Homeಮುಖಪುಟರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

- Advertisement -
- Advertisement -

ಕೆಸಿಆರ್ ಎಂದೇ ಖ್ಯಾತರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಯಾವುದೋ ಒಂದು ದೊಡ್ಡ ಪ್ರಯೋಗದಲ್ಲಿ ತೊಡಗಿದ್ದಾರೆ.

ಅಧಿಕೃತವಾಗಿ ಇನ್ನೂ ಘೋಷಿಸದಿದ್ದರೂ, ತೆಲಂಗಾಣ ರಾಷ್ಟ್ರ ಸಮಿತಿ (TRS) ಶೀಘ್ರದಲ್ಲೇ BRS (ಭಾರತೀಯ ರಾಷ್ಟ್ರ ಸಮಿತಿ) ಎಂದು ಮರುನಾಮಕರಣಗೊಂಡು ರಾಷ್ಟ್ರೀಯ ಪಕ್ಷವಾಗಿ ಹೊಮ್ಮಲಿದೆ. ಕೆಸಿಆರ್ ಅವರು ತಮ್ಮ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿದ್ಯಮಾನದ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈವಾಡವಿದೆ ಎಂದು ಕೆಲವರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಆಕಾಂಕ್ಷೆಯನ್ನು ಹೊಂದಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ (ಎನ್‌ಟಿಆರ್) ನಂತರದಲ್ಲಿ ಈ ಹೆಜ್ಜೆ ಇರಿಸುತ್ತಿರುವ ದಕ್ಷಿಣ ಭಾರತದ ಮೊದಲು ರಾಜಕಾರಣಿ ಎಂದು ಕೆಸಿಆರ್‌ ಅವರನ್ನು ಕೆಲವರು ಗುರುತಿಸುತ್ತಿದ್ದಾರೆ.

‘ನ್ಯೂಸ್‌ ಮಿನಿಟ್‌’ ಜೊತೆ ಮಾತನಾಡಿರುವ ರಾಜಕೀಯ ವಿಶ್ಲೇಷಕ ಪಿ.ಪವನ್, “ಎನ್‌ಟಿಆರ್ ರಾಷ್ಟ್ರೀಯ ಪಕ್ಷ (ಭಾರತ ದೇಶಂ ಪಕ್ಷ) ಪ್ರಾರಂಭಿಸಲು ಪ್ರಯತ್ನಿಸಿದರೂ ಯಶಸ್ಸಾಗಲಿಲ್ಲ. ನಂತರ, ಚಂದ್ರಬಾಬು ನಾಯ್ಡು ಅವರು ಟಿಡಿಪಿಯನ್ನು ರಾಷ್ಟ್ರೀಯ ಪಕ್ಷವಾಗಿ ನೋಂದಾಯಿಸಿಕೊಂಡರು. ಆದರೆ ಪ್ರಧಾನಿ ಸ್ಥಾನದ ಮೇಲೆ ಅವರ ಕಣ್ಣು ಎಂದಿಗೂ ಇರಲಿಲ್ಲ. ಅವರೇ ಈ ಪ್ರಸ್ತಾಪವನ್ನು ಒಮ್ಮೆ ಅಲ್ಲ ಎರಡು ಬಾರಿ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.

“ಎನ್‌ಟಿಆರ್‌ ನಂತರದಲ್ಲಿ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮೊದಲ ಮುಖ್ಯಮಂತ್ರಿಯಾಗಿಯೂ ಕೆಸಿಆರ್‌ ಹೊಮ್ಮುತ್ತಾರೆ. ರಾಜಕೀಯ ಒತ್ತಡಗಳಿಂದಾಗಿ ದಕ್ಷಿಣ ಭಾರತದ ರಾಜಕಾರಣಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎನ್ನುತ್ತಾರೆ ಪವನ್‌.

ಪಕ್ಷದ ಹೆಸರು ಇನ್ನೂ ಪರಿಗಣನೆಯಲ್ಲಿದೆ. ಇನ್ನೂ ಅಂತಿಮಗೊಂಡಿಲ್ಲ ಎಂದು ಟಿಆರ್‌ಎಸ್‌ನ ಉನ್ನತ ಮೂಲಗಳು ಹೇಳುತ್ತವೆ. ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿ ಸಭೆಯ ಮೊದಲು ಅದನ್ನು ಅಧಿಕೃತಗೊಳಿಸಲು ಪಕ್ಷವು ಯೋಜಿಸಿದೆ ಎಂದು ಮೂಲವು ಬಹಿರಂಗಪಡಿಸಿದೆ.

‘ನವ ಭಾರತ್ ಪಕ್ಷ’, ‘ಜೈ ಭಾರತ್‌’ ಮತ್ತು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರುಗಳು ಪರಿಗಣನೆಯಲ್ಲಿವೆ ಎನ್ನಲಾಗುತ್ತಿದೆ. ಹೆಸರನ್ನು ಬದಲಾಯಿಸಬೇಕಾಗಿದ್ದರೂ, ಪಕ್ಷದ ಧ್ವಜ ಮತ್ತು ಅದರ ಟ್ರೇಡ್‌ಮಾರ್ಕ್ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳಲಾಗುತ್ತಿದೆ. ಪಕ್ಷದ ಧ್ವಜದಲ್ಲಿರುವ ತೆಲಂಗಾಣ ನಕ್ಷೆಯನ್ನು ಭಾರತೀಯ ಧ್ವಜ ಅಥವಾ ಭಾರತ ಮಾತೆಯ ಚಿತ್ರ ಅಥವಾ ಎರಡರ ಸಂಯೋಜನೆಯೊಂದಿಗೆ ಬದಲಾಯಿಸಬಹುದು ಎನ್ನಲಾಗುತ್ತಿದೆ.

ಕೆಸಿಆರ್ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶಿಸುವುದು ವಾಸ್ತವವಾಗಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದೆ ಎಂದು ಹೆಸರು ಹೇಳಲಿಚ್ಛಿಸದ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ರಾಜ್ಯದ ನಾಯಕ ತನ್ನನ್ನು ತಾನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಂಡಾಗ, ಅದು ಮೂಲತಃ ರಾಜ್ಯದ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಒಬ್ಬ ರಾಜ್ಯದ ನಾಯಕನಿಗೆ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿವೆ ಮತ್ತು ತೆಲಂಗಾಣ ಹೆಮ್ಮೆಯನ್ನು ಸ್ವಾಗತಿಸಿ ಎಂದು ಕೆಸಿಆರ್ ಅವರು ತೆಲಂಗಾಣ ಜನತೆಗೆ ಹೇಳಲು ಬಯಸುತ್ತಿದ್ದಾರೆ. ಇದು ರಾಜ್ಯದ ಚುನಾವಣೆಗೆ ಸಹಾಯ ಮಾಡುತ್ತದೆ ಎಂದು ಕೆಸಿಆರ್‌ ನಂಬಿದ್ದಾರೆ” ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇದನ್ನೂ ಓದಿರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಕೆಸಿಆರ್ ಅವರು ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನೈಜ ಯೋಜನೆಯನ್ನು ಹೊಂದಿದ್ದಾರೆ ಎಂದು ತಂತ್ರಜ್ಞರು ನಂಬುವುದಿಲ್ಲ. 2014ರಲ್ಲಿ ಜಯಲಲಿತಾ ಅವರು ರಾಷ್ಟ್ರೀಯ ನಾಯಕಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು. ಇದು ಅವರ ಇಮೇಜ್ ಅನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿತು.

ತನ್ನನ್ನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳುವ ಮೂಲಕ ಕೆಸಿಆರ್ ಬಿಜೆಪಿಯನ್ನು ತನ್ನ ಪರಮ ಶತ್ರುವೆಂಬಂತೆ ಬಿಂಬಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಕಳೆದೆರಡು ಅವಧಿಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದ್ದರಿಂದ ಕಾಂಗ್ರೆಸ್‌ನವರನ್ನು ಟೀಕಿಸಿದರೆ ಪ್ರಯೋಜನವಿಲ್ಲ. ತನ್ನನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿಕೊಳ್ಳುವ ಮೂಲಕ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ತಮ್ಮ ದಾಳಿಯನ್ನು ಕೆಸಿಆರ್‌ ಸಮರ್ಥಿಸಿಕೊಳ್ಳಬಹುದು. ಬಿಜೆಪಿಯವರನ್ನು ಪ್ರಾಥಮಿಕ ಶತ್ರುವಾಗಿ ಎದುರು ನಿಲ್ಲಿಸಬಹುದು ಎಂಬ ತಂತ್ರಗಾರಿಕೆ ಇಲ್ಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...