ತೆಲಂಗಾಣದಲ್ಲಿ ಮಹಿಳಾ ಪಶುವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಕುರಿತು ಪ್ರತಿಕ್ರಿಯಿಸಿರುವ ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ಅತ್ಯಾಚಾರ ಆರೋಪಿಗಳನ್ನು ಶಾಶ್ವತವಾಗಿ ಜೈಲಿನಲ್ಲಿಡಿ ಎಂದಿದ್ದಾರೆ.
ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ಈ ವಿಷಯಗಳನ್ನು ನಾವು ಪ್ರತಿದಿನ ಕೇಳುತ್ತಿದ್ದೇವೆ. ನನ್ನ ಸಲಹೆಯೆಂದರೆ ಅಪರಾಧಿಗಳನ್ನು ಜೈಲಿನಲ್ಲಿ ಶಾಶ್ವತವಾಗಿ ಇಡುವುದು, ಒಮ್ಮೆ ಅವರು ಜೈಲಿಗೆ ಹೋದ ನಂತರ ಅವರನ್ನು ಬಿಡುಗಡೆ ಮಾಡಬಾರದು ಎಂದಿದ್ದಾರೆ.
ಇನ್ನೊಂದೆಡೆ ಮಹಿಳೆಯರ ಮೇಲಿನ ಲೈಂಗಿಕ ಅಪರಾಧಗಳ ಕುರಿತು ಉಪವಾಸ ಸತ್ಯಾಗ್ರಹ ನಡೆಸಲು ಕುರಿತು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ತೀರ್ಮಾನಿಸಿದ್ದಾರೆ.
ಉಪವಾಸ ಸತ್ಯಾಗ್ರಹ ನಡೆಸಲು ನಮಗೆ ಅವಕಾಶ ನೀಡದಂತೆ ಮೇಲಿನ ಆದೇಶಗಳಿವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ನಾನು ಅಪರಾಧಿಯಲ್ಲ, ದೆಹಲಿ ಪೊಲೀಸರು ಸಹಕರಿಸದಿರುವುದು ದುರದೃಷ್ಟಕರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಉದ್ದೇಶಿಸಿರುವ ಅವರು ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆದಿದ್ದು ಅತ್ಯಾಚಾರ ಆರೋಪಿಗಳನ್ನು ಆರು ತಿಂಗಳೊಳಗೆ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.


