Homeಕರ್ನಾಟಕಕಾವೇರಿ ಸಂಕಷ್ಟ: ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರು ಪತ್ರ ಬರೆದಿರುವುದು ಸ್ವಾಗತಾರ್ಹ ಎಂದ ಸಿಎಂ ಸಿದ್ದರಾಮಯ್ಯ

ಕಾವೇರಿ ಸಂಕಷ್ಟ: ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರು ಪತ್ರ ಬರೆದಿರುವುದು ಸ್ವಾಗತಾರ್ಹ ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಗ್ಗೆ ಟ್ವೀಟ್ ಮಾಡಿದ್ದು, ”ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ” ಎಂದು ಪತ್ರದ ಪ್ರತಿಗಳನ್ನು ಹಂಚಿಕೊಂಡಿದ್ದಾರೆ.

ದೇವೇಗೌಡ ಅವರ ಟ್ವೀಟ್‌ನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ”ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

”ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನಿ ಮೋದಿ ಅವರನ್ನು ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

”ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...