Homeಮುಖಪುಟಪಹಲ್ಗಾಮ್‌ ದಾಳಿ ಖಂಡಿಸಿ ಇಂದು 'ಕಾಶ್ಮೀರ ಬಂದ್‌': ಆಡಳಿತ, ಪ್ರತಿಪಕ್ಷಗಳ ಬೆಂಬಲ

ಪಹಲ್ಗಾಮ್‌ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್‌’: ಆಡಳಿತ, ಪ್ರತಿಪಕ್ಷಗಳ ಬೆಂಬಲ

- Advertisement -
- Advertisement -

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ 28 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ, ಭಯೋತ್ಪಾದನೆ ವಿರುದ್ಧ ಬಲವಾದ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಜಮ್ಮು ಕಾಶ್ಮೀರದ ಹಲವಾರು ರಾಜಕೀಯ ಪಕ್ಷಗಳು ಬುಧವಾರ (ಏ.23) ‘ಕಾಶ್ಮೀರ ಬಂದ್‌’ಗೆ ಕರೆ ನೀಡಿವೆ.

ಆಡಳಿತರೂಢ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪಕ್ಷವು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರು ಮತ್ತು ಅವರ ದುಖಃತಪ್ತ ಕುಟುಂಬಗಳಿಗೆ ಬೆಂಬಲ ಸೂಚಿಸುವ ಸಂಕೇತವಾಗಿ ಬಂದ್ ಘೋಷಣೆ ಮಾಡಲಾಗಿದೆ. ಅದನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಜನರಿಗೆ ಮನವಿ ಮಾಡಿದೆ.

“ಈ ಬಂದ್ ಕೇವಲ ಒಂದು ಪ್ರತಿಭಟನೆಯಲ್ಲ, ಬದಲಾಗಿ ಅರ್ಥಹೀನ ಹಿಂಸಾಚಾರದ ವಿರುದ್ಧ ನೋವು ಮತ್ತು ಆಕ್ರೋಶದ ಸಾಮೂಹಿಕ ಅಭಿವ್ಯಕ್ತಿಯಾಗಿದೆ” ಎಂದು ಜೆಕೆಎನ್‌ಸಿ ಒತ್ತಿ ಹೇಳಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಅಧ್ಯಕ್ಷರ ಸೂಚನೆಯ ಮೇರೆಗೆ, ಪಕ್ಷವು ಕಾಶ್ಮೀರ ಬಂದ್‌ ಅನ್ನು ಬೆಂಬಲಿಸುತ್ತದೆ. ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಕರೆ ನೀಡಿರುವ ಈ ಬಂದ್ ಸಂಪೂರ್ಣ ಯಶಸ್ವಿಯಾಗುವಂತೆ ಸಹಕರಿಸಲು ನಾವು ಜಮ್ಮು ಕಾಶ್ಮೀರದ ಜನರಿಗೆ ಮನವಿ ಮಾಡುತ್ತೇವೆ” ಎಂದು ಜೆಕೆಎನ್‌ಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ಜಮ್ಮು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರ ಕುಟುಂಬಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಮತ್ತು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

“ಇದು ನಮ್ಮೆಲ್ಲರ ಮೇಲಿನ ದಾಳಿ” ಎಂದು ಕರೆದಿರುವ ಮೆಹಬೂಬಾ ಮುಫ್ತಿ “ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಪಹಲ್ಗಾಮ್‌ನಲ್ಲಿ ​​ಪ್ರವಾಸಿಗರ ಮೇಲಿನ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಾಳೆ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ. ಕ್ರೂರ ದಾಳಿಯಲ್ಲಿ ಸಾವನ್ನಪ್ಪಿದ ಮುಗ್ಧ ಜೀವಗಳಿಗೆ ಗೌರವ ಸಲ್ಲಿಸುವ ಸಂಕೇತವಾಗಿ ಈ ಬಂದ್‌ಗೆ ಬೆಂಬಲ ನೀಡಲು ಎಲ್ಲಾ ಕಾಶ್ಮೀರಿಗಳಿಗೆ ನಾನು ಮನವಿ ಮಾಡುತ್ತೇನೆ. ಇದು ಕೇವಲ ಕೆಲವು ಆಯ್ದ ಜನರ ಮೇಲಿನ ದಾಳಿಯಲ್ಲ, ಇದು ನಮ್ಮೆಲ್ಲರ ಮೇಲಿನ ದಾಳಿ. ಜನರ ದುಃಖ ಮತ್ತು ಆಕ್ರೋಶದ ಜೊತೆ ನಾವೂ ಇದ್ದೇವೆ. ಅಮಾಯಕರ ಹತ್ಯಾಕಾಂಡವನ್ನು ಖಂಡಿಸಿ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂದ್‌ಗೆ ಜೆಕೆಎಸ್‌ಎ ಬೆಂಬಲ

ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್ಎ) ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ‘ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿ’ ಎಂದು ಕರೆದಿದ್ದು, ಬಂದ್‌ಗೆ ತನ್ನ ಬೆಂಬಲ ವ್ಯಕ್ತಪಡಿಸಿದೆ.

“ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಜಮ್ಮು ನಾಳೆ ಕರೆ ನೀಡಿರುವ ಬಂದ್‌ಗೆ ಜೆಕೆಎಸ್ಎ ಸಂಪೂರ್ಣ ಬೆಂಬಲ ನೀಡುತ್ತದೆ. ಈ ದುರಂತ ದಾಳಿ ಕೇವಲ ಕೆಲವು ವ್ಯಕ್ತಿಗಳ ಮೇಲಿನ ದಾಳಿಯಲ್ಲ; ಇದು ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿಯಾಗಿದೆ” ಎಂದು ಜೆಕೆಎಸ್ಎ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಬಂದ್‌ ಬೆಂಬಲಿಸಿದ ಹುರಿಯತ್ ಕಾನ್ಫರೆನ್ಸ್

ಆಲ್ ಪಾರ್ಟೀಸ್ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್, ಜಮ್ಮು ಕಾಶ್ಮೀರದ ಜನರು ಬಂದ್ ಬೆಂಬಲಿಸಬೇಕು ಮತ್ತು ಘೋರ ಕೃತ್ಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಮನವಿ ಮಾಡಿದ್ದಾರೆ.

“ಯಾರು ಮುಗ್ದರನ್ನು ಕೊಂದಿದ್ದಾರೋ.. ಅವರು ಇಡೀ ಮಾನವಕುಲವನ್ನುಕೊಂದಂತೆ. ಪ್ರವಾಸಿಗರನ್ನು ಅತ್ಯಂತ ಭೀಕರ ರೀತಿಯಲ್ಲಿ ನಿರ್ದಯವಾಗಿ ಕೊಂದಿರುವುದು ಕಾಶ್ಮೀರದ ರಕ್ತಸಿಕ್ತ ಇತಿಹಾಸದಲ್ಲಿ ಮತ್ತೊಂದು ಹತ್ಯಾಕಾಂಡದ ದಿನ. ಕಾಶ್ಮೀರದ ಜನರಿಗೆ ಇಂತಹ ದುರಂತಗಳ ನೋವು ಮತ್ತು ದುಃಖ ತಿಳಿದಿದೆ. ಶಾಂತಿ, ಸದ್ಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇಸ್ಲಾಂ ಧರ್ಮ ಇಂತಹ ಭೀಕರತೆಯನ್ನು ಒಪ್ಪುವುದಿಲ್ಲ. ಜಮ್ಮು ಕಾಶ್ಮೀರದ ಇಸ್ಲಾಮಿಕ್ ಸಮೂಹವು ಮುತಾಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮೂಲಕ ಸಾವಿಗೀಡಾದವರ ಕುಟುಂಬಗಳ ಜೊತೆಗೆ ನಿಲ್ಲಲಿದೆ. ಜಮ್ಮು ಕಾಶ್ಮೀರದ ಜನರು ನಾಳೆ ಬಂದ್ ಮೂಲಕ ಈ ಘೋರ ಅಪರಾಧವನ್ನು ಶಾಂತಿಯುತವಾಗಿ ಪ್ರತಿಭಟಿಸುವಂತೆ ಮನವಿ ಮಾಡುತ್ತೇವೆ” ಎಂದು ಮಿರ್ವೈಜ್ ಫಾರೂಕ್ ಮಂಗಳವಾರ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಸ್ಥಳಗಳಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ಮೆರವಣಿಗೆ ನಡೆದಿದೆ. ಬಾರಾಮುಲ್ಲಾ, ಶ್ರೀನಗರ, ಪೂಂಚ್, ಕುಪ್ವಾರಾದ ಮತ್ತು ಅಖೂರ್ ಪ್ರದೇಶದ ಖೋಡ್ ಗ್ರಾಮದಲ್ಲಿ ಸ್ಥಳೀಯರು ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆ ತಂದ ಅಧಿಕಾರಿಗಳು

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶಕ್ಕೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ಗರ್ಭಿಣಿ ಮಹಿಳೆ ಮತ್ತು ಅವರ ಎಂಟು ವರ್ಷದ ಮಗನನ್ನು ಶುಕ್ರವಾರ (ಡಿಸೆಂಬರ್ 5) ಭಾರತಕ್ಕೆ ಮರಳಿ ಕರೆತರಲಾಗಿದೆ. ಸುನಾಲಿ ಖಾತೂನ್ ಎಂಬ ಮಹಿಳೆ...

‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

ಉತ್ತರ ಪ್ರದೇಶದ ಆಗ್ರಾದ 57 ವರ್ಷದ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕಾಗಿ ಕಿರುಕುಳ ನೀಡಿ ಹಲ್ಲೆ ನಡೆಸಿದ ಒಂದು ವಾರದ ನಂತರ, ಪ್ರಮುಖ ಆರೋಪಿ ರೋಹಿತ್ ಠಾಕೂರ್‌ನನ್ನು...

ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಡಿಸೆಂಬರ್ 4 ಗುರುವಾರ ದೇಶದಾದ್ಯಂತ 1,000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದ್ದು ಮತ್ತು ದೆಹಲಿಯಿಂದ ಎಲ್ಲಾ 235 ದೇಶೀಯ ನಿರ್ಗಮನಗಳು 24 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ ಬೆಂಗಳೂರು ಸೇರಿದಂತೆ ದೇಶದ...

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...