Homeಮುಖಪುಟ370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ...

370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ…

- Advertisement -
- Advertisement -

370ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಬಿ.ಎಸ್.ಪಿ, ವೈ.ಎಸ್.ಆರ್.ಪಿ, ಬಿ.ಜೆ.ಡಿ, ಟಿ.ಆರ್.ಎಸ್, ಆಮ್ ಆದ್ಮಿ ಪಕ್ಷ, ಶಿವಸೇನಾ ಪಕ್ಷಗಳು ಸ್ವಾಗತಿಸಿವೆ. ಜೆಡಿಯೂ ಸದನದಿಂದ ಹೊರನಡಿದಿದೆ.

‘ಭಾರತದ ಪ್ರಜಾತಂತ್ರದ ಕರಾಳ ದಿನ ಮತ್ತು ದೊಡ್ಡ ದುರಂತ’ ಎಂದು 370 ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪದ ಕುರಿತು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಮತ್ತು ನಾಗರಿಕ ಸಮಾಜದ ಕೆಲವು ವಿಭಾಗಗಳು ಈ ಬೆಳವಣಿಗೆಗಳನ್ನು ಸಂತೋಷದಿಂದ ಆಚರಿಸುತ್ತಿರುವ ರೀತಿ ಅಸಹ್ಯಕರ ಮತ್ತು ಅನಾನುಕೂಲವಾಗಿದೆ. ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟ ಮತ್ತು ಕೆಟ್ಟದಾಗಿದೆ. ಅವರು ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಬಯಸುತ್ತಾರೆ, ಮುಸ್ಲಿಮರನ್ನು ತಮ್ಮ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗುವ ಮಟ್ಟಿಗೆ ನಿರಾಕರಿಸುತ್ತಾರೆ ಎಂದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಪ್ರಖ್ಯಾತ ಯೂಟ್ಯೂಬರ್ ಧೃವ್ ರಾಠೀ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. ಅವರು

“ಇಂದು ಐತಿಹಾಸಿಕ ದಿನ!
ಆರ್ಟಿಕಲ್ 370 ಮತ್ತು 35 ಎ ಅನ್ನು ತೆಗೆದುಹಾಕಲಾಗುತ್ತದೆ
ಜಮ್ಮು ಕಾಶ್ಮೀರ ಈಗ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಲಡಾಕ್ ಶಾಸಕಾಂಗವಿಲ್ಲದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ
ಜಮ್ಮು ಕಾಶ್ಮೀರ ಭಾರತೀಯ ಸಂವಿಧಾನದ ಅಡಿಯಲ್ಲಿ ಬರುತ್ತದೆ.
ಬಿಜೆಪಿಯ ದೀರ್ಘಕಾಲದ ಭರವಸೆ ಅಂತಿಮವಾಗಿ ಈಡೇರಿದೆ. ತಾತ್ತ್ವಿಕವಾಗಿ, ಇದು ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗವನ್ನು ಪಡೆಯುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು ಇದರಿಂದ ಅಲ್ಲಿ ಅಭಿವೃದ್ದಿ ಮತ್ತು ಶಾಂತಿ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿವೆ.

ಜನಮತಗಣನೆ ಇಲ್ಲದೆ ಒಂದು‌ ಪ್ರಾಂತ್ಯದ ಸ್ವಾಯತ್ತ ಅಧಿಕಾರವನ್ನು ಅನೂರ್ಜಿತಗೊಳಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಎಂತಹುದೇ ಕಾರಣವಿದ್ದರೂ ‘ಜನರಿಂದ ಸರ್ಕಾರ‌, ಜನರಿಂದಲೇ ದೇಶ’ ಎಂಬುದನ್ನು ಮರೆಯಬಾರದು. #370 ರದ್ದು ಮಾಡುವ ಮೊದಲು ಅಲ್ಲಿನ ಜನಮತಗಣನೆಯಾಗಬೇಕು. ಅದನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿಯೇ ರದ್ದುಗೊಳಿಸಬೇಕೇ ವಿನಃ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದಾಗ ಏಕಾಏಕಿ ಪ್ರಾಂತ್ಯದಲ್ಲಿ ಸೇನೆಯನ್ನು ಜಮಾವಣೆ ಮಾಡಿ #144 ನಿಷೇಧಾಜ್ಞೆ ಜಾರಿಗೆ ತಂದು, ನಾಗರೀಕರನ್ನು – ಜನನಾಯಕರನ್ನು ಗೃಹಬಂಧನದಲ್ಲಿಟ್ಟು , ದೆಹಲಿಯ ಒಕ್ಕೂಟ ಸರ್ಕಾರವು ತನ್ನಷ್ಟಕ್ಕೆ ತಾನೇ ನಿರ್ಧಾರ ತೆಗೆದುಕೊಳ್ಳುವುದು ಸರಕಾರಿ ದೌರ್ಜನ್ಯವಲ್ಲದೇ ಮತ್ತೇನೂ ಅಲ್ಲ. ಈ ದೇಶವನ್ನು ಅರಾಜಕತೆಗೆ ಒಡ್ಡುವಲ್ಲಿ ನಿರ್ಣಾಯಕವಾದ ನಡಾವಳಿ ಇದಾಗಲಿದೆ. ಇನ್ನು ಮುಂದೆ ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ದ್ರಾವಿಡ ರಾಜ್ಯಗಳು ಅತ್ಯಂತ ಬಲವಾದ ‘ಫೆಡರಲಿಜಂ’ ಅನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ಅದಾಗದೇ ಇದ್ದಲ್ಲಿ ನಮ್ಮ ಊರುಗಳಿಗೂ ಸೇನಾಪಡೆ ತಂದು ನಮ್ಮ ಎದೆಗೂ ಗುಂಡಿಕ್ಕುವ ಧೈರ್ಯವನ್ನು ದೆಹಲಿಯ ಒಕ್ಕೂಟ ಸರ್ಕಾರ ಮಾಡುವುದರಲ್ಲಿ ಅನುಮಾನವಿಲ್ಲ.

ಈ ದೇಶದಲ್ಲಿ ಇರುವುದು ಒಕ್ಕೂಟ ಸರ್ಕಾರವೇ ಹೊರತು ಸರ್ವಾಧಿಕಾರದ ಸರ್ಕಾರವಲ್ಲ! ಇದನ್ನು ದೆಹಲಿಯ ಭಂಡ ನಾಯಕರಿಗೆ ದಕ್ಷಿಣ ಮತ್ತು ಈಶಾನ್ಯರಾಜ್ಯ ಜನರು ಸರಿಯಾಗಿ ಮನಗಾಣಿಸದೇ ಹೋದಲ್ಲಿ ಅತ್ಯಂತ ಹೇಯವಾದ ಸ್ಥಿತಿಯನ್ನು ಈ ನೆಲವು ಅನುಭವಿಸುದರಲ್ಲಿ ಅನುಮಾನವಿಲ್ಲ. ಎಂದು ಯುವಸಾಹಿತಿ ರಾಜೇಂದ್ರ ಪ್ರಸಾದ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗೆಲ್ಲ ದೇಶದ ಆರ್ಥಿಕತೆ ಹಳ್ಳ ಹಿಡಿಯುತ್ತೆ ಆಗ ದೇಶ ಆಳುವವರು ಜನರನ್ನು ಯುದ್ಧದ ನಶೆಗೆ ತಳ್ಳುತ್ತಾರೆ. ಜನ ಕೂಡ ಯುದ್ಧದ ಹುಚ್ಚಿನಿಂದ ನಿಜವಾದ ಸಮಸ್ಯೆಯನ್ನೆ ಮರೆತು ದೇಶ ಆಳುವವರ ಬೆಂಬಲಕ್ಕೆ ನಿಲ್ಲುತ್ತಾರೆ.

ನಾವುಗಳು ಇನ್ನು ನೂರು ಶತಮಾನ ಕಳೆದರೂ ಇತಿಹಾಸದಿಂದ ಪಾಠ ಕಲಿಯಲ್ಲ ಕಣ್ರಪ್ಪ.” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. “ಇನ್ನು ದೇಶದ ಆರ್ಥಿಕ ಹಿಂಜರಿತ ಚರ್ಚೆಗೆ ಶ್ರದ್ಧಾಂಜಲಿಗಳು ?” ಎಂದು ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

“ನಾವು ಲಡಾಕ್ ನ ಝಂಸ್ಕಾರ್ ನಲ್ಲಿದ್ದಾಗ ರಿಲಯನ್ಸ್ ಪವರ್ ನ ಕೆಲವು ಸಿಬ್ಬಂದಿ ಸೋಲಾರ್ ಪವರ್ ಪ್ಲಾಂಟ್ ಗಾಗಿ ಸರ್ವೇ ಮಾಡಲು ಬಂದಿದ್ದರು. ಇಷ್ಟು ಬೇಗ ಪ್ರಾಜೆಕ್ಟ್ ಪ್ರೊಪೊಸಲ್ ಮುಗಿದು ಸರಕಾರದ ವತಿಯಿಂದ ಕೆಲಸ ಶುರುವಾಗುತ್ತದೆ ಅಂತ ಗೊತ್ತಿರಲಿಲ್ಲ.” ಎಂದು ಶ್ರೀಹರ್ಷ ಶಾಲಿಮಠ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...