Homeಮುಖಪುಟಸುಮ್ಮನಿರಿ, ಇಲ್ಲದಿದ್ದರೆ ಇಡಿ ನಿಮ್ಮ ಮನೆಗೆ ಬರುತ್ತದೆ: ಸದನದಲ್ಲಿ ಬೆದರಿಕೆಯೊಡ್ಡಿದ ಕೇಂದ್ರ ಸಚಿವೆ!

ಸುಮ್ಮನಿರಿ, ಇಲ್ಲದಿದ್ದರೆ ಇಡಿ ನಿಮ್ಮ ಮನೆಗೆ ಬರುತ್ತದೆ: ಸದನದಲ್ಲಿ ಬೆದರಿಕೆಯೊಡ್ಡಿದ ಕೇಂದ್ರ ಸಚಿವೆ!

- Advertisement -
- Advertisement -

“ಸುಮ್ಮನಿರಿ, ಇಲ್ಲದಿದ್ದರೆ ಜಾರಿ ನಿರ್ದೇಶನಾಲಯ (ಇಡಿ) ನಿಮ್ಮ ಮನೆಗೆ ಬರುತ್ತದೆ” ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ಸದನದಲ್ಲಿ ವಿರೋಧ ಪಕ್ಷದ ಸಂಸದರಿಗೆ ಬೆದರಿಕೆಯೊಡ್ಡಿದ ಘಟನೆ ಗುರುವಾರ ನಡೆದಿದೆ.

ಗುರುವಾರ ಲೋಕಸಭಾ ಸದನದಲ್ಲಿ ದೆಹಲಿ ಸೇವೆಗಳ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ತಮ್ಮ ಭಾಷಣಕ್ಕೆ ಅಡ್ಡಿಪಡಿಸುವುದನ್ನು ನಿಲ್ಲಿಸುವಂತೆ ಹೇಳುವ ವೇಳೆ ವಿರೋಧ ಪಕ್ಷದ ಸಂಸದರಿಗೆ ಅವರು ಇಡಿ ಬೆದರಿಕೆ ತೋರಿಸಿದ್ದಾರೆ.

“ನಿಮ್ಮ ಮನೆಗೆ ಇಡಿ ಬರದೆ ಇರಲು ಒಂದು ನಿಮಿಷ ಸುಮ್ಮನಿರಿ” ಎಂದು ವಿಪಕ್ಷಗಳ ಸಂಸದರಿಗೆ ಹೇಳಿದ್ದಾರೆ. ಈ ವೇಳೆ ಅವರ ಹೇಳಿಕೆಗೆ ಆಕ್ಷೇಪಣೆಗಳು ವ್ಯಕ್ತವಾದಾಗ ತಮಾಷೆಗಾಗಿ ಈ ಹೇಳಿಕೆ ನೀಡಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

ಸಚಿವೆ ಲೇಖಿ ಅವರು ಕೇಂದ್ರ ಸರ್ಕಾರ ಮಂಡಿಸಿರುವ ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಟೀಕಿಸಿದ ಅವರು, ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯ ನಾಲ್ಕನೇ ಒಂದು ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಾಗಿದ್ದು, ದೆಹಲಿ ಒಂದು ಸಂಪೂರ್ಣ ರಾಜ್ಯವಲ್ಲ ಎಂದು ಹೇಳಿದರು.

ವಿರೋಧ ಪಕ್ಷಗಳು ಇಡಿ, ಸಿಬಿಐ ರೀತಿಯ ಸ್ವತಂತ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಂಡು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದೆ. ವಿರೋಧ ಪಕ್ಷಗಳ ಮುಖಂಡರನ್ನು ಬಗ್ಗು ಬಡಿಯಲು ಆ ಸಂಸ್ಥೆಗಳನ್ನು ಕಾನೂನುಬಾಹಿರವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿವೆ. ಇದೇ ಸಂದರ್ಭದಲ್ಲಿ ಆಡಳಿತ ಪಕ್ಷದ ಸಚಿವೆಯೊಬ್ಬರು ನಿಮ್ಮ ಮನಗೆ ಇಡಿ ಕಳಿಸುತ್ತೇವೆ ಎಂದು ಬೆದರಿಕೆ ಹಾಕುವ ಮೂಲಕ ವಿಪಕ್ಷಗಳ ಆರೋಪ ನಿಜ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ; ನನ್ನ ವಿರುದ್ಧ ಸಿಬಿಐ, ಇಡಿ ಸಂಸ್ಥೆಗಳ ಸಂಪೂರ್ಣ ಅಧಿಕಾರ ಬಳಕೆ: ಕೇಂದ್ರದ ವಿರುದ್ಧ ದೆಹಲಿ ಡಿಸಿಎಂ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...