Homeಮುಖಪುಟಐದು ವರ್ಷ ಹಳೆಯ ಯುಎಪಿಎ ಪ್ರಕರಣದಲ್ಲಿ ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್‌ಗೆ ಜಾಮೀನು

ಐದು ವರ್ಷ ಹಳೆಯ ಯುಎಪಿಎ ಪ್ರಕರಣದಲ್ಲಿ ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್‌ಗೆ ಜಾಮೀನು

- Advertisement -
- Advertisement -

ಐದು ವರ್ಷಗಳ ಹಿಂದಿನ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್‌ಗೆ ಶ್ರೀನಗರದ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ಈ ಪ್ರಕರಣವು 2019ರಲ್ಲಿ ಶ್ರೀನಗರದ ಸೆಂಟ್ರಲ್ ಜೈಲಿನಲ್ಲಿ ನಡೆದ ಗಲಭೆ ಘಟನೆಗೆ ಸಂಬಂಧಿಸಿದೆ. ಕೈದಿಗಳ ಗುಂಪು ಕೆಲ ಬ್ಯಾರಕ್‌ಗಳಿಗೆ ಬೆಂಕಿ ಹಚ್ಚಿ ಜೈಲು ಸಿಬ್ಬಂದಿಯ ಮೇಲೆ ಕಲ್ಲು ಎಸೆದಿತ್ತು ಎಂದು ಆರೋಪಿಸಲಾಗಿತ್ತು.

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧನದಿಂದ ಬಿಡುಗಡೆಯಾದ ಎರಡು ದಿನಗಳ ನಂತರ ಫೆಬ್ರವರಿ 29 ರಂದು ಸುಲ್ತಾನ್ ಅವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಸಾರ್ವಜನಿಕ ಸುರಕ್ಷತಾ ಕಾಯಿದೆಯು ಅಧಿಕಾರಿಗಳು ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ಎರಡು ವರ್ಷಗಳವರೆಗೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಒಂದು ವರ್ಷದವರೆಗೆ ವಿಚಾರಣೆಯಿಲ್ಲದೆ ವ್ಯಕ್ತಿಗಳನ್ನು ಬಂಧನದಲ್ಲಿಡಲು ಅನುಮತಿಸುತ್ತದೆ.

ಮೇ 10 ರಂದು ತನ್ನ ಆದೇಶದಲ್ಲಿ, ಶ್ರೀನಗರದ ರಾಷ್ಟ್ರೀಯ ತನಿಖಾ ಕಾಯಿದೆಯಡಿಯ ವಿಶೇಷ ನ್ಯಾಯಾಲಯವು ಸುಲ್ತಾನ್‌ ಅವರನ್ನು ಕಸ್ಟಡಿಯಲ್ಲಿ ವಿಚಾರಣೆ ಮಾಡಲು ಪೊಲೀಸರಿಗೆ 72 ದಿನಗಳ ಸಾಕಷ್ಟು ಸಮಯವನ್ನು ನೀಡಲಾಗಿದೆ ಎಂದು ಹೇಳಿತ್ತು.

ಸುಲ್ತಾನ್‌ ಅವರು ಜಮ್ಮು ಕಾಶ್ಮೀರದ ಖಾಯಂ ನಿವಾಸಿಯಾಗಿರುವುದರಿಂದ ಅವರು ಅಲ್ಲಿಂದ ಪಲಾಯನಗೈಯ್ಯುವ ಸಾಧ್ಯತೆ ಕಡಿಮೆ ಎಂದು ಹೇಳಿದ ನ್ಯಾಯಾಧೀಶರು, ರೂ 1 ಲಕ್ಷ ಬಾಂಡ್‌ ನೀಡಿ ಅವರು ಜಾಮೀನು ಪಡೆಯಬಹುದೆಂದು ತಿಳಿಸಿತ್ತು. ಅಗತ್ಯವಿರುವಾಗಲೆಲ್ಲಾ ಸುಲ್ತಾನ್‌ ಅವರು ತನಿಖಾಧಿಕಾರಿಯೆದುರು ಹಾಜರಾಗಬೇಕು ಹಾಗೂ ತಮ್ಮ ಮೊಬೈಲ್‌ ಸಂಖ್ಯೆ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ‘ಯುಎಪಿಎ’ಯಡಿ ಪ್ರಬೀರ್ ಪುರಕಾಯಸ್ಥ ಬಂಧನ ಅಸಿಂಧು: ತಕ್ಷಣ ಬಿಡುಗಡೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...