Homeಮುಖಪುಟಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

- Advertisement -
- Advertisement -

ಕಾಶ್ಮೀರವು 1947ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್‌ ನಾಯಕ ಫಾರೂಕ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ. “ಅವರೊಂದಿಗೆ ಅಂದು ಸೇರಿಕೊಳ್ಳದ ಕಾರಣಕ್ಕಾಗಿ ಅವರು ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನವು ಇದನ್ನು ಇನ್ನೂ ಮುಂದುವರಿಸಿದರೆ, ಯುದ್ಧ ನಡೆಯುವ ದಿನ ಬರುತ್ತದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ನಾನು ಈ ಉಗ್ರಗಾಮಿತ್ವವನ್ನು 30 ವರ್ಷಗಳಿಂದ ನೋಡುತ್ತಿದ್ದೇನೆ. ಅದು ಮುಗಿಯಲಿಲ್ಲ, ಇನ್ನೂ ಮುಂದುವರಿಯುತ್ತಿದೆ. ಅದು ಜಮ್ಮು ಕಾಶ್ಮೀರವನ್ನು ನಾಶಪಡಿಸಿದೆ. ನಮ್ಮ ಸಮಾಜವು ಸಂಕಷ್ಟಕ್ಕೆ ಸಿಲುಕಿದೆ ಮತ್ತು ಬಡತನ ಹೆಚ್ಚಾಗಿದೆ. ಇದು ಪಾಕಿಸ್ತಾನಕ್ಕೆ ಕಾಣುತ್ತಿಲ್ಲವೇ? ಅವರ ಜೊತೆ ಸೇರದೆ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ?” ಎಂದು ಅವರು ಹೇಳಿದ್ದಾರೆ.

ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅನಂತನಾಗ್‌ನ ರೈಫಲ್‌ಮ್ಯಾನ್ ಕೈಸರ್ ಅಹ್ಮದ್ ಶಾ ಮತ್ತು ಸಿರ್ಸಾದ ರೈಫಲ್‌ಮ್ಯಾನ್ ಜೀವನ್ ಸಿಂಗ್ ಎಂಬ ಇಬ್ಬರು ಸೇನಾ ಯೋಧರು ಮತ್ತು ಇಬ್ಬರು ಪೋರ್ಟರ್‌ಗಳಾದ ಜಹೂರ್ ಅಹ್ಮದ್ ಮಿರ್ ಮತ್ತು ಮುಷ್ತಾಕ್ ಅಹ್ಮದ್ ಚೌಧರಿ ಸಾವನ್ನಪ್ಪಿದ್ದಾರೆ. ಜೊತೆಗೆ ಇಬ್ಬರು ಸೈನಿಕರು ಮತ್ತು ಒಬ್ಬ ಪೋರ್ಟರ್ ಸಹ ಗಾಯಗೊಂಡಿದ್ದಾರೆ. ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿದ ಫಾರೂಕ್ ಅಬ್ದುಲ್ಲಾ, “ಅವರು ನಾಶವಾಗುತ್ತಾರೆ ಮತ್ತು ನಮ್ಮನ್ನೂ ಹಾಳುಮಾಡುತ್ತಾರೆ. ಇವೆಲ್ಲಾ ಸಾಕಾಗಿದೆ, ಅವರು ಇದನ್ನು ಇನ್ನಾದರೂ ನಿಲ್ಲಿಸಬೇಕು. ಜಮ್ಮು ಕಾಶ್ಮೀರದಲ್ಲಿ ಸಾಕಷ್ಟು ಅಮಾಯಕರ ಹತ್ಯೆಗಳು ನಡೆದಿವೆ. ಈ ಹಿಂಸಾಚಾರ ಮತ್ತು ಹತ್ಯೆಗಳು ನಿಲ್ಲಬೇಕು” ಎಂದು ಹೇಳಿದರು.

ಪಾಕಿಸ್ತಾನದ ಬಗ್ಗೆ ವ್ಯಂಗ್ಯವಾಡಿದ ಫಾರೂಕ್ ಅಬ್ದುಲ್ಲಾ, “ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಮಾಡುವ ಮೂಲಕ ಕಾಶ್ಮೀರವನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ, ಕಾಶ್ಮೀರವು 1947 ರಲ್ಲಿ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು” ಎಂದು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಅವರು, ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತೇಜಿಸುವುದನ್ನು ಮುಂದುವರೆಸಿದರೆ, ಯುದ್ಧ ನಡೆಯುವ ದಿನ ಬರುತ್ತದೆ. ಆಗ ಏನನ್ನೂ ಉಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

“ಅವರು ಯುದ್ಧವನ್ನು ಬಯಸಿದರೆ, ಅದಕ್ಕೆ ಸಿದ್ಧರಾಗಿರಬೇಕು. ಈ ದಿನಗಳಲ್ಲಿ ಉಕ್ರೇನ್, ಸಿರಿಯಾ, ಇರಾನ್, ಪ್ಯಾಲೆಸ್ಟೈನ್ ಮತ್ತು ಲೆಬನಾನ್‌ನಲ್ಲಿ ಏನಾಗುತ್ತಿದೆ ಮತ್ತು ಅಲ್ಲಿ ವಿನಾಶ ಹೇಗೆ ನಡೆಯುತ್ತಿದೆ ಎಂಬುದನ್ನು ಪಾಕಿಸ್ತಾನ ನೋಡಬೇಕು. ಇಲ್ಲೂ ಅದೇ ನಾಶವನ್ನು ಪಾಕಿಸ್ತಾನ ಬಯಸುತ್ತದೆಯೇ. ಅವರು ಅದನ್ನು ದೇವರ ಸಲುವಾಗಿ ನಿಲ್ಲಿಸಬೇಕು” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಜನರು ಎದುರಿಸುತ್ತಿರುವ ಕುಂದುಕೊರತೆಗಳನ್ನು ಪರಿಹರಿಸೋಣ ಎಂದ ಅವರು, ರಾಜ್ಯದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಬಡತನ ಹೆಚ್ಚಾಗಿದೆ, ಈ ಸಮಸ್ಯೆಗಳನ್ನು ಪರಿಹರಿಸಲು ನಾವು ಕೆಲಸ ಮಾಡೋಣ ಎಂದು ಅವರು ಹೇಳಿದ್ದಾರೆ.

ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಇದನ್ನೂ ಓದಿ: ಉತ್ತರ ಪ್ರದೇಶ: ಮುಸುಕುಧಾರಿಗಳಿಂದ ಖಾಸಗಿ ಶಾಲಾ ವ್ಯಾನ್ ಮೇಲೆ ಗುಂಡಿನ ದಾಳಿ, ಅಪಾಯದಿಂದ ಪಾರಾದ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...