Homeಮುಖಪುಟತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರೇ ಇಲ್ಲ, CWMA ಆದೇಶಕ್ಕೆ ತಡೆಗೆ ಸುಪ್ರೀಂ ಮೊರೆ: ಸಿಎಂ...

ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರೇ ಇಲ್ಲ, CWMA ಆದೇಶಕ್ಕೆ ತಡೆಗೆ ಸುಪ್ರೀಂ ಮೊರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ತಮಿಳುನಾಡಿಗೆ ಹರಿಸಲು ನಮ್ಮ ಬಳಿ ನೀರೇ ಇಲ್ಲ. ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿದೆ. ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನೀರು ಬಿಡಬಾರದು ಎಂದಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ. ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ, ಗಟ್ಟಿಯಾಗಿ ನಿಲ್ಲಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆ ಸಂಜೆ ಸಭೆ ನಡೆಸುತ್ತಿದ್ದೇವೆ. ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ತಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕಾವೇರಿ ನೀರು ಸಂಕಷ್ಟ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್ ನಲ್ಲಿ ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜತೆ ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಅಭಾವ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ಸಭೆಯಲ್ಲಿ ಸಂಸದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಡಿ ವಿ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್, ವೀರೇಂದ್ರ ಹೆಗ್ಗಡೆ, ಡಿ ಕೆ ಸುರೇಶ್, ಪ್ರತಾಪ್ ಸಿಂಹ, ಪ್ರಜ್ವಲ್ ರೇವಣ್ಣ, ಸುಮಲತಾ ಅಂಬರೀಶ್, ತೇಜಸ್ವಿ ಸೂರ್ಯ, ಜಿ ಸಿ ಚಂದ್ರಶೇಖರ್, ರಾಜ್ಯದ ಸಚಿವರಾದ ಚಲುವರಾಯಸ್ವಾಮಿ, ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ದೆಹಲಿಯಲ್ಲಿ ಕರ್ನಾಟಕ ಸರಕಾರದ ಪ್ರತಿನಿಧಿ ಟಿ ಬಿ ಜಯಚಂದ್ರ ಸೇರಿದಂತೆ ಬಹುತೇಕ ಸಂಸದರು, ರಾಜ್ಯಸಭೆ ಸದಸ್ಯರು ಭಾಗವಹಿಸಿದ್ದರು.

ಇದನ್ನು ಓದಿ: ಮಹಿಳಾ ಮೀಸಲಾತಿ ಮಸೂದೆ: ದೇವೇಗೌಡರ ಕನಸು ನನಸಾಗುತ್ತಿದೆ ಎಂದ ಕುಮಾರಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...