Homeಮುಖಪುಟಕಾಶ್ಮೀರ್ ಫೈಲ್ಸ್ ಅಶ್ಲೀಲ ಚಿತ್ರ; ನಾದವ್ ಲ್ಯಾಪಿಡ್ ಹೇಳಿಕೆ ಬೆಂಬಲಿಸಿದ ಸಹ ತೀರ್ಪುಗಾರರು

ಕಾಶ್ಮೀರ್ ಫೈಲ್ಸ್ ಅಶ್ಲೀಲ ಚಿತ್ರ; ನಾದವ್ ಲ್ಯಾಪಿಡ್ ಹೇಳಿಕೆ ಬೆಂಬಲಿಸಿದ ಸಹ ತೀರ್ಪುಗಾರರು

- Advertisement -
- Advertisement -

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿಕೆಯನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದಾರೆ.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ “ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ” ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. “ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಸ್ಪಷ್ಟಪಡಿಸಲು, ನಾವು ಚಿತ್ರದ ಕಥಾವಸ್ತುವಿನ ಬಗ್ಗೆ ರಾಜಕೀಯ ನಿಲುವು ತಳೆಯುತ್ತಿಲ್ಲ. ಬದಲಿಗೆ ನಾವು ಕಲಾತ್ಮಕ ಹೇಳಿಕೆಯನ್ನು ನೀಡುತ್ತಿದ್ದೇವೆ. ಆದರೆ ಚಿತ್ರೋತ್ಸವವನ್ನು ರಾಜಕೀಯಕ್ಕಾಗಿ ಬಳಸುತ್ತಿರುವುದನ್ನು ಮತ್ತು ನಾದವ್ ಲ್ಯಾಪಿಡ್‌ ಮೇಲಿನ ವೈಯಕ್ತಿಕ ದಾಳಿಯನ್ನು ನೋಡುವುದು ನಮಗೆ ತುಂಬಾ ದುಃಖವಾಗಿದೆ. ಅದು ಎಂದಿಗೂ ತೀರ್ಪುಗಾರರ ಉದ್ದೇಶವಾಗಿರಲಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಆ ಹೇಳಿಯ ಕೊನೆಯಲ್ಲಿ, 53 ನೇ IFFI ತೀರ್ಪುಗಾರರು: ಜಿಂಕೊ ಗೊಟೊಹ್, ಪಾಸ್ಕೇಲ್ ಚಾವಾನ್ಸ್ ಮತ್ತು ಜೇವಿಯರ್ ಅಂಗುಲೋ ಬಾರ್ಟುರೆನ್ ರವರ ಹೆಸರುಗಳನ್ನು ಬರೆಯಲಾಗಿದೆ.

ಆಡಳಿತರೂಢ ಬಿಜೆಪಿ ಪಕ್ಷದಿಂದ ಭಾರೀ ಪ್ರಶಂಶೆಗೊಳಗಾಗಿದ್ದ, ಹಲವಾರು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ತೆರಿಕೆ ಮುಕ್ತ ಪ್ರದರ್ಶನ ಕಂಡಿದ್ದ ಈ ಸಿನಿಮಾವನ್ನು ಆಸ್ಕರ್‌ಗೆ ನಾಮೀನೇಟ್ ಮಾಡಬೇಕೆಂಬ ಮಾತುಗಳು ಸಹ ಕೇಳಿಬಂದಿದ್ದವು. ಆದರೆ IFFI ತೀರ್ಪುಗಾರರ ಮುಖ್ಯಸ್ಥರೆ ಇದೊಂದು ಕೆಟ್ಟ ಸಿನಿಮಾ ಎಂದು ಹೇಳಿಕೆ ನೀಡಿದ್ದರು. ಇದೀಗ ಇತರ ಮೂವರು ಜ್ಯೂರಿಗಳು ಸಹ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಉಳಿದ ಜ್ಯೂರಿ ಸದಸ್ಯ ಸುದಿಪ್ತೊ ಸೇನ್ ಮಾತ್ರ ನಾದವ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. “ತೀರ್ಪುಗಾರರಾಗಿ ಚಿತ್ರದ ತಾಂತ್ರಿಕ, ಸೌಂದರ್ಯದ ಗುಣಮಟ್ಟ ಮತ್ತು ಸಾಮಾಜಿಕ-ಸಾಂಸ್ಕೃತಿಕ ಪ್ರಸ್ತುತತೆಯನ್ನು ನಿರ್ಣಯಿಸಲು ನಮಗೆ ನಿಯೋಜಿಸಲಾಗಿದೆ. ನಾವು ಯಾವುದೇ ಚಿತ್ರದ ರಾಜಕೀಯದ ಕುರಿತು ಮಾತನಾಡುವುದಿಲ್ಲ. ಆ ಕುರಿತು ಮಾತನಾಡಿದರೆ ಅದು ವೈಯಕ್ತಿಕ ಅಭಿಪ್ರಾಯವಾಗಿರುತ್ತದೆ” ಎಂದು ಜ್ಯೂರಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...