Homeಮುಖಪುಟಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

- Advertisement -
- Advertisement -

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ.

ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. ಮುಸ್ಲಿಮರು ‘ಸಹೋದರತ್ವ’ ಕ್ಕಾಗಿ ಈ ಮೂರನ್ನು ತ್ಯಜಿಸಬೇಕು” ಎಂದು ಹೇಳಿಕೆ ಕೊಟ್ಟಿದ್ದರು.

“ಆರ್‌ಎಸ್‌ಎಸ್ ದೇವಾಲಯ ಚಳುವಳಿಗಳಿಗೆ ಸೇರುವುದಿಲ್ಲ; ಆರ್‌ಎಸ್‌ಎಸ್ ಕೈ ಜೋಡಿಸಿದ ಏಕೈಕ ಚಳುವಳಿಯೆಂದರೆ ಅದು, ರಾಮ ಮಂದಿರ ಚಳುವಳಿ. ನಾವು ಅದನ್ನು ಕೊನೆಯವರೆಗೂ ಮುನ್ನಡೆಸಿದ್ದೇವೆ. ಸಂಘ ಇನ್ನು ಮುಂದೆ ಯಾವುದೇ (ದೇವಾಲಯ) ಚಳುವಳಿಗಳಿಗೆ ಸೇರುವುದಿಲ್ಲ. ಹಿಂದೂಗಳ ಭಾವನೆಯಲ್ಲಿ ಎರಡು ಜನ್ಮಸ್ಥಳಗಳಾಗಿ ಮತ್ತು ಒಂದು ವಾಸಸ್ಥಳವಾಗಿ ಕಾಶಿ-ಮಥುರಾ ಮತ್ತು ಅಯೋಧ್ಯೆ ಹೆಚ್ಚಿನ ಮಹತ್ವವನ್ನು ಹೊಂದಿವೆ. ಆದ್ದರಿಂದ, ಹಿಂದೂ ಸಮಾಜವು ಈ ಸ್ಥಳಗಳಿಗಾಗಿ ಆಗ್ರಹಿಸುತ್ತದೆ” ಎಂದು ಭಾಗವತ್ ಹೇಳಿದ್ದರು.

“ಆರ್‌ಎಸ್‌ಎಸ್ ಈ ಚಳುವಳಿಗಳ ಭಾಗವಾಗುವುದಿಲ್ಲ, ಆದರೆ ಸ್ವಯಂಸೇವಕರು ಸೇರಲು ಸ್ವತಂತ್ರರು” ಎಂದು ತಿಳಿಸಿದ್ದರು.

ಹಿಂದೂಗಳು ಎಲ್ಲಾ ಸ್ಥಳಗಳಲ್ಲಿ ದೇವಾಲಯಗಳನ್ನು ಹುಡುಕಬಾರದು. ಆದರೆ, ಮುಸ್ಲಿಮರು ಸಹೋದರತ್ವಕ್ಕಾಗಿ ಈ ಮೂರನ್ನು ತ್ಯಜಿಸಬೇಕು ಎಂದು ಎಂದಿದ್ದರು.

“ನಾವು ಎಲ್ಲಾ ಸ್ಥಳಗಳಲ್ಲಿ ಶಿವಲಿಂಗ ಅಥವಾ ಮಂದಿರವನ್ನು ಹುಡುಕಬಾರದು. ನಾನು ಹಿಂದೂ ಸಂಘಟನೆಯ ಮುಖ್ಯಸ್ಥನಾಗಿ ಈ ಘೋಷಣೆ ಮಾಡುತ್ತಿದ್ದರೆ, ಇನ್ನೊಂದು ಕಡೆಯವರು ಈ ಮೂರನ್ನು ಕೈಬಿಡಬೇಕು. ಇದು ಸಹೋದರತ್ವಕ್ಕೆ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದು ಭಾಗವತ್ ಹೇಳಿದ್ದರು.

ಆರೆಸ್ಸೆಸ್ ಭಾಗಿಯಾಗಿದ್ದ ಬಾಬರಿ ಮಸೀದಿ ಧ್ವಂಸ ಕೃತ್ಯದ ನಂತರ, 1947 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಧಾರ್ಮಿಕ ಸ್ಥಳವನ್ನು ಬದಲಾಯಿಸುವುದನ್ನು ನಿಷೇಧಿಸುವ ಕಾನೂನನ್ನು ಸಂಸತ್ತು ಅಂಗೀಕರಿಸಿತು ಎಂದು ಸಿಪಿಐ(ಎಂ) ಎತ್ತಿ ತೋರಿಸಿದೆ.

ಬಾಬರಿ ಧ್ವಂಸದ ನಂತರ, ವಿವಿಧ ಹಿಂದುತ್ವ ಶಕ್ತಿಗಳು ನಿರಂತರವಾಗಿ “ಅಯೋಧ್ಯಾ ತೋ ಸಿರ್ಫ್ ಜಾನ್‌ ಕಿ ಹೈ, ಕಾಶಿ-ಮಥುರಾ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗುತ್ತಿವೆ. ಇದರ ಅರ್ಥ “ಅಯೋಧ್ಯಾ ಕೇವಲ ಟ್ರೇಲರ್, ಕಾಶಿ ಮತ್ತು ಮಥುರಾ ಇನ್ನೂ ಉಳಿದಿವೆ” ಎಂದಾಗಿದೆ. ಇದು ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಉಲ್ಲೇಖಿಸಿದ ಘೋಷಣೆಯಾಗಿದೆ.

“ಇಂತಹ ಬೇಡಿಕೆಗಳು ಕೋಮು ಭಾವನೆಗಳನ್ನು ಕೆರಳಿಸುವ, ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಮತ್ತು ಧಾರ್ಮಿಕ ಆಧಾರದ ಮೇಲೆ ಸಮಾಜವನ್ನು ಧ್ರುವೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಪ್ರಕಟಣೆಯಲ್ಲಿ ಹೇಳಿದೆ.

“ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಜನಾಕ್ರೋಶದಿಂದ ಬಿಜೆಪಿ ಸರ್ಕಾರವನ್ನು ರಕ್ಷಿಸಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಮುನ್ನೆಲೆ ತರುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಕೋಮು ವಿಭಜನೆಯನ್ನು ಪ್ರಚೋದಿಸುತ್ತಿವೆ” ಎಂದು ಸಿಪಿಐ(ಎಂ) ಕಿಡಿಕಾರಿದೆ.

“ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆ, ದುರ್ಬಲಗೊಳ್ಳುತ್ತಿರುವ ಆರ್ಥಿಕತೆ, ರೈತರು ಮತ್ತು ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಚುನಾವಣಾ ದುರುಪಯೋಗಗಳಿಂದ ಜನರು ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಹೆಚ್ಚು ಹೆಚ್ಚು ಭ್ರಮನಿರಸನಗೊಳ್ಳುತ್ತಿದ್ದಾರೆ. ಅದರ ವೈಫಲ್ಯಗಳನ್ನು ಹೆಚ್ಚು ಸ್ಪಷ್ಟವಾಗಿ ನೋಡುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಆರೆಸ್ಸೆಸ್‌ನ ವಿಭಜಕ ನೀತಿಗಳ ವಿರುದ್ಧ ‘ಜಾಗರೂಕರಾಗಿರಿ’. ಭಾರತದ ಏಕತೆ ಮತ್ತು ಸಮಗ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅದನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು” ಎಂದು ಸಿಪಿಐ(ಎಂ) ದೇಶದ ಜನರಿಗೆ ಒತ್ತಿ ಹೇಳಿದೆ.

ಇದನ್ನು ಸಾಧಿಸಲು, ‘ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಮೂಲಕ ವಿಶಾಲವಾದ ಪ್ರತಿರೋಧವನ್ನು ನಿರ್ಮಿಸುವುದು ತುರ್ತಾಗಿ ಅಗತ್ಯವಾಗಿದೆ’ ಎಂದಿದೆ.

‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....