Homeಕರ್ನಾಟಕಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

- Advertisement -
- Advertisement -

-ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ

-ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಸುಬ್ರಹ್ಮಣ್ಯ:  ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ.ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಣೆ ಮಾಡಿದ್ದು, ವರದಿಯನ್ನು ನಾವು ತಿರಸ್ಕಾರ ಮಾಡಿದ್ದೇವೆ. ಪಶ್ಚಿಮ ಘಟ್ಟ ಸಂರಕ್ಷಣೆಗೂ ಜನ ಆದ್ಯತೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತಮಾನಗಳಿಂದ ಜನ ಇಲ್ಲಿ ವಾಸಿಸುತ್ತಿದ್ದು, ಅರಣ್ಯದಂಚಿನ ಜನರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ತಿಳಿಸಿದ್ದೇವೆ ಎಂದರು.

ಜಂಟಿ ಸರ್ವೆಗೆ ಸಂಬಂಧಿಸಿ ಕಂದಾಯ, ಅರಣ್ಯ ಸಚಿವರು, ಅಧಿಕಾರಿಗಳು ಜಂಟಿಯಾಗಿ ಸಭೆ ನಡೆಸಿ ಜಂಟಿ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆಗೆ ಸಮಿತಿ ರಚಿಸಲಾಗಿದೆ. ಅದರಂತೆ ಮುಂದಿನ ಆರು ತಿಂಗಳಲ್ಲಿ ಸರ್ವೆ ನಡೆಸಿ ವಾಸ್ತವದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಈ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಯಲಿದೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಹಸಿರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಿದ್ದಾರೆ. 2023ರಿಂದ 2025ರ ಮಧ್ಯೆ ರಾಜ್ಯದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗುವ ವಿಶ್ವಾಸ ಇದೆ ಎಂದರು.

ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾರ್ಚ್ ವರೆಗಿನ ವರದಿ. ಆ ಸಮಯದಲ್ಲಿ ಈ ಹಿಂದಿನ ಸರ್ಕಾರ ಅಧಿಕಾರದಲ್ಲಿತ್ತು. ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. 2023ರಿಂದ 2025 ರಲ್ಲಿ ಕರ್ನಾಟಕ ರಾಜ್ಯದಲ್ಲಿಅರಣ್ಯ ಪ್ರದೇಶ ಜಾಸ್ತಿಯಾಗುವ ವಿಶ್ವಾಸ ಇದೆ ಎಂದರು.

ಸಂಸದ ಸಾಗರ್ ಖಂಡ್ರೆ, ಡಿಸಿಎಫ್ ಅಂತೋಣಿ ಮರಿಯಪ್ಪ, ಎಸಿಎಫ್ ಪ್ರವೀಣ್ ಕುಮಾರ್, ವಿಮಲ್ ಬಾಬು, ಮಂಜುನಾಥ್, ಸಂಧ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಭಾಗವಹಿಸಿದ್ದರು.

ಸುವರ್ಣ ಸೌಧದಲ್ಲಿ….

ಸುವರ್ಣಸೌಧ (ವಿಧಾನಪರಿಷತ್ತು): ಪಶ್ಚಿಮ ಘಟ್ಟದ ಕುರಿತಾಗಿ ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಸಚಿವ ಸಂಪುಟದ ಉಪಸಮಿತಿಯಲ್ಲಿ ತಿರಸ್ಕರಿಸಲಾಗಿದ್ದು, ಸಚಿವ ಸಂಪುಟದ ಮುಂದೆಯೂ ವಿಷಯ ತಂದು ಅಲ್ಲಿಯೂ ವರದಿ ತಿರಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್‌.ಶಂಕರ್‌ ಹೇಳಿದ್ದರು.

ಪ್ರಶ್ನೋತ್ತರ ವೇಳೆಯಲ್ಲಿ  ಕಾಂಗ್ರೆಸ್‌ ಸದಸ್ಯ ಐವನ್‌ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಕುರಿತಾಗಿ ಕೇಂದ್ರದಿಂದ  ಪದೇ ಪದೇ ಒತ್ತಡ ಬರುತ್ತಿದೆ. ಆದರೆ ಅದನ್ನು ಒಪ್ಪುವ ಪ್ರಮೇಯವೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.

ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ಕಸ್ತೂರಿ ರಂಗನ್‌ ವರದಿಯನ್ನು ಕೇರಳ ಸರಕಾರ ಈಗಾಗಲೇ ತಿರಸ್ಕರಿಸಿದ್ದು, ಇಲ್ಲಿಯೂ ತಿರಸ್ಕಾರ ಮಾಡಬೇಕೆಂದರು. ಇದಕ್ಕೂ ಮೊದಲು ಮಾತನಾಡಿದ ಐವನ್‌ ಡಿಸೋಜಾ,  ರಾಜ್ಯದ 10 ಜಿಲ್ಲೆ, 40 ತಾಲೂಕು, 1,576 ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಕಸ್ತೂರಿ ರಂಗನ್‌ ವರದಿಯಲ್ಲಿ ಪ್ರಸ್ತಾಪಿಸಲಾಗಿದ್ದು, ಶೇ.20ಕ್ಕಿಂತ ಹೆಚ್ಚು  ಅರಣ್ಯ ಪ್ರದೇಶ ಹೊಂದಿದ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಿ, ಅಲ್ಲಿ ಯಾವುದೇ ಕೈಗಾರಿಕೆ, ಅಭಿವೃದ್ಧಿ ಕಾರ್ಯಕೈಗೊಳ್ಳುವಂತಿಲ್ಲ. ದಕ್ಷಿಣ ಕನ್ನಡದ 45 ಗ್ರಾಮಗಳು ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದಿದ್ದರು.

ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದರು.

 

 

 

 

 

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದರು.

ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಜುಲೈ 31, 2024ರ ಆರನೇ ಕರಡು ಅಧಿಸೂಚನೆಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಗುರುತಿಸಿತ್ತು.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿತ್ತು.

ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...