ್ಟೋಬರ್‌ 8ರಂದು ‘ಜನತಾ ನ್ಯಾಯಾಲಯ’: ಮತ ಹಕ್ಕು ರಕ್ಷಣೆಗೆ ವಿನೂತನ ಹೋರಾಟ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಅಕ್ಟೋಬರ್‌‌ 8ರಂದು 'ಜನತಾ ನ್ಯಾಯಾಲಯ' ಎಂಬ...

‘ಫಾರಂ 6 ಬದಲಾವಣೆ ಅನುಮೋದಿಸಿಲ್ಲ’: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಪಕ್ಷಗಳ ಆರೋಪಕ್ಕೆ ಮತ್ತಷ್ಟು ಬಲ ತುಂಬಿದ ಸುಪ್ರೀಂ ಹೇಳಿಕೆ

ನವದೆಹಲಿ: ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಬಳಸುವ ನಮೂನೆ 6ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಹೇಳಿಕೆ ಇದೀಗ ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮತದಾರರ ಪಟ್ಟಿಯ...

ಬಂಗಾಳ ಟ್ರಿಬ್ಯೂನಲ್ ನ್ಯಾಯಾಧೀಶರಿಂದ ಚುನಾವಣಾ ಆಯೋಗದ ಪೋರ್ಟಲ್ ವೈಫಲ್ಯದ ಬಗ್ಗೆ ಗಂಭೀರ ಆರೋಪ: ‘ನೋಡೀಸ್ ಜಾರಿ, ವಿಚಾರಣೆ ಅಥವಾ ಮತದಾರರ ಹಕ್ಕು ಮರುಸ್ಥಾಪನೆ ಅಸಾಧ್ಯ!

ಪ್ರಮುಖ ರಾಷ್ಟ್ರೀಯ ದಿನಪತ್ರಿಕೆ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿರುವಂತೆ, ಪಶ್ಚಿಮ ಬಂಗಾಳದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅಳಿಸಲ್ಪಟ್ಟ ಲಕ್ಷಾಂತರ ಮತದಾರರ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಸುಪ್ರೀಂ ಕೋರ್ಟ್...

‘ನಕಲಿ ಫಾರ್ಮ್ 7 ಸಲ್ಲಿಕೆ ವಿರುದ್ಧ ಕ್ರಮ ತೆಗೆದುಕೊಳ್ಳಿ..’; ಅಧಿಕಾರಿಗಳಿಗೆ ತೆಲಂಗಾಣ ಸಿಇಒ ಸೂಚನೆ

ತೆಲಂಗಾಣದಲ್ಲಿ ಫಾರ್ಮ್ 7 ರ ಮೂಲಕ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸುತ್ತಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ (ಡಿಇಒ) ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ)...