Homeಕರ್ನಾಟಕKEA ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಮಹಾರಾಷ್ಟ್ರದಲ್ಲಿ ಅರೆಸ್ಟ್

KEA ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಮಹಾರಾಷ್ಟ್ರದಲ್ಲಿ ಅರೆಸ್ಟ್

- Advertisement -
- Advertisement -

ಕೆಇಎ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಆರ್.ಡಿ.ಪಾಟೀಲನನ್ನು ಮಹಾರಾಷ್ಟ್ರದ ಅಕ್ಕಲಕೋಟ ಬಳಿ ಕಲಬುರಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ತಲೆಮರೆಸಿಕೊಂಡಿದ್ದನು. ಶುಕ್ರವಾರ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಿಂದ ಕಲಬುರಗಿಗೆ ಬರುತ್ತಿರುವ ವೇಳೆ ಪೊಲೀಸರು ಬಂಧಿಸಿದರು. ಆರೋಪಿ ಸಂಬಂಧಿಕರ ಮನೆಯಿಂದ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಿದ್ದ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗಡಿಯಲ್ಲಿಯೇ ತೀವ್ರ ನಿಗಾ ಇಟ್ಟಿದ್ದರು.

ಇತ್ತೀಚೆಗೆ ಆರೋಪಿ ಆರ್‌.ಡಿ ಪಾಟೀಲ್‌ ಕಲಬುರಗಿಯ ವರ್ಧಾ ನಗರದಲ್ಲಿರುವ ಫ್ಲಾಟ್ ಒಂದರಲ್ಲಿ ಅಡಗಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ್ದರು. ಆದರೆ, ಪೊಲೀಸರು ಬರುತ್ತಿದ್ದಂತೆ ಆತ ಫ್ಲಾಟ್ ನ ಕಾಂಪೌಂಡ್ ಮೇಲಿಂದ ಹಾರಿ ಪರಾರಿಯಾಗಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಆನಂತರ ಕಲಬುರಗಿ ನಗರ ಪೊಲೀಸ್ ಕಮಿಷನರ್ ಚೇತನ್ ಆರ್. ಅವರು ಡಿಸಿಪಿ ಕನಿಕಾ ಸಿಕ್ರಿವಾಲ್ ನೇತೃತ್ವದಲ್ಲಿ ಐದು ತನಿಖಾ ತಂಡಗಳನ್ನು ರಚಿಸಿದ್ದರು. ಮತ್ತೊಂದೆಡೆ ಎಸ್ಪಿ ಅಡ್ಡರು ಶ್ರೀನಿವಾಸಲು ಅವರು ಡಿವೈಎಸ್ಪಿ ನೇತೃತ್ವದಲ್ಲಿ ಹಲವು ತಂಡಗಳನ್ನು ರಚಿಸಿದ್ದರು. ಅಂತಿಮವಾಗಿ ಕಲಬುರಗಿಯ ಎಸಿಪಿ ಭೂತೇಗೌಡ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎಂದು ಗೊತ್ತಾಗಿದೆ.

ಸಧ್ಯ ಬಂಧನವಾಗಿರುವ ಆರೋಪಿ ಆರ್‌.ಡಿ. ಪಾಟೀಲನನ್ನು ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಗಳಿವೆ.

ಸಂಬಂಧಿಕರ ಮನೆಯಲ್ಲಿದ್ದ ಆರೋಪಿಯು ಅಲ್ಲಿಂದಲೇ ಕಲಬುರಗಿಯಲ್ಲಿರುವ ಕರ್ನಾಟಕ ಹೈಕೋರ್ಟ್ ಪೀಠಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದನು. 10ರಂದು ಆತನ ಜಾಮೀನು ಅರ್ಜಿಯನ್ನು ವಿಚಾರಣೆಗೊಳಪಡಿಸಿದ್ದ ಪೀಠ, ವಿಚಾರಣೆಯನ್ನು ಮುಂದೂಡಿತ್ತು.

ಇದನ್ನೂ ಓದಿ: 545 ಪಿಎಸ್‌ಐ ನೇಮಕಾತಿ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...