Homeಕರ್ನಾಟಕಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು

ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು

- Advertisement -
- Advertisement -

ಹುಬ್ಬಳ್ಳಿಯಲ್ಲಿ ದೇಶದ್ರೋಹದ ಆರೋಪದ ಮೇಲೆ ಬಂಧಿಸಲ್ಪಟ್ಟ ಜಮ್ಮು ಕಾಶ್ಮೀರದ ಮೂವರು ವಿದ್ಯಾರ್ಥಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ವಿಳಂಬವಾದ ಕಾರಣ ಪ್ರಕರಣದ ತನಿಖಾ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಆರೋಪಿತ ವಿದ್ಯಾರ್ಥಿಗಳು ಒಂದು ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾ ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದರು. ಕೊರೊನಾ ಲಾಕ್‌ಡೌನ್ ಆಗಿರುವುರಿಂದ ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ವಿಫಲವಾದ ಬಗ್ಗೆ ತನಿಖೆ ನಡೆಸಿದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಉತ್ತರ ಶ್ರೇಣಿ) ರಾಘವೇಂದ್ರ ಸುಹಾಸ್ ಈ ಅಮಾನತು ಆದೇಶ ಹೊರಡಿಸಿದ್ದಾರೆ.

ಜೂನ್ 1 ರಂದು ಹುಬ್ಬಳ್ಳಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು, ಬಂಧನಕ್ಕೊಳಗಾದ ಮೂರು ತಿಂಗಳ ನಂತರ ಜೂನ್ 6 ರಂದು ಬಿಡುಗಡೆ ಆಗಿದ್ದರು. ಪ್ರಕರಣದ ಚಾರ್ಜ್‌ಶೀಟ್ ಅನ್ನು ಜೂನ್ 4 ರಂದು ಸಲ್ಲಿಸಲಾಯಿತು. ಬಂಧನದ 90 ದಿನಗಳ ಒಳಗೆ ಚಾರ್ಜ್‌ಶೀಟ್ ಸಲ್ಲಿಸಬೇಕು ಎಂಬ ನಿಯಮವಿದೆ. 91 ನೇ ದಿನ ಆರೋಪಿಗಳು ಜಾಮೀನು ಪಡೆಯಲು ಅರ್ಹರಾಗುತ್ತಾರೆ.

ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳಾದ ತಾಲಿಬ್ ಮಜೀದ್, ಬಸಿತ್ ಆಸಿಫ್ ಸೋಫಿ ಮತ್ತು ಅಮೀರ್ ಮೊಹಿಯುದ್ದೀನ್ ವಾಹಿ ಹುಬ್ಬಳ್ಳಿಯ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಲಿಯುತ್ತಿದ್ದು, ಅವರನ್ನು ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದ್ದರು ಎಂದು ಫೆಬ್ರವರಿಯಲ್ಲಿ ಬಂಧಿಸಲಾಗಿತ್ತು.


ಓದಿ: ಪಾಕ್‌ ಪರ ಘೋಷಣೆಯ ಆರೋಪಿಗಳಿಗೆ ವಕಾಲತ್ತು ನಿರ್ಬಂಧ : ಹುಬ್ಬಳ್ಳಿ ಬಾರ್‌ ಅಸೋಷಿಯೇಶನ್‌ಗೆ ಹೈಕೋರ್ಟ್‌ ಛೀಮಾರಿ


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...