ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಕಾಶ್ಮೀರದ ಹೊರಗಿರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ಗುರಿಯಾಗಿಸದಂತೆ “ಹೆಚ್ಚುವರಿ ಜಾಗರೂಕತೆ ವಹಿಸಿ” ಎಂದು ಕೇಂದ್ರಾಡಳಿತದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ದೇಶದ ಇತರ ರಾಜ್ಯದಗಳ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಕಾಶ್ಮೀರಿ ವಿದ್ಯಾರ್ಥಿಗಳ
ನ್ಯಾಷನಲ್ ಕಾನ್ಫರೆನ್ಸ್ ವಕ್ತಾರ ಇಮ್ರಾನ್ ನಬಿ ದಾರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಿಎಂ ಒಮರ್ ಅವರು, ದೇಶದ ಇತರ ಭಾಗಗಳಲ್ಲಿ ಕಾಶ್ಮೀರಿಗಳ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಹೇಳಲಾಗಿರುವ ಸಾಮಾಜಿಕ ಮಾಧ್ಯಮದಲ್ಲಿನ ವೀಡಿಯೊಗಳನ್ನು ಗಮನಿಸುವಂತೆ ಇತರ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
ಮಂಗಳವಾರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, 17 ಜನರು ಗಾಯಗೊಂಡಿದ್ದಾರೆ. 2019 ರಲ್ಲಿ ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ.
The J&K government is in touch with the governments of the states where these reports are originating from. I’m also in touch with my counterpart Chief Ministers in these states & have requested they take extra care. https://t.co/oMTx06o08Y
— Omar Abdullah (@OmarAbdullah) April 24, 2025
ದಾಳಿಯ ನಂತರ, ಹಿಂದೂ ರಕ್ಷಾ ದಳ ಎಂಬ ದುಷ್ಕರ್ಮಿಗಳ ಗುಂಪು ಮಂಗಳವಾರ ಕಾಶ್ಮೀರಿ ಮುಸ್ಲಿಮರು ಬುಧವಾರದೊಳಗೆ ಉತ್ತರಾಖಂಡವನ್ನು ತೊರೆಯುವಂತೆ ಅಂತಿಮ ಎಚ್ಚರಿಕೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
“ಪಹಲ್ಗಾಮ್‌ನಲ್ಲಿ ನಡೆದ ಘಟನೆ ನಮಗೆ ನೋವುಂಟು ಮಾಡಿದೆ… ನಾಳೆ ಬೆಳಿಗ್ಗೆ 10 ಗಂಟೆಯ ನಂತರ ರಾಜ್ಯದಲ್ಲಿ ಯಾವುದೇ ಕಾಶ್ಮೀರಿ ಮುಸ್ಲಿಮರನ್ನು ಕಂಡರೆ, ನಾವು ಅವರಿಗೆ ಸರಿಯಾದ ಚಿಕಿತ್ಸೆ ನೀಡುತ್ತೇವೆ” ಎಂದು ಗುಂಪಿನ ನಾಯಕ ಲಲಿತ್ ಶರ್ಮಾ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಕಾಶ್ಮೀರಿ ಮುಸ್ಲಿಮರು ರಾಜ್ಯವನ್ನು ತೊರೆಯುವಂತೆ , ಇಲ್ಲದಿದ್ದರೆ ಅವರು “ಊಹಿಸಲಾಗದ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.
ಡೆಹ್ರಾಡೂನ್‌ನ ಡೂನ್ ಪಿಜಿ ಕಾಲೇಜಿನ ಅಪರಿಚಿತ ವಿದ್ಯಾರ್ಥಿಯೊಬ್ಬರು ಕನಿಷ್ಠ ಐದು ಕಾಶ್ಮೀರಿ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ. ಈ ಬೆದರಿಕೆಗಳ ನಂತರ, ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆಂದು ಹೇಳಲಾದ 25 ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಡೆಹ್ರಾಡೂನ್ ಪೊಲೀಸರು ತೆಗೆದುಹಾಕಿದ್ದಾರೆ.
ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಪ್ರತಿಕ್ರಿಯಿಸಿ, ಪೊಲೀಸರು ಕಾಶ್ಮೀರಿ ವಿದ್ಯಾರ್ಥಿಗಳು ದಾಖಲಾಗಿರುವ ಸಂಸ್ಥೆಗಳ ಡೀನ್‌ಗಳು ಮತ್ತು ವಾರ್ಡನ್‌ಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. “ಎಲ್ಲರಿಗೂ ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಲಾಗಿದೆ. ಯಾರಾದರೂ ಕಾನೂನಿಗೆ ವಿರುದ್ಧವಾಗಿ ನಡೆದರೆ, ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಆದಾಗ್ಯೂ, ಅವರು ಹಿಂದೂ ರಕ್ಷಾ ದಳದ ದುಷ್ಕರ್ಮಿಗಳ ವೀಡಿಯೊದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜಮ್ಮು ಕಾಶ್ಮೀರ ಸರ್ಕಾರವು ದೇಶದ ಇತರ ಭಾಗಗಳಲ್ಲಿ ವಾಸಿಸುವ ತಮ್ಮ ವಿದ್ಯಾರ್ಥಿಗಳಿಗಾಗಿ ಎಂಟು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
J&K Resident Commission, New Delhi shares helpline numbers for students studying in different states@diprjk pic.twitter.com/1Fk887DYYZ
— Information & PR, Srinagar (@ddprsrinagar) April 24, 2025
ಫೆಬ್ರವರಿ 2019 ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ, ದೇಶದ ಹಲವಾರು ಕಾಶ್ಮೀರಿ ವಿದ್ಯಾರ್ಥಿಗಳು ಹಿಂದುತ್ವ ದುಷ್ಕರ್ಮಿಗಳಿಂದ ದೈಹಿಕ ಬೆದರಿಕೆಗಳನ್ನು ಎದುರಿಸಿದ್ದರು. ಆ ಸಮಯದಲ್ಲಿ, ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾಶ್ಮೀರಿ ವಿದ್ಯಾರ್ಥಿಗಳು ಮತ್ತು ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆಯನ್ನು ನೀಡಿತ್ತು. ಕಾಶ್ಮೀರಿ ವಿದ್ಯಾರ್ಥಿಗಳ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

