Homeಕರ್ನಾಟಕಜಲ ವಿವಾದ: ಪ್ರಧಾನಿ ಬಳಿ ಸರ್ವ ಪಕ್ಷ ನಿಯೋಗ ಕೊಂಡೊಯ್ಯಲಾಗುವುದು; ಸಿಎಂ ಸಿದ್ದರಾಮಯ್ಯ

ಜಲ ವಿವಾದ: ಪ್ರಧಾನಿ ಬಳಿ ಸರ್ವ ಪಕ್ಷ ನಿಯೋಗ ಕೊಂಡೊಯ್ಯಲಾಗುವುದು; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಜಲ ವಿವಾದಕ್ಕೆ ಸಂಬಂಧಿಸಿ ಪ್ರಧಾನಿ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷದ ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ, ಮಹಾದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲಾಗುವುದು  ಎಂದು ಹೇಳಿದ್ದಾರೆ.

ಸಭೆಯಲ್ಲಿ ಕರ್ನಾಟಕ ರಾಜ್ಯ ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯ  ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ವಿವರಿಸಿದ್ದಾರೆ. ಮಾಜಿ ಸಿಎಂಗಳು ಈ ವೇಳೆ ಅಭಿಪ್ರಾಯ ತಿಳಿಸಿದ್ದಾರೆ. ನಾಡಿನ, ಜನರ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಳ್ಳುವ ನಿಲುವುಗಳಿಗೆ ಸರ್ವಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕನ್ನಡ ನಾಡು, ನುಡಿ, ಜಲ, ಭೂಮಿ, ವಿಚಾರದಲ್ಲಿ ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ತಮಿಳುನಾಡಿಗೆ ನಾವು ಇಲ್ಲಿಯವರೆಗೆ  24 ಟಿಎಂಸಿ ನೀರು ಬಿಡುಗಡೆ ಮಾಡಿದ್ದೇವೆ. ನಾವು ಸಮರ್ಥ ವಾದ ಮಂಡಿಸಿದ್ದರಿಂದಲೇ ತಮಿಳುನಾಡಿನ ಬೇಡಿಕೆಗಿಂತ ಕಡಿಮೆ ನೀರು ಬಿಡಲು ಆದೇಶವಾಯಿತು. ಇಲ್ಲದಿದ್ದರೆ  ಆದೇಶದಲ್ಲಿನ ನೀರಿನ ಪ್ರಮಾಣ ಇನ್ನೂ ಹೆಚ್ಚಿರುತ್ತಿತ್ತು. ನಮ್ಮ ಕಾನೂನು ತಂಡ ಸಮರ್ಥವಾಗಿದ್ದು, ತಂಡಕ್ಕೆ ಅಗತ್ಯವಾದ ನೆರವು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಿದ್ದೇವೆ. ಆಗ ‌ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಈಗ 10 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ಮುಂದಕ್ಕೆ ಸಮರ್ಥ ವಾದ ಮಂಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಭೆಯಲ್ಲಿ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ವೀರಪ್ಪ ಮೊಯ್ಲಿ , ಸದಾನಂದಗೌಡ, ಜಗದೀಶ್ ಶೆಟ್ಟರ್, ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸರ್ವಪಕ್ಷದ ಮುಖಂಡರು, ರೈತ ಸಂಘದ ಮುಖಂಡರು, ಸಂಸದರು ಭಾಗಿಯಾಗಿದ್ದರು.

ಇದನ್ನು ಓದಿ: ಜಾದವ್‌ಪುರ ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯ ಬೆತ್ತಲೆ ಮೆರವಣಿಗೆ: ತನಿಖೆಯಲ್ಲಿ ಬಯಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...