Homeಕರ್ನಾಟಕಸಂಯುಕ್ತಾ ಹೆಗಡೆ ಜೊತೆ ಗಲಾಟೆ ಪ್ರಕರಣ: ಕವಿತಾ ರೆಡ್ಡಿ ಬಂಧನ; ಬಿಡುಗಡೆ

ಸಂಯುಕ್ತಾ ಹೆಗಡೆ ಜೊತೆ ಗಲಾಟೆ ಪ್ರಕರಣ: ಕವಿತಾ ರೆಡ್ಡಿ ಬಂಧನ; ಬಿಡುಗಡೆ

- Advertisement -
- Advertisement -

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದ ನಟಿ ಸಂಯುಕ್ತ ಹೆಗಡೆ ಅವರ ಜೊತೆ ಗಲಾಟೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಆರೋಪದಡಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ಅವರನ್ನು ಬಂಧಿಸಿದ ಪೊಲೀಸರು ನಂತರ ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.

ಘಟನೆ ಕಳೆದವಾರ ನಡೆದಿದ್ದು ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದರು. ಕವಿತಾ ರೆಡ್ಡಿ, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಆದರೆ ನಂತರ ಸಂಯುಕ್ತಾ ಹೆಗಡೆ ಬಳಿ ನಡೆದಿರುವ ಘಟನೆಗೆ ಕ್ಷಮೆ ಕೇಳಿದ್ದ ಕವಿತಾ ರೆಡ್ಡಿ, “ನಾನು ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದರ ಭಾಗವಾಗಿಯೆ ನನ್ನ ಕ್ರಿಯೆಗಳು ರೂಪುಗೊಂಡಿದ್ದವು. ವಾಗ್ವಾದ ನನ್ನ ಉದ್ವೇಗಗೊಂಡ ವರ್ತನೆಯಿಂದ ಕೊನೆಯಾಯಿತು. ಇದು ನನ್ನ ಸಮಸ್ಯೆ. ಒಬ್ಬ ನಾಗರೀಕ ಪ್ರಜೆಯಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ, ಸಂಯಕ್ತ ಹೆಗ್ಡೆ ಮತ್ತು ಅವರ ಗೆಳತಿಯರಲ್ಲಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಟ್ವಿಟ್ಟರ್‌ ವೀಡಿಯೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

‘ಗಲಾಟೆ ಸಂಬಂಧ ಸಂಯುಕ್ತ ಅವರು ದೂರು ನೀಡಿದ್ದರು. ಅದರನ್ವಯ ಎಫ್‌ಐಆರ್‌ ದಾಖಲಾಗಿತ್ತು. ಇದೀಗ ಕವಿತಾ ರೆಡ್ಡಿ ಅವರನ್ನು ಬಂಧಿಸಲಾಗಿದೆ.’ ಎಂದು ಪೊಲೀಸರು ಹೇಳಿದ್ದಾಗಿ ಪ್ರಜಾವಾಣಿ ವರದಿ ಮಾಡಿದೆ.

“ಶುಕ್ರವಾರ ಸಂಜೆ 5 ಗಂಟೆಯಲ್ಲಿ ಸ್ನೇಹಿತರ ಜತೆ ವ್ಯಾಯಾಮ ಮಾಡುತ್ತಿದ್ದರು. ಅಗರ ಕೆರೆ ಸಮಿತಿ ಸದಸ್ಯೆ ಕವಿತಾ ರೆಡ್ಡಿ, ಅನಿಲ್ ರೆಡ್ಡಿ ಹಾಗೂ ಇತರರು, ’ಸಾರ್ವಜನಿಕವಾಗಿ ತುಂಡು ಬಟ್ಟೆ ಧರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದೀರಿ’ ಎಂದು ಅವಾಚ್ಯವಾಗಿ ನಿಂದಿಸಿ, ಸಂಯುಕ್ತ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ಸಂಗತಿ ಸಂಯುಕ್ತ ಅವರ ದೂರಿನಲ್ಲಿದೆ. ತಲೆಮರೆಸಿಕೊಂಡಿರುವ ಅನಿಲ್ ರೆಡ್ಡಿ ಮತ್ತು ಇತರರಿಗಾಗಿ ಹುಡುಕಾಟ ನಡೆದಿದೆ” ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...