Homeಮುಖಪುಟಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

ಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

- Advertisement -
- Advertisement -

ಕಥಕ್ ದಂತಕಥೆ 83 ವರ್ಷದ ಪಂಡಿತ್ ಬಿರ್ಜು ಮಹಾರಾಜ್ ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಭಾರತದ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರಾಗಿದ್ದ ಮತ್ತು  ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಪಡೆದವರು ಪಂಡಿತ್ ಬಿರ್ಜು ಮಹಾರಾಜ್. ಅವರ ಶಿಷ್ಯರು ಮತ್ತು ಅನುಯಾಯಿಗಳು ಅವರನ್ನು ಪ್ರೀತಿಯಿಂದ ಪಂಡಿತ್-ಜಿ ಅಥವಾ ಮಹಾರಾಜ್-ಜಿ ಎಂದು ಕರೆಯುತ್ತಿದ್ದರು.

ವರದಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿರ್ಜು ಮಹಾರಾಜ್ ತನ್ನ ಮೊಮ್ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟು ಅವರು ಪ್ರಜ್ಞಾಹೀನರಾದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ  ಸಂಭವಿಸಿದಾಗ ಅವರು ನಮ್ಮೊಂದಿಗಿದ್ದರು. ಅವರು ಸಂಗೀತ ಪ್ರಿಯರಾಗಿದ್ದರಿಂದ ಭೋಜನ ಮಾಡಿದ ನಂತರ ಅವರು  ಮತ್ತು ನಾವು ‘ಅಂತಕ್ಷರಿ’ ನಡೆಸುತ್ತಿದ್ದೆವು. ಅವರು ಮಲಗಿದ್ದರು ತದನಂತರ ಇದ್ದಕ್ಕಿದ್ದಂತೆ ಅವರ ಉಸಿರಾಟವು ಏರಿಳಿತವಾಯಿತು. ಅವರು ಹೃದ್ರೋಗಿಯೂ ಆಗಿದ್ದರಿಂದ ಇದು ಹೃದಯ ಸ್ತಂಭನ ಎಂದು ನಾವು ಭಾವಿಸುತ್ತೇವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

“ಇದು ಮಧ್ಯರಾತ್ರಿ 12.15 ರಿಂದ 12.30 ರ ನಡುವೆ ಸಂಭವಿಸಿದೆ. ನಾವು ಆಸ್ಪತ್ರೆಗೆ ದಾಖಲಿಸಿದೆವು ಆದರೆ ದುರದೃಷ್ಟವಶಾತ್, ನಮಗೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯನ್ನು ತಲುಪುವ ಮೊದಲೇ ಅವರು ಸಾವನ್ನಪ್ಪಿದರು. ಈ ಘಟನೆ ಸಂಭವಿಸಿದಾಗ ಅವರ ಇಬ್ಬರು ಶಿಷ್ಯರು ಮತ್ತು ಅವರ ಇಬ್ಬರು ಮೊಮ್ಮಕ್ಕಳು, ನನ್ನ ತಂಗಿ ಯಶಸ್ವಿನಿ ಮತ್ತು ನಾನು ಅವರೊಂದಿಗೆ ಇದ್ದೆವು, ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ನಗುತ್ತಿದ್ದರು” ಎಂದು ಸ್ವತಃ ಕಥಕ್ ನೃತ್ಯಗಾರ್ತಿ ಬಿರ್ಜು ಮಹಾರಾಜ್ ಅವರ ಮೊಮ್ಮಗಳು ರಾಗಿಣಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಅಂದಹಾಗೆ ಬಿರ್ಜು ಮಹಾರಾಜ ಅವರ ದೇಹ ಪಾಶ್ಚಾತ್ಯ ನೃತ್ಯಪಟುಗಳಂತೆ ತೆಳ್ಳಗೆ ಸಪೂರವಾಗಿರಲಿಲ್ಲ. ತಮ್ಮನ್ನು ತಾವು ಖಾತೆಪೀತೆ ಘರ್ ಕಾ ಎಂದು ಕರೆದುಕೊಳ್ಳುತ್ತಿದ್ದ ಅವರು ಚೆನ್ನಾಗಿ ತಿಂದು ದುಂಡದುಂಡಗೆ ಇದ್ದರು. ಒಂದು ಸಲ ವಿದೇಶದಲ್ಲಿ ಕಾರ್ಯಕ್ರಮ ನೀಡಬೇಕಾಗಿತ್ತು. ಆಗ ಅಲ್ಲಿಯ ಭದ್ರತಾ ಸಿಬ್ಬಂದಿ, ಬಿರ್ಜು ಮಹಾರಾಜ ಅವರ ತಂಡದವರಿಗೆ ಒಳಗೇ ಬಿಡಲಿಲ್ಲ. ಇಲ್ಲ, ನಾವೇ ನೃತ್ಯಪಟುಗಳು, ಈಗ ಕಾರ್ಯಕ್ರಮ ನೀಡಬೇಕಾಗಿದ್ದು ನಾವೇ ಎಂದು ಪದೇಪದೇ ವಿನಂತಿಸಿಕೊಂಡರೂ ಬಿಡಲಿಲ್ಲ. ಕೊನೆಗೆ ಇವರ ಮನವಿಗೆ ಸೋತು, ಆ ಭದ್ರತಾ ಸಿಬ್ಬಂದಿ ಕೊನೆಗೂ ತಂಡದವರನ್ನು ಒಳಗೆ ಬಿಡಲು ಒಪ್ಪಿದ. ಆದರೆ ಯಾವ ಆಂಗಲ್ ನಲ್ಲೂ ನೃತ್ಯ ಮಾಡುವವನಂತೆ ಕಾಣದ ಈ ಒಬ್ಬ ವ್ಯಕ್ತಿಯನ್ನು, ಮಾತ್ರ ಒಳಗೆ ಬಿಡಲು ಒಪ್ಪಲಿಲ್ಲ. ಆ ವ್ಯಕ್ತಿಯೇ ಬಿರ್ಜು ಮಹಾರಾಜ. ಇದನ್ನು ತಾವೇ ಒಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು ಬಿರ್ಜು ಮಹಾರಾಜ ಅವರು.

ಅವರ ನಿಧನದ ಸುದ್ದಿ ಬರುತ್ತಿದ್ದಂತೆ ಸಾಗರೋಪಾದಿಯಲ್ಲಿ ಸಂತಾಪಗಳು ಹರಿದು ಬಂದಿವೆ.

“ಲೆಜೆಂಟರಿ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನವು ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಇದು ಭಾರತೀಯ ಸಂಗೀತ ಮತ್ತು ಸಾಂಸ್ಕೃತಿಕ ಜಾಗದಲ್ಲಿ ಆಳವಾದ ಶೂನ್ಯವನ್ನು ಉಂಟುಮಾಡುತ್ತದೆ. ಅವರು ಕಥಕ್ ಅನ್ನು ಜಾಗತಿಕವಾಗಿ ಜನಪ್ರಿಯಗೊಳಿಸಲು ಅಪ್ರತಿಮ ಕೊಡುಗೆಯನ್ನು ನೀಡುವ ಮೂಲಕ ಐಕಾನ್ ಆದವರು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಾಂತ್ವನ ಹೇಳಿದ್ದಾರೆ.

“ಭಾರತೀಯ ನೃತ್ಯಕ್ಕೆ ವಿಶ್ವದಾದ್ಯಂತ ವಿಶೇಷ ಮನ್ನಣೆ ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಸಂಸ್ಕೃತ ಬೇಡ, ಕನ್ನಡ ಬೇಕು: ಗೋಕಾಕ್ ಚಳವಳಿ ಕುರಿತು ಚಂಪಾರವರ ಸಂದರ್ಶನದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...