Homeಕರ್ನಾಟಕಕೆಇಎ ಪರೀಕ್ಷಾ ಅವ್ಯವಹಾರ: ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಪರಾರಿ

ಕೆಇಎ ಪರೀಕ್ಷಾ ಅವ್ಯವಹಾರ: ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಪರಾರಿ

- Advertisement -
- Advertisement -

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರೀಕ್ಷಾ ಅವ್ಯವಹಾರದ ಪ್ರಮುಖ ಆರೋಪಿ, ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಸೋಮವಾರ ಕಲಬುರಗಿ ನಗರದ ವಸತಿ ಸಮಚ್ಚಯವೊಂದರಿಂದ ಪರಾರಿಯಾಗಿದ್ದಾನೆ.

ಅಭ್ಯರ್ಥಿಗಳಿಗೆ ಬ್ಲೂಟೂತ್ ಸಾಧನವನ್ನು ಬಳಸಿಕೊಂಡು ಉತ್ತರಗಳನ್ನು ಬರೆಯಲು ಸಹಾಯ ಮಾಡಿದ ಆರೋಪ ಈತನ ಮೇಲಿದೆ. ಪಾಟೀಲ್ ಮನೆಯೊಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಸುಳಿವು ಸಿಕ್ಕ ನಂತರ ಪೊಲೀಸ್ ಅಧಿಕಾರಿಗಳು ಜೇವರ್ಗಿ ರಸ್ತೆಯಲ್ಲಿರುವ ವಸತಿ ಬಡಾವಣೆಗೆ ತೆರಳಿದ್ದರು. ಪೊಲೀಸರು ಬರುತ್ತಿರುವುದನ್ನು ಗಮನಿಸಿದ ಆರ್.ಡಿ. ಪಾಟೀಲ್ ವಸತಿ ಸಮುಚ್ಚಯದ ಕಾಂಪೌಂಡ್ ಮೇಲಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಅ.28ರಂದು ಕೆಇಎ ನೇಮಕಾತಿ ಪರೀಕ್ಷೆ ನಡೆಯಿತು. ಅಫಜಲಪುರ, ಕಲಬುರಗಿ ನಗರದ ಕೆಲವು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ಬ್ಲೂಟೂತ್ ಡಿವೈಸ್ ಬಳಸಲು ಯತ್ನಿಸಿ ಬಂಧಿತರಾಗಿದ್ದಾರೆ. ಈ ಅಭ್ಯರ್ಥಿಗಳಿಗೆ ಬ್ಲೂಟೂತ್ ಪೂರೈಸಲು ಆರ್.ಡಿ. ಪಾಟೀಲ್‌ ಹಣ ಪಡೆದು ಡೀಲ್ ಮಾಡಿಕೊಂಡಿದ್ದ ಎಂಬ ಆರೋಪ ಇದೆ. ಬ್ಲೂಟೂತ್ ಪ್ರಕರಣ ಹೊರಬರುತ್ತಿದ್ದಂತೆ ಆರ್‌.ಡಿ. ಪಾಟೀಲ್‌ ತಲೆಮರೆಸಿಕೊಂಡಿದ್ದ.

ನ.19ರಂದು ನಡೆಯುವ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆಗೂ ಅಭ್ಯರ್ಥಿಗಳೊಂದಿಗೆ ಆರ್.ಡಿ.ಪಾಟೀಲ್‌ ಒಪ್ಪಂದ ಮಾಡಿಕೊಂಡಿದ್ದ ಎನ್ನಲಾಗಿದೆ. ಅಭ್ಯರ್ಥಿಗಳಿಗೆ ಬ್ಲೂಟೂತ್ ವ್ಯವಸ್ಥೆ ಮಾಡಿಕೊಡಲು ಕಲಬುರಗಿ ನಗರಕ್ಕೆ ಬಂದು ವಸತಿ ಸಮುಚ್ಚಯ ಒಂದರಲ್ಲಿ ತಂಗಿದ್ದ. ಖಚಿತ ಮಾಹಿತಿ ತಿಳಿದು ಪೊಲೀಸರು ವಸತಿ ಸಮುಚ್ಚಯಕ್ಕೆ ಬರುತ್ತಿದ್ದಂತೆ ಆರ್.ಡಿ. ಪಾಟೀಲ್‌ ಅಲ್ಲಿಂದ ಪರಾರಿ‌ಯಾಗಿದ್ದಾನೆ.

ವಸತಿ ಸಮುಚ್ಚಯ ಹಿಂಭಾಗದ ಕಾಂಪೌಂಡ್ ಗೇಟ್ ಹತ್ತಿ ಇಳಿಯುವಾಗ ಕಾಲಿನಿಂದ ಈತನ ಬೂಟ್ ಕಳಚಿ ಬಿದ್ದಿದೆ. ಬೂಟ್ ಎತ್ತಿಕೊಡುವಂತೆ ಅಲ್ಲಿಯೇ ಇದ್ದ ಮಹಿಳೆಯೊಬ್ಬರಿಗೆ ಕೇಳಿದ್ದಾನೆ. ಮಹಿಳೆ ಇದಕ್ಕೆ ಸ್ಪಂದಿಸಿಲ್ಲ. ಬಳಿಕ ಮತ್ತೊಬ್ಬ ಮಹಿಳೆ ಬರುತ್ತಿದ್ದಂತೆ ಆರ್.ಡಿ. ಪಾಟೀಲ್‌ ಸ್ಥಳದಿಂದ ಪರಾರಿಯಾಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ಒಂದು ವಾರದಿಂದ ಆರ್.ಡಿ.ಪಾಟೀಲ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈಗಾಗಲೇ 20 ಆರೋಪಿಗಳ ಬಂಧನವಾಗಿದೆ. ಆರ್‌.ಡಿ. ಪಾಟೀಲ್‌ ಬಗ್ಗೆ ಖಚಿತ ಮಾಹಿತಿ ಇದ್ದರೂ ಅಧಿಕಾರಿಗಳು ಕರ್ತವ್ಯದಲ್ಲಿ ಲೋಪ ಎಸಗಿರವುದು ಕಂಡುಬಂದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...