Homeಕರ್ನಾಟಕತುಮಕೂರಿನಲ್ಲಿ 'ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ' ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

- Advertisement -
- Advertisement -
‘ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರೈತರ ನೆರವಿಗೆ ಶಕ್ತಿ ಬರುತ್ತಿಲ್ಲ. ಹೀಗಾಗಿ ರೈತರು, ಅಲೆಮಾರಿಗಳು, ಬುಡಕಟ್ಟುಗಳು, ಮಹಿಳೆಯರು ಮತ್ತು ಇಡೀ ದಕ್ಷಿಣ ಭಾರತವೇ ಅಲ್ಪಸಂಖ್ಯಾತವಾಗಿದ್ದು ಇವರ ನೆರವಿಗೆ ಯಾರೂ ಬರುತ್ತಿಲ್ಲ’ ಎಂದು ಹಿರಿಯ ವಿಮರ್ಶಕ ಡಾ. ನಟರಾಜ್ ಬೂದಾಳ್ ವಿಷಾದ ವ್ಯಕ್ತಪಡಿಸಿದರು.
ಬುಡಕಟ್ಟು ಜನರ ದನಿಗೆ ದನಿಗೂಡುತ್ತಿಲ್ಲ. ಮಹಿಳೆಯರು ಅಲ್ಪಸಂಖ್ಯಾತರಾಗಿಯೇ ಉಳಿದಿದ್ದಾರೆ. ಹಾಗೆಯೇ ಅವರು ಮಾತನಾಡುವ ಭಾಷೆ, ಅಭಿವ್ಯಕ್ತಿ ಲೆಕ್ಕಕ್ಕೇ ಇಲ್ಲದಂತಹ ಪರಿಸ್ಥಿತಿ ಇದೆ. ಲೆಕ್ಕಕ್ಕೆ ಸಿಗದಂತೆ ನೋಡಿ ಕೊಳ್ಳುವ ಜಾಣ್ಮೆಯೂ ಮುಂದುವರಿದಿದೆ. ಅಲ್ಪಸಂಖ್ಯಾತ ದಕ್ಷಿಣ ಭಾರತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಯಾರ ಗಮನವೂ ಇತ್ತ ಕಡೆ ಇಲ್ಲವಾಗಿದೆ ಎಂದು ಹೇಳಿದರು.
ತುಮಕೂರಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ರವಿಕುಮಾರ್ ನೀಹ ಅವರು ಬರೆದಿರುವ ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾವು ಓದುವ ಓದು ನಮ್ಮ ದಾಗಿಲ್ಲ. ನಾವು ಓದುತ್ತಿರುವುದು ನಮ್ಮದಲ್ಲದ ಬೇರೆ ಪಠ್ಯ. ಹಾಗಾಗಿ ಕಣ್ಣು ಧರಿಸಿಕೊಂಡು ಓದಬೇಕಾದ ಅನಿವಾರ್ಯತೆ ಇದೆ. ಮಂಟೇಸ್ವಾಮಿ, ಮಲೆ ಮಹಾದೇಶ್ವರ, ಜುಂಜಪ್ಪ ಕಾವ್ಯ ನಮ್ಮದಾದರೂ ಇವುಗಳನ್ನು ಓದುವ ಕ್ರಮ ನಮ್ಮದಾಗಿಲ್ಲ. ಇಂತಹ ಸಂದರ್ಭದಲ್ಲಿ  ನಮ್ಮದೇ ಕ್ರಮದಲ್ಲಿ ಓದಬೇಕು ಎಂದು ಸಲಹೆ ನೀಡಿದರು.
ಇಲ್ಲಿ ನಮ್ಮದೇ ಅಕ್ಷರ, ನಮ್ಮದೇ ಪಠ್ಯವನ್ನು ನಮ್ಮದೇ ರೀತಿಯಲ್ಲಿ ಓದುತ್ತಿಲ್ಲ. ಅಕ್ಷರ ಮತ್ತು ಪಠ್ಯ ಮತ್ತು ಓದನ್ನು ನಿಯಂತ್ರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಾಗಾಗಿ ಓದು ನಮ್ಮದಾಗಬೇಕು. ಆಗ ಪಠ್ಯ ಮತ್ತು ಅಕ್ಷರ ನಮ್ಮದಾಗುತ್ತದೆ. ಮಂಟೇಸ್ವಾಮಿ, ಕಾವ್ಯದಲ್ಲಿ ಬರುವ ನಾಯಕ ತನ್ನದೇ ಲೋಕ ನಿರ್ಮಿಸಿ ದೇವರನ್ನು ಸೃಷ್ಟಿಸುತ್ತಾರೆ. ಅವರಿಗೆ ವಿವಾಹವನ್ನು ಮಾಡುತ್ತಾರೆ. ತಾನೇ ಧರಗೆ ದೊಡ್ಡವನಾಗಿ ಮೆರೆಯುತ್ತಾನೆ. ಇಂತಹ ಕ್ರಿಯೆಗಳು ನಡೆಯಬೇಕು. ಆಗ ಲೋಕ ನಮ್ಮದಾಗುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲೆ ಅತ್ಯಂತ ಪ್ರಮುಖ ಲೇಖಕರು ಮತ್ತು ಗಟ್ಟಿ ಸಾಹಿತ್ಯವನ್ನು ನೀಡಿದೆ ಎಂದು ಬೇರೆ ಕಡೆ ಹೇಳುವುದು ರೂಢಿಯಲ್ಲಿದೆ. ಹಾಗೆಯೇ ಇಲ್ಲಿ ಅಷ್ಟೇ ಭಿನ್ನಧ್ವನಿಯೂ ಇದೆ. ಕೆ.ಬಿ.ಸಿದ್ದಯ್ಯ ಕಾವ್ಯ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅದು ಕನ್ನಡ ಸಾಹಿತ್ಯ ಲೋಕದಲ್ಲಿ ಬಹುಮುಖ್ಯ ಕಾವ್ಯವಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಜನಪರ ಚಿಂತಕ ಕೆ.ದೊರೈರಾಜ್, ಲೇಖಕ ಡಾ.ರಾಜಪ್ಪ ದಳವಾಯಿ, ಲೇಖಕಿ ಮಲ್ಲಿಕಾ ಬಸವರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ, ಯುವ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಉಪನ್ಯಾಸಕ ಕೊಟ್ಟಶಂಕರ್, ಗುಬ್ಬಚ್ಚಿ ಸತೀಶ್, ಕೃತಿಕಾರ ಡಾ. ರವಿಕುಮಾರ್ ನೀಹ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...