Homeಕರ್ನಾಟಕಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

- Advertisement -
- Advertisement -

ಕಾಂಗ್ರೆಸ್‌ನ ವಕ್ತಾರರಾಗಿದ್ದ ಕವಿತಾ ರೆಡ್ಡಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಬಹಿರಂಗವಾಗಿ  ತಮ್ಮ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿತ್ತು. “ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ” ಎಂದು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಪತ್ರದಲ್ಲಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜತೆಗೆ ಮಾತನಾಡಿದ ಕವಿತಾ ರೆಡ್ಡಿ, “ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗಿನಿಂದಲೂ ನನಗೆ ಪಕ್ಷದಲ್ಲಿ ನ್ಯಾಯ ಸಿಕ್ಕಿಲ್ಲ; ನನಗೆ ಬಹಳಷ್ಟು ಅನ್ಯಾಯವಾಗಿದೆ, ಅದಕ್ಕೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ನನಗೆ ನೋಟಿಸ್ ಯಾಕೆ ಕಳಿಸಿದ್ದಾರೆ ಎಂಬುದು ಪಕ್ಷದ ಶಿಸ್ತು ಪಾಲನಾ ಸಮಿತಿಗೆ ಗೊತ್ತಿಲ್ಲ. ನಾನು ಕಳಿಸಿರುವ 32 ಪುಟಗಳ ಸ್ಪಷ್ಟನೆಗೆ ಅವರಿಂದ ಯಾವುದೇ ಉತ್ತರ ಬಂದಿಲ್ಲ” ಎಂದರು.

“ನನಗೆ ನೋಟಿಸ್ ಕೊಟ್ಟಿರುವ ಉದ್ದೇಶ ಸ್ಪಷ್ಟವಾಗಿದೆ; ಮೊದಲೆನೆಯದಾಗಿ ನಾನು ಪರಿಶಿಷ್ಟ ಪಂಗಡದ ಹೆಣ್ಣು ಮಗಳಾದ ಭವ್ಯಾ ಸಿಂಗ್ ಪರವಾಗಿ ನಿಂತಿದ್ದು. ಮತ್ತೊಂದು, ರಾಮಲಿಂಗಾ ರೆಡ್ಡಿ ಅವರನ್ನು ವಿರೋಧಿಸಿದ್ದು. ನನ್ನ ಮೇಲಿನ ಕ್ರಮಕ್ಕೆ ಇವೇ ಪ್ರಮುಖ ಕರಾಣಗಳು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ಕಾಯುತ್ತಿದ್ದಾರೆ. ‘ರಾಮಲಿಂಗಾ ರೆಡ್ಡಿ ಅವರ ಮಗಳು ಸೌಮ್ಯಾ ರೆಡ್ಡಿ ಖಿನ್ನತೆಗೆ ಒಳಗಾಗಿದ್ದಾರೆ; ಅವರು ಅದರಿಂದ ಹೊರಗಡೆ ಬರಬೇಕಾದರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಹೇಳಿ, ತರಾತುರಿಯಲ್ಲಿ ನಿರ್ಧರಿಸಿದರೆ ನಾವು ಏನು ಮಾಡುವುದಕ್ಕೆ ಸಾಧ್ಯ” ಎಂದು ಪ್ರಶ್ನಿಸಿದರು.

ನಿಮ್ಮ ನೇರ ಆರೋಪ ಯಾರ ಮೇಲೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪಕ್ಷದ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಇನ್ಯಾರ ಮೇಲೆ ಆರೋಪ ಮಾಡುವುದು? ರಾಮಲಿಂಗಾರೆಡ್ಡಿ ತಮಗಿರುವ ಅಧಿಕಾರ ಬಳಸಿಕೊಂಡು ಅವರ ಮಗಳನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ನಮ್ಮ ಹಿಂದೆ ಯಾರಿದ್ದಾರೆ? ಪಕ್ಷದ ಅಧ್ಯಕ್ಷರು ನಮ್ಮ ಪರವಾಗಿ ನಿಲ್ಲಬೇಕಿತ್ತು. ನನಗೆ ಅನ್ಯಾಯ ಆಗಿದೆ ಎಂಬುದು ಅಧ್ಯಕ್ಷರಿಗೂ ಗೊತ್ತಿದೆ” ಎಂದರು.

ಈ ಬೆಳವಣಿಗೆಯನ್ನು ಕುಟುಂಬ ರಾಜಕೀಯದ ಪರಿಣಾಮ ಎಂದು ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕವಿತಾ, “ಖಂಡಿತಾ.. ಕುಟುಂಬ ರಾಜಕಾರಣವಲ್ಲದೆ ಮತ್ತಿನ್ನೇನು? ನಾಲ್ಕೈದು ಜನ ಮಹಿಳಾ ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದರು. ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ್ ಅಥವಾ ಬೇರೊಬ್ಬರಿಗೆ ಕೊಟ್ಟಿದ್ದರೆ ಸಾಮಾಜಿಕ ನ್ಯಾಯ ಎಂದು ನಾವು ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಇವರು ಕೊಟ್ಟಿರುವುದು ಯಾರಿಗೆ? ಏನೂ ಕೆಲಸ ಮಾಡದೇ ಇರುವ ರಾಮಲಿಂಗಾರೆಡ್ಡಿ ಅವರ ಮಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಪಕ್ಷದ ಯಾವಯಾವ ಹುದ್ದೆಯಲ್ಲಿ ಅವರು ಕೆಲಸ ಮಾಡಿದ್ದಾರೆ. ನನ್ನ ಜೊತೆಯಲ್ಲಿ ಸೌಮ್ಯಾ ಅವರನ್ನೂ ವಕ್ತಾರರನ್ನಾಗಿ ಮಾಡಿದ್ದರು. ಆದರೆ, ಆಕೆ ಮಾಡಿದ್ದೇನು? ಈವರೆಗೆ ಒಂದೇ ಒಂದು ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಇತ್ತೀಚೆಗಷ್ಟೇ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಲಾಗಿತ್ತು; ಈಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಇದಕ್ಕೆಲ್ಲಾ ಅನುಸರಿಸಿದ ಮಾನದಂಡ ಯಾವುದು” ಎಂದು ಅವರು ಬೇಸರ ಹೊರಹಾಕಿದರು.

“ಪಕ್ಷದ ಕಾರ್ಯಕರ್ತೆಯಾಗಿ ನನಗೆ ಕೇಳುವ ಅಧಿಕಾರ ಇದೆ.. ಅದಕ್ಕಾಗಿ ಪ್ರಶ್ನೆ ಮಾಡುತ್ತೇನೆ. ಪಕ್ಷ ಎಲ್ಲರಿಗೂ ಸೇರಿದ್ದು; ಇಂತಹ ಒಂದು ಕಾರಣಕ್ಕೆ ನಾವು ಅವರನ್ನು (ಸೌಮ್ಯಾ ರೆಡ್ಡಿ) ಅಧ್ಯಕ್ಷರನ್ನಾಗಿ ಮಾಡುತ್ತಿದ್ದೇವೆ ಎಂದು ನಮಗೆ ಪಕ್ಷದ ಅಧ್ಯಕ್ಷರು ಕರೆದು ಹೇಳಬಹುದಿತ್ತು. ದುಡ್ಡಿನ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಅಥವಾ ಅವರ ಅಪ್ಪನನ್ನು ಓಲೈಕೆ ಮಾಡುವುದಕ್ಕೆ ಸ್ಥಾನ ಕೊಡುತ್ತಿದ್ದೇವೆ ಎಂದು ಹೇಳಿದ್ದಿದ್ದರೆ, ರಾಜಕಾರಣಿಯಾಗಿ ನಾನೂ ಅರ್ಥ ಮಾಡಿಕೊಳ್ಳುತ್ತಿದ್ದೆ” ಎಂದು ಅವರು ಆಕ್ರೋಶ ಹೊರಹಾಕಿದರು.

ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ, “ನ್ಯಾಯ ಸಿಗದೇ ಇದ್ದರೆ ಮುಂದಿನ ನಡೆ ಏನಿರುತ್ತೆ..? ನನ್ನ ಹೋರಾಟ ಮುಂದುವರಿಯುತ್ತದೆ. ಅನ್ಯಾಯ ಮತ್ತು ಮಹಿಳಾ ಶೋಷಣೆ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇನೆ. ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡಿರುವ ನಾನು ಸಿದ್ಧಾಂತದಲ್ಲಿ ಎಷ್ಟು ಕಮಿಟೆಡ್ ಎಂಬುದು ಹಲವರಿಗೆ ಗೊತ್ತಿದೆ. ನನ್ನಂತವರಿಗೆ ಇಷ್ಟು ಕಿರುಕುಳ ನೀಡುತ್ತಿದ್ದಾರೆ. ಇನ್ನು ಸಾಮಾನ್ಯ ಕಾರ್ಯಕರ್ತರಿಗೆ ಪಕ್ಷದಲ್ಲಿ ಜಾಗ ಎಲ್ಲಿ ಸಿಗುತ್ತದೆ” ಎಂದು ಕವಿತಾ ಭಾವುಕರಾದರು.

“ನನಗೆ ನ್ಯಾಯ ಸಿಗುವುದಿಲ್ಲ ಎಂಬುದು ಅವರ ನಡೆಯಿಂದಲೇ ಸ್ಪಷ್ಟವಾಗಿದೆ. ಶಿಸ್ತು ಕ್ರಮ ನನಗೆ ಮಾತ್ರ ಯಾಕೆ..? ಪಕ್ಷ ಮತ್ತು ಅಧ್ಯಕ್ಷರ ವಿರುದ್ಧ ಹಲವು ಸಚಿವರು, ಶಾಸಕರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರಿಗೆಲ್ಲಾ ನೋಟಿಸ್ ನೀಡಿ ಅಮಾನತು ಮಾಡಿಲ್ಲ ಯಾಕೆ? ನಾನು ಹೆಣ್ಣು ಮಗಳು ಎಂಬ ಕಾರಣಕ್ಕೆ ಅಮಾನತು ಮಾಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...