Homeಮುಖಪುಟರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

’ವ್ಯವಸ್ಥೆ ವಿಫಲವಾಗಿದೆ, ಆದ್ದರಿಂದ ಜನ್ ಕಿ ಬಾತ್ ಮಾಡುವುದು ಮುಖ್ಯವಾಗಿದೆ’- ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳು ದಾಖಲೆಯ ಹೆಚ್ಚಳ ಕಾಣುತ್ತಿದೆ. ತೀವ್ರ ಆಮ್ಲಜನಕದ ಬಿಕ್ಕಟ್ಟಿಗೆ ದೇಶ ಒಳಗಾಗಿದೆ. ಇವುಗಳಿಗೆ ಪರಿಹಾರ ಒದಗಿಸಲು ವ್ಯವಸ್ಥೆಯು ವಿಫಲವಾಗಿರುವ ಕಾರಣ ರಾಜಕೀಯ ಕೆಲಸ ಬಿಟ್ಟು ಸಾರ್ವಜನಿಕರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ರಾಹುಲ್ ಗಾಂಧಿ, ’ವ್ಯವಸ್ಥೆಯು ವಿಫಲವಾಗಿದೆ, ಆದ್ದರಿಂದ ಜನ್ ಕಿ ಬಾತ್ ಮಾಡುವುದು ಮುಖ್ಯವಾಗಿದೆ” ಎಂದು, ಪ್ರಧಾನಿಯವರ ಮನ್‌ ಕಿ ಬಾತ್ ಅನ್ನು ಟೀಕಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,767 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದಾಖಲೆಯ 3,49,691 ಹೊಸ ಕೊರೊನಾ ಸೋಂಕು ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

 

“ವ್ಯವಸ್ಥೆ ವಿಫಲವಾಗಿದೆ. ಜನ್ ಕಿ ಬಾತ್ ಮಾಡುವುದು ಮುಖ್ಯವಾಗಿದೆ. ಈ ಬಿಕ್ಕಟ್ಟಿನಲ್ಲಿ, ದೇಶಕ್ಕೆ ಜವಾಬ್ದಾರಿಯುತ ನಾಗರಿಕರು ಬೇಕಾಗಿದ್ದಾರೆ. ಎಲ್ಲಾ ರಾಜಕೀಯ ಕೆಲಸಗಳನ್ನು ತೊರೆದು, ಸಾರ್ವಜನಿಕರಿಗೆ ಎಲ್ಲಾ ಸಹಾಯವನ್ನು ನೀಡಿ, ನಮ್ಮ ದೇಶದ ಜನರ ನೋವನ್ನು ಕಡಿಮೆ ಮಾಡಿ ಎಂದು ನನ್ನ ಕಾಂಗ್ರೆಸ್ ಸಹೋದ್ಯೋಗಿಗಳಿಗೆ ವಿನಂತಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ಇದು ಕಾಂಗ್ರೆಸ್ ಕುಟುಂಬದ ಧರ್ಮ” ತಮ್ಮ ಟ್ವೀಟ್‌ನಲ್ಲಿ ಸೇರಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇನ್ನೂ ಮೂರು ಹಂತಗಳ ಚುನಾವಣೆ ಇರುವಾಗಲೇ  ಕೊರೊನಾ ಕಾರಣದಿಂದ ಏಪ್ರಿಲ್ 18 ರಂದು, ರಾಹುಲ್ ಗಾಂಧಿ ಅವರು ಪಶ್ಚಿಮ ಬಂಗಾಳದಲ್ಲಿ ನಡೆಯಲಿದ್ದ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ರದ್ದುಗೊಳಿಸಿದ್ದರು.

“ಕೊರೊನಾ ಪರಿಸ್ಥಿತಿಯ ದೃಷ್ಟಿಯಿಂದ, ನಾನು ಪಶ್ಚಿಮ ಬಂಗಾಳದಲ್ಲಿ ನನ್ನ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸುತ್ತಿದ್ದೇನೆ. ಪ್ರಸ್ತುತ ಸಂದರ್ಭಗಳಲ್ಲಿ ದೊಡ್ಡ ಸಾರ್ವಜನಿಕ ರ್‍ಯಾಲಿಗಳನ್ನು ನಡೆಸುವ ಪರಿಣಾಮಗಳ ಬಗ್ಗೆ ಆಳವಾಗಿ ಯೋಚಿಸುವಂತೆ ನಾನು ಎಲ್ಲಾ ರಾಜಕೀಯ ಮುಖಂಡರಿಗೆ ಸಲಹೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಕುರಿತ ಟ್ವೀಟ್‌ಗಳನ್ನು ಅಳಿಸುವಂತೆ ಮೋದಿ ಸರ್ಕಾರದ ಒತ್ತಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...