Homeಕರ್ನಾಟಕಕಾವೇರಿ ವಿವಾದ: ಸುಪ್ರೀಂ ಆದೇಶಕ್ಕೆ ವಿರೋಧ; ರಾಜ್ಯದ ಹಲವೆಡೆ ಪ್ರತಿಭಟನೆ

ಕಾವೇರಿ ವಿವಾದ: ಸುಪ್ರೀಂ ಆದೇಶಕ್ಕೆ ವಿರೋಧ; ರಾಜ್ಯದ ಹಲವೆಡೆ ಪ್ರತಿಭಟನೆ

- Advertisement -
- Advertisement -

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್‌ ಸೂಚಿಸಿದ ಬೆನ್ನಲ್ಲೇ ರಾಜ್ಯದ ವಿವಧೆಡೆ ಪ್ರತಿಭಟನೆ ಭುಗಿಲೆದ್ದಿದೆ.

ಚಾಮರಾಜನಗರದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ಸೇನಾ ಪಡೆಗಳ ವತಿಯಿಂದ ಪ್ರತ್ಯೇಕವಾಗಿ ಪ್ರತಿಭಟನೆ ನಡೆದಿದೆ. ಕಬ್ಬು ಬೆಳೆಗಾರರ ಸಂಘ ಬೆಂಗಳೂರು–ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಧರಣಿ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಡ್ಯದ ಜೆ.ಸಿ ವೃತ್ತದಲ್ಲಿ ಕನ್ನಡ ಸೇನೆ ಸದಸ್ಯರು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಸರ್.ಎಂ.ವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ‌ ಸದಸ್ಯರು‌ ಕೂಡ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಕೆಆರ್‌ಎಸ್ ಜಲಾಶಯದ ಪ್ರವೇಶ ದ್ವಾರದಲ್ಲಿ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಒಳನುಗ್ಗಲು ಯತ್ನಿಸಿದ್ದು, ಈ ವೇಳೆ ಭದ್ರತಾ ಪಡೆದ ಸಿಬ್ಬಂದಿಗಳು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಮಂಡ್ಯದಲ್ಲಿ ಶನಿವಾರ ಬಂದ್‌ ಮಾಡುವುದಾಗಿ ಕೂಡ ನಿರ್ಧಾರಕ್ಕೆ ಬರಲಾಗಿದೆ.

ಇನ್ನು ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಜಮಾಯಿಸಿದ ನೂರಕ್ಕೂ ಹೆಚ್ಚು ಕನ್ನಡಪರ ಸಂಘಟನೆಯ ಸದಸ್ಯರು ವಿಧಾನಸೌಧದತ್ತ ಪಾದಯಾತ್ರೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಕ.ರ.ವೇ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ತಮಿಳುನಾಡಿಗೆ ನೀರು ಬಿಡಬಾರದು. ರೈತರು ಸಂಕಷ್ಟದ ಸಮಯದಲ್ಲಿ ರಾಜ್ಯದ ರೈತರೊಂದಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.

ಇದಲ್ಲದೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕರ್ನಾಟಕ ಬಂದ್‌ಗೆ ಕರೆ ನೀಡಲು ಮುಂದಾಗಿದ್ದು, ಈ ಕುರಿತು ನಾಳೆ ಸಭೆ ಕರೆಯಲಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಉತ್ತರಪ್ರದೇಶ: ಪೊಲೀಸರ ನಿರ್ಲಕ್ಷ್ಯ; ಮೂವರು ಆರೋಪಿಗಳು ಕಸ್ಟಡಿಯಿಂದ ಪರಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...