Homeಮುಖಪುಟಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ 'ಹೆಚ್ಚುವರಿ ಕಾಳಜಿ' ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ...

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಕಾಶ್ಮೀರದ ಹೊರಗಿರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ಗುರಿಯಾಗಿಸದಂತೆ “ಹೆಚ್ಚುವರಿ ಜಾಗರೂಕತೆ ವಹಿಸಿ” ಎಂದು ಕೇಂದ್ರಾಡಳಿತದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ದೇಶದ ಇತರ ರಾಜ್ಯದಗಳ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಕಾಶ್ಮೀರಿ ವಿದ್ಯಾರ್ಥಿಗಳ

ನ್ಯಾಷನಲ್ ಕಾನ್ಫರೆನ್ಸ್ ವಕ್ತಾರ ಇಮ್ರಾನ್ ನಬಿ ದಾರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಿಎಂ ಒಮರ್ ಅವರು, ದೇಶದ ಇತರ ಭಾಗಗಳಲ್ಲಿ ಕಾಶ್ಮೀರಿಗಳ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಹೇಳಲಾಗಿರುವ ಸಾಮಾಜಿಕ ಮಾಧ್ಯಮದಲ್ಲಿನ ವೀಡಿಯೊಗಳನ್ನು ಗಮನಿಸುವಂತೆ ಇತರ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, 17 ಜನರು ಗಾಯಗೊಂಡಿದ್ದಾರೆ. 2019 ರಲ್ಲಿ ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ.

ದಾಳಿಯ ನಂತರ, ಹಿಂದೂ ರಕ್ಷಾ ದಳ ಎಂಬ ದುಷ್ಕರ್ಮಿಗಳ ಗುಂಪು ಮಂಗಳವಾರ ಕಾಶ್ಮೀರಿ ಮುಸ್ಲಿಮರು ಬುಧವಾರದೊಳಗೆ ಉತ್ತರಾಖಂಡವನ್ನು ತೊರೆಯುವಂತೆ ಅಂತಿಮ ಎಚ್ಚರಿಕೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಹಲ್ಗಾಮ್‌ನಲ್ಲಿ ನಡೆದ ಘಟನೆ ನಮಗೆ ನೋವುಂಟು ಮಾಡಿದೆ… ನಾಳೆ ಬೆಳಿಗ್ಗೆ 10 ಗಂಟೆಯ ನಂತರ ರಾಜ್ಯದಲ್ಲಿ ಯಾವುದೇ ಕಾಶ್ಮೀರಿ ಮುಸ್ಲಿಮರನ್ನು ಕಂಡರೆ, ನಾವು ಅವರಿಗೆ ಸರಿಯಾದ ಚಿಕಿತ್ಸೆ ನೀಡುತ್ತೇವೆ” ಎಂದು ಗುಂಪಿನ ನಾಯಕ ಲಲಿತ್ ಶರ್ಮಾ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಕಾಶ್ಮೀರಿ ಮುಸ್ಲಿಮರು ರಾಜ್ಯವನ್ನು ತೊರೆಯುವಂತೆ , ಇಲ್ಲದಿದ್ದರೆ ಅವರು “ಊಹಿಸಲಾಗದ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಡೆಹ್ರಾಡೂನ್‌ನ ಡೂನ್ ಪಿಜಿ ಕಾಲೇಜಿನ ಅಪರಿಚಿತ ವಿದ್ಯಾರ್ಥಿಯೊಬ್ಬರು ಕನಿಷ್ಠ ಐದು ಕಾಶ್ಮೀರಿ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ. ಈ ಬೆದರಿಕೆಗಳ ನಂತರ, ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆಂದು ಹೇಳಲಾದ 25 ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಡೆಹ್ರಾಡೂನ್ ಪೊಲೀಸರು ತೆಗೆದುಹಾಕಿದ್ದಾರೆ.

ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಪ್ರತಿಕ್ರಿಯಿಸಿ, ಪೊಲೀಸರು ಕಾಶ್ಮೀರಿ ವಿದ್ಯಾರ್ಥಿಗಳು ದಾಖಲಾಗಿರುವ ಸಂಸ್ಥೆಗಳ ಡೀನ್‌ಗಳು ಮತ್ತು ವಾರ್ಡನ್‌ಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. “ಎಲ್ಲರಿಗೂ ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಲಾಗಿದೆ. ಯಾರಾದರೂ ಕಾನೂನಿಗೆ ವಿರುದ್ಧವಾಗಿ ನಡೆದರೆ, ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಾಗ್ಯೂ, ಅವರು ಹಿಂದೂ ರಕ್ಷಾ ದಳದ ದುಷ್ಕರ್ಮಿಗಳ ವೀಡಿಯೊದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜಮ್ಮು ಕಾಶ್ಮೀರ ಸರ್ಕಾರವು ದೇಶದ ಇತರ ಭಾಗಗಳಲ್ಲಿ ವಾಸಿಸುವ ತಮ್ಮ ವಿದ್ಯಾರ್ಥಿಗಳಿಗಾಗಿ ಎಂಟು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಫೆಬ್ರವರಿ 2019 ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ, ದೇಶದ ಹಲವಾರು ಕಾಶ್ಮೀರಿ ವಿದ್ಯಾರ್ಥಿಗಳು ಹಿಂದುತ್ವ ದುಷ್ಕರ್ಮಿಗಳಿಂದ ದೈಹಿಕ ಬೆದರಿಕೆಗಳನ್ನು ಎದುರಿಸಿದ್ದರು. ಆ ಸಮಯದಲ್ಲಿ, ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾಶ್ಮೀರಿ ವಿದ್ಯಾರ್ಥಿಗಳು ಮತ್ತು ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆಯನ್ನು ನೀಡಿತ್ತು. ಕಾಶ್ಮೀರಿ ವಿದ್ಯಾರ್ಥಿಗಳ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...