Homeಕರ್ನಾಟಕತಮಿಳುನಾಡಿಗೆ ಪ್ರತಿದಿನ 5,000 ಕ್ಯುಸೆಕ್ ನೀರು ಹರಿಸಲು ಆದೇಶ

ತಮಿಳುನಾಡಿಗೆ ಪ್ರತಿದಿನ 5,000 ಕ್ಯುಸೆಕ್ ನೀರು ಹರಿಸಲು ಆದೇಶ

- Advertisement -
- Advertisement -

ಕಾವೇರಿ ನೀರಾವರಿ ವಿವಾದಕ್ಕೆ ಸಂಬಂಧಿಸಿ ಪ್ರಮುಖ ಬೆಳವಣಿಗೆ ನಡೆದಿದ್ದು, ತಮಿಳುನಾಡಿಗೆ ಪ್ರತಿದಿನ 5,000 ಕ್ಯುಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ.

ಸೆ. 13 ರಿಂದ ಮುಂದಿನ 15 ದಿನಗಳವರೆಗೆ 5 ಸಾವಿರ ಕ್ಯುಸೆಕ್ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ.

ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆದಿದ್ದು, ಈ ಸಭೆಯಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶಿಸಿದ್ದು ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿ ಹಿಡಿಯಲಾಗಿದೆ.

ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಈಗಾಗಲೇ ಈ ಕುರಿತು ಪ್ರಮಾಣಪತ್ರವನ್ನು ಸಲ್ಲಿಕೆ ಮಾಡಿತ್ತು. ಅದರಲ್ಲಿ ಕಾವೇರಿ ಹಾಗೂ ಕೃಷ್ಣಾ ಕಣಿವೆಯಲ್ಲಿ ಭಾರೀ ನೀರಿನ ಕೊರತೆ ಕಾಣಿಸಿಕೊಂಡಿದ್ದು, ಹೀಗಾಗಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು  ಹೇಳಿತ್ತು. ಆದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಆದೇಶವನ್ನು ನೀಡಿದೆ.

ಇದನ್ನು ಓದಿ: ‘ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ’- ವ್ಯಕ್ತಿಯೋರ್ವರಿಗೆ ಮಹೇಶ್ ವಿಕ್ರಮ್ ಹೆಗಡೆ ಬೆದರಿಕೆ: FIR ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

0
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು...