Homeಕರ್ನಾಟಕಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

- Advertisement -
- Advertisement -

ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ನಾಯಕರಲ್ಲಿ ಇದೀಗ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರೇಣುಕಾಚಾರ್ಯ ಅವರು, ”ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯೆಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

”ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತೆಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ” ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ಈ ಆರೋಪ ಕೇಳಿಯೂ ಕಟೀಲ್ ಸುಮ್ಮನಿರುವುದೇಕೆ?: ಕಾಂಗ್ರೆಸ್ ಪ್ರಶ್ನೆ

”ರಾಜ್ಯಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ?” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್

0
ಸುದ್ದಿ ವಾಹಿನಿಗಳು ಮತ್ತು ಮುದ್ರಣ ಮಾಧ್ಯಮಗಳು ತನ್ನ ವಿರುದ್ದ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಜಿ ಉಪ ಮುಖ್ಯ ಮುಖ್ಯಮಂತ್ರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪುತ್ರ...